ರೈತರ ಪ್ರತಿಭಟನೆ(ಸಂಗ್ರಹ ಚಿತ್ರ) ANI photos
ದೇಶ

ರೈತರ ಪ್ರತಿಭಟನೆ ಇನ್ನಷ್ಟು ಚುರುಕು: ಡಿಸೆಂಬರ್ 6 ರಂದು ದೆಹಲಿ ಚಲೋ

ಇಂದು ಚಂಡೀಗಢದಲ್ಲಿ ನಡೆದ ರೈತ ಮುಖಂಡರ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಚಂಡೀಗಢ: ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ(ಎಂಎಸ್​ಪಿ)ಗೆ ಕಾನೂನು ಖಾತರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ರೈತರು ತಮ್ಮ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲು ಡಿಸೆಂಬರ್ 6 ರಂದು ದೆಹಲಿಯತ್ತ ಮೆರವಣಿಗೆ ನಡೆಸಲಿದ್ದಾರೆ ಎಂದು ಸಂಯುಕ್ತ ಕಿಸಾನ್ ಮೋರ್ಚಾ(ರಾಜಕೀಯೇತರ) ಮತ್ತು ಕಿಸಾನ್ ಮಜ್ದೂರ್ ಮೋರ್ಚಾ ಸೋಮವಾರ ಘೋಷಿಸಿವೆ.

ಇಂದು ಚಂಡೀಗಢದಲ್ಲಿ ನಡೆದ ರೈತ ಮುಖಂಡರ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಪ್ರತಿಭಟನಾ ನಿರತ ರೈತರು ಫೆಬ್ರವರಿ 13 ರಿಂದ ಪಂಜಾಬ್ ಮತ್ತು ಹರಿಯಾಣ ನಡುವಿನ ಶಂಭು ಮತ್ತು ಖಾನೌರಿ ಗಡಿಯಲ್ಲಿ ಮೊಕ್ಕಾಂ ಹೂಡಿದ್ದಾರೆ. ಡಿಸೆಂಬರ್ 6 ರಂದು ಎಸ್‌ಕೆಎಂ(ರಾಜಕೀಯೇತರ) ಮತ್ತು ಕೆಎಂಎಂ ನೇತೃತ್ವದಲ್ಲಿ 'ದೆಹಲಿ ಚಲೋ' ನಡೆಸಲು ನಿರ್ಧರಿಸಲಾಗಿದೆ.

ಸಭೆಯ ನಂತರ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಕೆಎಂಎಂ ನಾಯಕ ಸರ್ವಾನ್ ಸಿಂಗ್ ಪಂಧೇರ್ ಅವರು, ಸುದೀರ್ಘ ಕಾಯುವಿಕೆಯ ನಂತರ ದೆಹಲಿಯತ್ತ ತೆರಳಲು ನಿರ್ಧರಿಸಿದ್ದೇವೆ. ನಾವು ಡಿಸೆಂಬರ್ 6 ರಂದು ದೆಹಲಿಯತ್ತ ಸಾಗುತ್ತೇವೆ ಎಂದು ಹೇಳಿದರು.

ಕೇಂದ್ರ ಸರ್ಕಾರ ರೈತರ ಬೇಡಿಕೆಗಳ ಕುರಿತು ಚರ್ಚಿಸಲು ರೈತರೊಂದಿಗೆ ಯಾವುದೇ ಮಾತುಕತೆ ನಡೆಸಿಲ್ಲ ಎಂದು ಪಂಧೇರ್ ಕೇಂದ್ರವನ್ನು ತರಾಟೆಗೆ ತೆಗೆದುಕೊಂಡರು.

"ನಮಗೆ ಬೇರೆ ಆಯ್ಕೆಯಿಲ್ಲ. ನಾವು ಕಳೆದ ಒಂಬತ್ತು ತಿಂಗಳಿಂದ ಶಾಂತಿಯುತವಾಗಿ ಕಾಯುತ್ತಿದ್ದೆವು. ಆದರೆ ಈಗ ನಾವು ದೆಹಲಿ ಚಲೋ ನಡೆಸುತ್ತೇವೆ" ರೈತರು ಶಂಭು ಗಡಿಯಿಂದ ಬ್ಯಾಚ್‌ಗಳಲ್ಲಿ ರಾಷ್ಟ್ರ ರಾಜಧಾನಿಯತ್ತ ಸಾಗುತ್ತಾರೆ ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್