ಸಿಎಂ ಸಿದ್ದರಾಮಯ್ಯ, ಪ್ರಧಾನಿ ನರೇಂದ್ರ ಮೋದಿ  
ದೇಶ

ರಾಜ್ಯ ಸರ್ಕಾರದ ವಿರುದ್ಧ ಮಾಡಿರುವ ಆರೋಪವನ್ನು ಪ್ರಧಾನಿ ಮೋದಿ ಸಾಬೀತುಪಡಿಸಿದರೆ ರಾಜಕೀಯದಿಂದ ನಿವೃತ್ತಿ: ಸಿಎಂ ಸಿದ್ದರಾಮಯ್ಯ

ನವೆಂಬರ್ 20 ರಂದು ನಡೆಯಲಿರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಪೂರ್ವಭಾವಿಯಾಗಿ ಸಿಎಂ ಸಿದ್ದರಾಮಯ್ಯ ಸೊಲ್ಲಾಪುರದಲ್ಲಿ ಶನಿವಾರ ಮಹಾ ವಿಕಾಸ ಅಘಾಡಿ ಪ್ರಚಾರ ನಡೆಸಿದರು.

ಸೊಲ್ಲಾಪುರ: ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಜನರನ್ನು ಲೂಟಿ ಮಾಡಿ ಮಹಾರಾಷ್ಟ್ರದಲ್ಲಿ ಚುನಾವಣಾ ಪ್ರಚಾರಕ್ಕೆ ಹಣವನ್ನು ಬಳಸಿದೆ ಎಂಬ ಪ್ರಧಾನಿ ನರೇಂದ್ರ ಮೋದಿ ಆರೋಪಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.

ಮಹಾರಾಷ್ಟ್ರದ ಸೊಲ್ಲಾಪುರದಲ್ಲಿ ನಿನ್ನೆ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಪ್ರಧಾನಿ ಮೋದಿ ತಮ್ಮ ಮಾತುಗಳನ್ನು ಸಾಬೀತುಪಡಿಸಿದರೆ ರಾಜಕೀಯದಿಂದ ನಿವೃತ್ತಿ ಪಡೆಯುವುದಾಗಿ ಹೇಳಿದರು.

ನವೆಂಬರ್ 20 ರಂದು ನಡೆಯಲಿರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಪೂರ್ವಭಾವಿಯಾಗಿ ಸಿಎಂ ಸಿದ್ದರಾಮಯ್ಯ ಸೊಲ್ಲಾಪುರದಲ್ಲಿ ಶನಿವಾರ ಮಹಾ ವಿಕಾಸ ಅಘಾಡಿ ಪ್ರಚಾರ ನಡೆಸಿದರು. ಪ್ರಧಾನಿ ಹೇಳಿಕೆಯನ್ನು "ಕಟ್ಟಾ ಸುಳ್ಳು" ಎಂದು ಕರೆದ ಸಿದ್ದರಾಮಯ್ಯ ಸವಾಲನ್ನು ಸ್ವೀಕರಿಸುವಂತೆ ಪ್ರಧಾನಿಗೆ ಪಂಥಾಹ್ವಾನ ನೀಡಿದರು. ಪ್ರಧಾನಿ ನರೇಂದ್ರ ಮೋದಿ ಪ್ರಚಾರಕ್ಕೆ ಬಂದು ಹಸಿ ಸುಳ್ಳು ಹೇಳಿಬಿಟ್ಟು ಹೋಗುತ್ತಾರೆ. ಅವರು ತಮ್ಮ ಆರೋಪಗಳನ್ನು ಸಾಬೀತುಪಡಿಸಿದರೆ, ನಾನು ರಾಜಕೀಯದಿಂದ ನಿವೃತ್ತಿ ಘೋಷಿಸುತ್ತೇನೆ, ಮೋದಿ ನನ್ನ ಸವಾಲನ್ನು ಏಕೆ ಸ್ವೀಕರಿಸುವುದಿಲ್ಲ ಏಕೆ ಹೆದರುತ್ತಾರೆ ಎಂದು ಕೇಳಿದರು.

ಕಲ್ಯಾಣ ಖಾತರಿಗಳು ಆರ್ಥಿಕತೆಯನ್ನು ಹಾಳುಮಾಡುತ್ತವೆ ಎಂದು ಪ್ರಧಾನಿ ಮೋದಿ ಹೇಳಿಕೊಳ್ಳುತ್ತಾರೆ, ಆದರೂ ಬಿಜೆಪಿ ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶದಲ್ಲಿ ಚುನಾವಣೆಯ ಸಮಯದಲ್ಲಿ ಇದೇ ರೀತಿಯ ಭರವಸೆಗಳನ್ನು ಘೋಷಿಸಿದೆ. ಪ್ರಧಾನಿ ಏಕೆ ಇಂತಹ ಹಸಿ ಸುಳ್ಳುಗಳನ್ನು ಆಶ್ರಯಿಸುತ್ತಾರೆ ಮೋದಿ ಸರ್ಕಾರವು ಶ್ರೀಮಂತರ 16 ಲಕ್ಷ ಕೋಟಿ ಸಾಲವನ್ನು ಮನ್ನಾ ಮಾಡಿ, ರೈತರ ಒಂದು ರೂಪಾಯಿಯನ್ನೂ ಮನ್ನಾ ಮಾಡಲು ವಿಫಲವಾಗಿದೆ ಎಂದು ಆರೋಪಿಸಿದರು.

ಮಹಾರಾಷ್ಟ್ರದ ಬಿಜೆಪಿ ನಾಯಕರು ಮತ್ತು ಸಚಿವರು ಕರ್ನಾಟಕಕ್ಕೆ ಭೇಟಿ ನೀಡಿ ಸತ್ಯಾಂಶವನ್ನು ಪರಿಶೀಲಿಸಲಿ, ಅವರು ನನ್ನ ತಪ್ಪು ಎಂದು ಸಾಬೀತುಪಡಿಸಿದರೆ, ನಾನು ರಾಜಕೀಯದಿಂದ ನಿವೃತ್ತಿ ಹೊಂದುತ್ತೇನೆ, ಆದರೆ ನಾನು ಸರಿಯಾಗಿದ್ದರೆ, ಅವರು ಮಹಾರಾಷ್ಟ್ರದ ಜನರಲ್ಲಿ ಕ್ಷಮೆಯಾಚಿಸಿ ರಾಜಕೀಯದಿಂದ ನಿವೃತ್ತಿ ಘೋಷಿಸುತ್ತಾರೆಯೇ? ಕೇಂದ್ರದ ತೆರಿಗೆಗೆ ಕರ್ನಾಟಕ ವಾರ್ಷಿಕ 4.5 ಲಕ್ಷ ಕೋಟಿ ಕೊಡುಗೆ ನೀಡುತ್ತಿದ್ದರೂ, ಪ್ರತಿಯಾಗಿ 60,000 ಕೋಟಿ ರೂಪಾಯಿ ಮಾತ್ರ ಸ್ವೀಕರಿಸಿದೆ, ನಮ್ಮ ಸರ್ಕಾರದ ವಿರುದ್ಧ ಸುಳ್ಳು ಜಾಹೀರಾತುಗಳನ್ನು ಪ್ರಕಟಿಸಿದ್ದಕ್ಕಾಗಿ ಮಹಾರಾಷ್ಟ್ರ ಬಿಜೆಪಿ ವಿರುದ್ಧ ಪ್ರಕರಣ ದಾಖಲಿಸಲು ನಿರ್ಧರಿಸಲಾಗಿದೆ ಎಂದರು.

ಕರ್ನಾಟಕ ಸರ್ಕಾರವು ಎಲ್ಲಾ ಐದು ಭರವಸೆಗಳನ್ನು ಯಶಸ್ವಿಯಾಗಿ ಜಾರಿಗೆ ತಂದಿದೆ. ರಾಜ್ಯ ಸರ್ಕಾರದ ಶಕ್ತಿ ಯೋಜನೆಯಿಂದ ಮಹಿಳೆಯರಿಗೆ ಪ್ರಯೋಜನವಾಗಿದೆ. ಮತ್ತೊಂದು ಗೃಹ ಜ್ಯೋತಿ 1.62 ಕೋಟಿ ಕುಟುಂಬಗಳಿಗೆ ಮಾಸಿಕ 200 ಯೂನಿಟ್‌ವರೆಗೆ ಉಚಿತ ವಿದ್ಯುತ್‌ ನೀಡಿದ್ದು, ಅನ್ನ ಭಾಗ್ಯ ಯೋಜನೆಯಡಿ 1.2 ಕೋಟಿ ಕುಟುಂಬಗಳಿಗೆ ಹೆಚ್ಚುವರಿಯಾಗಿ 5 ಕೆಜಿ ಅಕ್ಕಿ ಜತೆಗೆ ತಲಾ 170 ರೂ.ಗೆ 5 ಕೆಜಿ ಉಚಿತ ಅಕ್ಕಿಯನ್ನು ನೀಡುತ್ತಿದೆ ಎಂದರು.

ಎಲ್ಲಾ ಗ್ಯಾರಂಟಿಗಳನ್ನು ಅಧಿಕಾರಕ್ಕೆ ಬಂದ ಎಂಟು ತಿಂಗಳೊಳಗೆ ಪ್ರಾರಂಭಿಸಲಾಗಿದೆ, ಗೃಹ ಲಕ್ಷ್ಮಿ ಯೋಜನೆಯಡಿಯಲ್ಲಿ, 1.22 ಕೋಟಿ ಮಹಿಳಾ ಮುಖ್ಯಸ್ಥರು ತಿಂಗಳಿಗೆ 2,000 ರೂಗಳನ್ನು ಪಡೆಯುತ್ತಿದ್ದಾರೆ, ಇದರ ಪರಿಣಾಮವಾಗಿ ವಾರ್ಷಿಕ ಸುಮಾರು 30,000 ಕೋಟಿ ರೂಪಾಯಿಗಳನ್ನು ನೇರವಾಗಿ ಮಹಿಳಾ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಗುತ್ತದೆ. ಮತ್ತೊಂದು ಯೋಜನೆ, ಯುವ ನಿಧಿ ಹಣಕಾಸು ಒದಗಿಸುತ್ತದೆ. ನಿರುದ್ಯೋಗಿ ಪದವೀಧರರು ಮತ್ತು ಡಿಪ್ಲೊಮಾ ಹೊಂದಿರುವವರಿಗೆ ನೆರವು ನೀಡಲಾಗುತ್ತಿದೆ ಎಂದರು.

ಸಿಎಂ ಸಿದ್ದರಾಮಯ್ಯ ಅವರು ಮಹಾ ವಿಕಾಸ್ ಅಘಾಡಿಗೆ ಮತ ನೀಡುವಂತೆ ಮಹಾರಾಷ್ಟ್ರದ ಜನತೆಗೆ ಮನವಿ ಮಾಡಿದರು.

ನಾನು ಮುಖ್ಯಮಂತ್ರಿಯಾಗಿದ್ದ ಮೊದಲ ಅವಧಿಯಲ್ಲಿ ಕರ್ನಾಟಕದ ರೈತರ 8,165 ಕೋಟಿ ಸಾಲವನ್ನು ಮನ್ನಾ ಮಾಡಿದ್ದೇನೆ. ಮನಮೋಹನ್ ಸಿಂಗ್ ಅವರ ನೇತೃತ್ವದಲ್ಲಿ ಭಾರತದಾದ್ಯಂತ ರೈತರ 76,000 ಕೋಟಿ ರೂಪಾಯಿ ಸಾಲವನ್ನು ಮನ್ನಾ ಮಾಡಲಾಗಿತ್ತು. ಮಹಾರಾಷ್ಟ್ರದ ಜನತೆಗೆ ಮತ ನೀಡುವಂತೆ ನಾನು ಒತ್ತಾಯಿಸುತ್ತೇನೆ. ರಾಜ್ಯದ ಅಭಿವೃದ್ಧಿ ಮತ್ತು ಆರ್ಥಿಕ ಪ್ರಗತಿಯನ್ನು ಖಚಿತಪಡಿಸಿಕೊಳ್ಳಲು ಮಹಾ ವಿಕಾಸ್ ಅಘಾಡಿ ಮಾಡುವುದರಿಂದ, ನೀವು ಉತ್ತಮವಾದ, ಹೆಚ್ಚು ಒಳಗೊಳ್ಳುವ ಭವಿಷ್ಯಕ್ಕೆ ಕೊಡುಗೆ ನೀಡುತ್ತೀರಿ ಎಂದು ಭಾವಿಸುತ್ತೇನೆ ಎಂದರು.

ಮಹಾರಾಷ್ಟ್ರವು 8.78 ಲಕ್ಷ ಕೋಟಿ ರೂಪಾಯಿ ಕೊಡುಗೆ ನೀಡಿದರೆ ಕೇವಲ 1.3 ಲಕ್ಷ ಕೋಟಿ ರೂಪಾಯಿಗಳನ್ನು ವಾಪಸ್ ಪಡೆಯುತ್ತಿದೆ ಎಂದರೆ ಕರ್ನಾಟಕಕ್ಕೆ 13 ಪೈಸೆ ಮತ್ತು ಮಹಾರಾಷ್ಟ್ರಕ್ಕೆ 15 ಪೈಸೆ ತೆರಿಗೆ ಪಾವತಿಯಾಗಿದೆ. ಮೋದಿ ಸರ್ಕಾರದ ಈ ಅನ್ಯಾಯವು ಕರ್ನಾಟಕ ಮತ್ತು ಮಹಾರಾಷ್ಟ್ರ ಎರಡಕ್ಕೂ ಅನ್ಯಾಯವಾಗಿದೆ. ಕರ್ನಾಟಕದ ಖಾತರಿಗಳು ಎಲ್ಲಾ ಜಾತಿಗಳು, ಧರ್ಮಗಳು ಮತ್ತು ಸಮುದಾಯಗಳಾದ್ಯಂತ ಜನರನ್ನು ತಲುಪಿವೆ. ಮಹಾರಾಷ್ಟ್ರವು ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಪ್ರಬಲವಾಗಿದೆ, ಮಹಾ ವಿಕಾಸ್ ಅಘಾಡಿ ಅಧಿಕಾರಕ್ಕೆ ಬಂದರೆ, ಎಲ್ಲಾ ಖಾತರಿಗಳು ಪರಿಣಾಮಕಾರಿಯಾಗಿ ಜಾರಿಗೆ ಬರುವುದರಲ್ಲಿ ಯಾವುದೇ ಸಂದೇಹವಿಲ್ಲ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT