ಮಣಿಪುರದ ಹಿಂಸಾಚಾರ ಪೀಡಿತ ಪ್ರದೇಶಗಳಲ್ಲಿ ಹೆಚ್ಚುವರಿ ಭದ್ರತೆ ನಿಯೋಜನೆ 
ದೇಶ

ಮಣಿಪುರ ಹಿಂಸಾಚಾರ: ಮತ್ತೆ 50 ಸಿಎಪಿಎಫ್ ಪಡೆಗಳ ನಿಯೋಜನೆ

ಜಿರಿಬಾಮ್ ಜಿಲ್ಲೆಯಲ್ಲಿ ಹಿಂಸಾಚಾರ ಭುಗಿಲೆದ್ದಿದ್ದು, ಅದು ಇತರ ಸ್ಥಳಗಳಿಗೆ ಹರಡಿದ ನಂತರ ನವೆಂಬರ್ 12 ರಂದು ಕೇಂದ್ರ ಗೃಹ ಸಚಿವಾಲಯ(MHA) 20 ಹೆಚ್ಚುವರಿ CAPF ಪಡೆಗಳನ್ನು ಮಣಿಪುರಕ್ಕೆ ರವಾನಿಸಿತ್ತು.

ಇಂಫಾಲ್: ಈಶಾನ್ಯ ರಾಜ್ಯದಲ್ಲಿ "ಸವಾಲಿನ" ಭದ್ರತೆ ಮತ್ತು ಕಾನೂನು ಸುವ್ಯವಸ್ಥೆಯನ್ನು ಗಮನದಲ್ಲಿಟ್ಟುಕೊಂಡು, ಹೆಚ್ಚುವರಿ 5,000 ಕ್ಕೂ ಹೆಚ್ಚು ಸಿಬ್ಬಂದಿಗಳನ್ನು ಒಳಗೊಂಡ 50 CAPF ತುಕಡಿಗಳನ್ನು ಮಣಿಪುರಕ್ಕೆ ಕಳುಹಿಸಲು ಕೇಂದ್ರ ನಿರ್ಧರಿಸಿದೆ ಎಂದು ಅಧಿಕೃತ ಮೂಲಗಳು ಸೋಮವಾರ ತಿಳಿಸಿವೆ.

ಜಿರಿಬಾಮ್ ಜಿಲ್ಲೆಯಲ್ಲಿ ಹಿಂಸಾಚಾರ ಭುಗಿಲೆದ್ದಿದ್ದು, ಅದು ಇತರ ಸ್ಥಳಗಳಿಗೆ ಹರಡಿದ ನಂತರ ನವೆಂಬರ್ 12 ರಂದು ಕೇಂದ್ರ ಗೃಹ ಸಚಿವಾಲಯ(MHA) 20 ಹೆಚ್ಚುವರಿ CAPF ಪಡೆಗಳನ್ನು ಮಣಿಪುರಕ್ಕೆ ರವಾನಿಸಿತ್ತು. ಸಿಆರ್‌ಪಿಎಫ್‌ನಿಂದ 15 ಮತ್ತು ಬಿಎಸ್‌ಎಫ್‌ನಿಂದ ಐದು ತುಕಡಿಗಳನ್ನು ರಾಜ್ಯಕ್ಕೆ ರವಾನಿಸಿತ್ತು.

ಈ ವಾರದೊಳಗೆ ಹೆಚ್ಚುವರಿಯಾಗಿ ಮತ್ತೆ 50 ತುಕಡಿಗಳನ್ನು ಮಣಿಪುರಕ್ಕೆ ಧಾವಿಸುವಂತೆ ಆದೇಶಿಸಲಾಗಿದೆ. 35 ತುಕಡಿಗಳನ್ನು ಕೇಂದ್ರೀಯ ಮೀಸಲು ಪೊಲೀಸ್ ಪಡೆ(ಸಿಆರ್‌ಪಿಎಫ್)ಯಿಂದ ಪಡೆಯಲಾಗುವುದು. ಉಳಿದ 15 ತುಕಡಿಗಳನ್ನು ಗಡಿ ಭದ್ರತಾ ಪಡೆ(ಬಿಎಸ್‌ಎಫ್)ಯಿಂದ ಪಡೆಯಲಾಗುವುದು ಎಂದು ಮೂಲಗಳು ಪಿಟಿಐಗೆ ತಿಳಿಸಿವೆ.

ಸಿಆರ್‌ಪಿಎಫ್ ಮಹಾನಿರ್ದೇಶಕ (ಸಿಆರ್‌ಪಿಎಫ್) ಎ ಡಿ ಸಿಂಗ್ ಮತ್ತು ಇತರ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳ (ಸಿಎಪಿಎಫ್) ಹಿರಿಯ ಅಧಿಕಾರಿಗಳು ಸಹ ರಾಜ್ಯದಲ್ಲಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೋಮವಾರ ಮಣಿಪುರದ ಭದ್ರತಾ ಪರಿಸ್ಥಿತಿಯನ್ನು ಪರಿಶೀಲಿಸಲು ಉನ್ನತ ಮಟ್ಟದ ಸಭೆ ನಡೆಸಲಿದ್ದಾರೆ ಮತ್ತು ರಾಜ್ಯದಲ್ಲಿನ "ಅಸ್ಥಿರ" ಪರಿಸ್ಥಿತಿಯನ್ನು ನಿಭಾಯಿಸಲು ಕಾರ್ಯತಂತ್ರವನ್ನು ರೂಪಿಸುವ ನಿರೀಕ್ಷೆಯಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್