ಜಾರ್ಖಂಡ್ ಬಿಜೆಪಿಯ ಸಾಮಾಜಿಕ ಮಾಧ್ಯಮ ಹ್ಯಾಂಡಲ್‌ಗಳಲ್ಲಿ ಪೋಸ್ಟ್ ಮಾಡಲಾದ ವೀಡಿಯೊನ ಒಂದು ದೃಶ್ಯ. ಇದರಲ್ಲಿ ಮುಸ್ಲಿಂ ಸಮುದಾಯದ ಸದಸ್ಯರು ಜೆಎಂಎಂ ಬೆಂಬಲಿಗರ ಮನೆಗೆ ಬಲವಂತವಾಗಿ ಪ್ರವೇಶಿಸುತ್ತಿದ್ದಾರೆ. (Photo| Screengrab/ X)
ದೇಶ

ಜಾರ್ಖಂಡ್ ಚುನಾವಣೆ: ನೀತಿ ಸಂಹಿತೆ ಉಲ್ಲಂಘನೆ; ಸಾಮಾಜಿಕ ಜಾಲತಾಣ ಪೋಸ್ಟ್ ತೆಗೆಯಲು ಬಿಜೆಪಿಗೆ ಆಯೋಗ ಸೂಚನೆ

ಸಾಮಾಜಿಕ ಜಾಲತಾಣದಲ್ಲಿ ಬಿಜೆಪಿ ಪ್ರಕಟಿಸಿದ್ದ ಪೋಸ್ಟ್ ನಿಂದ ನೀತಿ ಸಂಹಿತೆ ಉಲ್ಲಂಘನೆಯಾಗುತ್ತಿರುವ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಈ ಸೂಚನೆ ನೀಡಲಾಗಿದೆ.

ಜಾರ್ಖಂಡ್: ಜಾರ್ಖಂಡ್ ನಲ್ಲಿ ಬಿಜೆಪಿಗೆ ಸಾಮಾಜಿಕ ಜಾಲತಾಣ ಪೋಸ್ಟ್ ನ್ನು ತೆಗೆದುಹಾಕುವಂತೆ ಚುನಾವಣಾ ಆಯೋಗ ಸೂಚನೆ ನೀಡಿದೆ.

ಸಾಮಾಜಿಕ ಜಾಲತಾಣದಲ್ಲಿ ಬಿಜೆಪಿ ಪ್ರಕಟಿಸಿದ್ದ ಪೋಸ್ಟ್ ನಿಂದ ನೀತಿ ಸಂಹಿತೆ ಉಲ್ಲಂಘನೆಯಾಗುತ್ತಿರುವ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಈ ಸೂಚನೆ ನೀಡಲಾಗಿದೆ. "ಉಲ್ಲೇಖಿಸಿದ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳ ಖಾತೆಯಲ್ಲಿ MCC (ಮಾದರಿ ನೀತಿ ಸಂಹಿತೆ) ಯ ನಿಬಂಧನೆಗಳ ಉಲ್ಲಂಘನೆಯಾಗಿದೆ" ಇದನ್ನು ವಿವರಿಸಲು ಪಕ್ಷವನ್ನು ಕೇಳಲಾಗಿದೆ ಎಂದು ಆಯೋಗ ಹೇಳಿದೆ.

ಆಡಳಿತಾರೂಢ ಜಾರ್ಖಂಡ್ ಮುಕ್ತಿ ಮೋರ್ಚಾ ಮತ್ತು ಮಿತ್ರಪಕ್ಷ ಕಾಂಗ್ರೆಸ್ ದೂರಿನ ಹಿನ್ನೆಲೆಯಲ್ಲಿ ಚುನಾವಣಾ ಸಮಿತಿ ಈ ನಿರ್ಧಾರ ಕೈಗೊಂಡಿದೆ. ಎಕ್ಸ್ ಮತ್ತು ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಲಾದ ಬಿಜೆಪಿ ಸಂದೇಶವು "ಬಡ ಜಾರ್ಖಂಡ್ ಕಾ ದಿ ಪಾರ್ಟಿ' (ಇಡೀ ಜಾರ್ಖಂಡ್‌ನ ಪಕ್ಷ)' ಎಂಬ ಶೀರ್ಷಿಕೆಯೊಂದಿಗೆ ಕೋಮುವಾದ, ದುರುದ್ದೇಶಪೂರಿತ ಮತ್ತು ದಾರಿತಪ್ಪಿಸುವ ವೀಡಿಯೊವನ್ನು ಹೊಂದಿದೆ ಎಂದು ಎರಡು ಪಕ್ಷಗಳು ದೂರಿವೆ" ಎಂದು ಆಯೋಗ ತನ್ನ ಆದೇಶದಲ್ಲಿ ತಿಳಿಸಿದೆ.

"ದೂರುಗಳನ್ನು ಪರಿಶೀಲಿಸಿದಾಗ, ಮೇಲಿನ ಉಲ್ಲೇಖಿಸಲಾದ ಸಾಮಾಜಿಕ ಮಾಧ್ಯಮ ಪೋಸ್ಟ್ ನೀತಿ ಸಂಹಿತೆಯ ಪ್ರಾಥಮಿಕ ಉಲ್ಲಂಘನೆಯಾಗಿದೆ ಎಂದು ತೋರುತ್ತಿದೆ. ಆದ್ದರಿಂದ, ಅಸ್ತಿತ್ವದಲ್ಲಿರುವ ಕಾನೂನುಗಳು ಮತ್ತು ಕಾರ್ಯವಿಧಾನಗಳ ಪ್ರಕಾರ ತಕ್ಷಣದ ಕ್ರಮವನ್ನು ತೆಗೆದುಕೊಳ್ಳಲು ಮತ್ತು ನಂತರ ಸಂಬಂಧಿತ ಸಾಮಾಜಿಕ ಮಾಧ್ಯಮ ವೇದಿಕೆಗಳಿಗೆ ನಿರ್ದೇಶಿಸಲು ನಿರ್ದೇಶಿಸಲಾಗಿದೆ. ಐಟಿ ಕಾಯ್ದೆಯ ಸೆಕ್ಷನ್ 79(3)(ಬಿ) ಅಡಿಯಲ್ಲಿ ಜಾರ್ಖಂಡ್ ರಾಜ್ಯದಲ್ಲಿ ಗೊತ್ತುಪಡಿಸಿದ ಅಧಿಕಾರ ಉಲ್ಲೇಖಿಸಿದ ಪೋಸ್ಟ್‌ಗಳನ್ನು ತಕ್ಷಣವೇ ತೆಗೆದುಹಾಕಬೇಕೆಂದು ಸೂಚಿಸಲಾಗಿದೆ" ಎಂದು ಆಯೋಗ ಹೇಳಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಎಲ್ಲವನ್ನೂ ತಡೆಯಲು ಸಾಧ್ಯವಿಲ್ಲ': CJP ದೆಹಲಿ ಪ್ರತಿಭಟನೆಗೆ ನಿರ್ಬಂಧ ಕುರಿತು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಚಾಟಿ

ಮತಗಳ್ಳತನವೇ ಆಗಿದ್ದರೆ ಕೇರಳ Congress CM, ತಮಿಳುನಾಡು CM ಕೂಡ ಮತಗಳ್ಳರೇ: ಚೇತನ್ ಅಹಿಂಸಾ

'ಆಶ್ರಮಕ್ಕೆ ಬರಲು ಹಣ ಪಡೆದ ಕೊಹ್ಲಿ' ಆರೋಪ: ಉಲ್ಟಾ ಹೊಡೆದ Falahari Maharaj, ಕ್ಷಮೆಯಾಚನೆ! video

26 ಸೆಕೆಂಡ್ ನಲ್ಲೇ ಗ್ರೇಟ್ ಎಸ್ಕೇಪ್; ಮೃಗಾಲಯ ವೀಕ್ಷಣೆಗೆ ಬಂದ ಜೋಡಿ, ಗಂಡ ಬೈಕ್ ಪಾರ್ಕ್ ಮಾಡೋ ಗ್ಯಾಪಲ್ಲಿ 'ಲವರ್ ಜೊತೆ ಪತ್ನಿ ಪರಾರಿ'! Video ವೈರಲ್!

ಅ.10ರಂದು CJP ಪ್ರತಿಭಟನೆ ಹಿನ್ನೆಲೆ ದೆಹಲಿಗೆ ತೆರಳುವ ಹಲವು ರೈಲುಗಳು ರದ್ದು, ಪ್ರಯಾಣಿಕರಿಗೆ ಸಂಕಷ್ಟ!