ಸಾಂದರ್ಭಿಕ ಚಿತ್ರ 
ದೇಶ

ಮಹಾರಾಷ್ಟ್ರ ಪೊಲೀಸರ ಕಾರ್ಯಾಚರಣೆ; 9 ಕಾಶ್ಮೀರಿಗಳ ಬಂಧನ, 9 ರೈಫಲ್‌ ವಶ

ದಾಳಿ ವೇಳೆ ಒಂಬತ್ತು 12-ಬೋರ್ ರೈಫಲ್‌ಗಳು ಮತ್ತು 58 ಬುಲೆಟ್‌ಗಳೊಂದಿಗೆ ಒಂಬತ್ತು ಜನರನ್ನು ಅಹಲ್ಯಾನಗರದಲ್ಲಿ ಬಂಧಿಸಲಾಗಿದೆ.

ಅಹಲ್ಯಾನಗರ: ಮಹಾರಾಷ್ಟ್ರದ ಅಹಲ್ಯಾನಗರ (ಹಿಂದಿನ ಅಹ್ಮದ್‌ನಗರ) ಪೊಲೀಸರು ಮತ್ತು ಮಿಲಿಟರಿ ಗುಪ್ತಚರ, ಸದರ್ನ್ ಕಮಾಂಡ್ ಜಂಟಿ ಕಾರ್ಯಾಚರಣೆಯಲ್ಲಿ ಒಂಬತ್ತು ಕಾಶ್ಮೀರಿಗಳನ್ನು ಬಂಧಿಸಲಾಗಿದ್ದು, ಒಂಬತ್ತು ರೈಫಲ್‌ಗಳು, 58 ಜೀವಂತ ಕಾಟ್ರಿಡ್ಜ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರದಿಂದ ಬಂದಿರುವ ಕೆಲವು ವ್ಯಕ್ತಿಗಳು ಮಹಾರಾಷ್ಟ್ರದ ನಗರಗಳಲ್ಲಿ ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದು, ನಕಲಿ ಪರವಾನಗಿಗಳೊಂದಿಗೆ ಶಸ್ತ್ರಾಸ್ತ್ರಗಳನ್ನು ಸಾಗಿಸುತ್ತಿದ್ದಾರೆ ಎಂಬ ಖಚಿತ ಮಾಹಿತಿಯ ನಂತರ ತನಿಖೆ ಆರಂಭಿಸಲಾಯಿತು ಎಂದು ಅಧಿಕಾರಿ ತಿಳಿಸಿದ್ದಾರೆ.

ತನಿಖೆಯ ಭಾಗವಾಗಿ, ಈ ಶಸ್ತ್ರಾಸ್ತ್ರ ಪರವಾನಗಿಗಳ ಸತ್ಯಾಸತ್ಯತೆಯನ್ನು ಪರಿಶೀಲಿಸಲು ಜಮ್ಮು-ಕಾಶ್ಮೀರ ಅಧಿಕಾರಿಗಳಿಗೆ ಪತ್ರಗಳನ್ನು ಕಳುಹಿಸಲಾಗಿತ್ತು. ಇವುಗಳು ಅಸಲಿ ಅಲ್ಲ ಎಂಬುದು ದೃಢಪಟ್ಟ ನಂತರ ದಾಳಿ ನಡೆಸಲಾಯಿತು ಎಂದು ಅವರು ಹೇಳಿದರು.

ದಾಳಿ ವೇಳೆ ಒಂಬತ್ತು 12-ಬೋರ್ ರೈಫಲ್‌ಗಳು ಮತ್ತು 58 ಬುಲೆಟ್‌ಗಳೊಂದಿಗೆ ಒಂಬತ್ತು ಜನರನ್ನು ಅಹಲ್ಯಾನಗರದಲ್ಲಿ ಬಂಧಿಸಲಾಗಿದೆ. ಬಂಧಿತರೆಲ್ಲರೂ ಜಮ್ಮುವಿನ ರಾಜೌರಿ ಮೂಲದವರು ಎಂದು ಅವರು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್

Cricket: ಪಂತ್‌ರಂತೆ ಆಡಲು ಪ್ರಯತ್ನಿಸಲ್ಲ, ಅವರ ಜೊತೆ ಆಡೋದು ದೊಡ್ಡ ಅನುಭವ: ಫಿಟ್ನೆಸ್ ಅಪ್ಡೇಟ್ ಕೊಟ್ಟ Dhruv Jurel

ಜೈ ಜವಾನ್, ಜೈ ಕಿಸಾನ್: ಐತಿಹಾಸಿಕ ಶತಕದ ಬಳಿಕ ಹೊಸ ಟ್ಯಾಟೂ ರಿವೀಲ್ ಮಾಡಿದ Dhruv Jurel