ಚಿತ್ರದ ಪೋಸ್ಟರ್ 
ದೇಶ

ಗೋಧ್ರಾ ರೈಲು ದುರಂತ ಆಧಾರಿತ ಸಿನಿಮಾಗೆ ಮಧ್ಯಪ್ರದೇಶ ಸರ್ಕಾರ ತೆರಿಗೆ ವಿನಾಯಿತಿ ಘೋಷಣೆ

ಮುಖ್ಯಮಂತ್ರಿ ಮೋಹನ್ ಯಾದವ್ ಈ ಕುರಿತು ಘೋಷಣೆ ಮಾಡಿದ್ದು, ಸಿನಿಮಾ ವೀಕ್ಷಿಸಲು ತಾನೂ ಹೋಗುವುದಾಗಿ ಹೇಳಿದ್ದಾರೆ.

ಭೋಪಾಲ್: 2002 ರ ಗೋಧ್ರಾ ರೈಲು ದುರಂತ ಘಟನೆಯನ್ನು ಆಧರಿಸಿದ 'ದಿ ಸಬರಮತಿ ರಿಪೋರ್ಟ್' ಸಿನಿಮಾಗೆ ರಾಜ್ಯದಲ್ಲಿ ತೆರಿಗೆ ವಿನಾಯಿತಿ ನೀಡುವುದಾಗಿ ಮಧ್ಯಪ್ರದೇಶ ಸರ್ಕಾರ ಮಂಗಳವಾರ ಘೋಷಿಸಿದೆ.

ಮುಖ್ಯಮಂತ್ರಿ ಮೋಹನ್ ಯಾದವ್ ಈ ಕುರಿತು ಘೋಷಣೆ ಮಾಡಿದ್ದು, ಸಿನಿಮಾ ವೀಕ್ಷಿಸಲು ತಾನೂ ಹೋಗುವುದಾಗಿ ಹೇಳಿದ್ದಾರೆ.

ಧೀರಜ್ ಸರ್ನಾ ನಿರ್ದೇಶನದ ಈ ಚಿತ್ರವು ಗುಜರಾತ್‌ನಲ್ಲಿ ವ್ಯಾಪಕ ಕೋಮು ಗಲಭೆಗೆ ಕಾರಣವಾದ ಗೋಧ್ರಾ ರೈಲು ದುರಂತದ ಘಟನೆಗಳನ್ನು ಒಳಗೊಂಡಿದೆ.

"ದಿ ಸಬರಮತಿ ರಿಪೋರ್ಟ್' ತುಂಬಾ ಒಳ್ಳೆಯ ಸಿನಿಮಾ. ನಾನೇ ಸಿನಿಮಾ ನೋಡಲು ಹೋಗುತ್ತೇನೆ. ನನ್ನ ಸಚಿವರು, ಶಾಸಕರು, ಸಂಸದರಿಗೂ ಈ ಸಿನಿಮಾ ನೋಡುವಂತೆ ಹೇಳಿದ್ದೆ. ರಾಜ್ಯದಲ್ಲಿ ಈ ಸಿನಿಮಾಗೆ ತೆರಿಗೆ ವಿನಾಯಿತಿ ನೀಡುತ್ತೇವೆ. ಜನರು ಇದನ್ನು ವೀಕ್ಷಿಸಬಹುದು ಎಂದು ಯಾದವ್ ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ.

ವೋಟ್ ಬ್ಯಾಂಕ್ ಉದ್ದೇಶಕ್ಕಾಗಿ ಗೋಧ್ರಾ ಘಟನೆಯ ಬಗ್ಗೆ ಪ್ರತಿಪಕ್ಷಗಳು "ಕೊಳಕು ರಾಜಕೀಯ" ದಲ್ಲಿ ತೊಡಗಿವೆ ಎಂದು ಮೋಹನ್ ಯಾದವ್ ವಾಗ್ದಾಳಿ ನಡೆಸಿದ್ದು, ಆ ಸಮಯದಲ್ಲಿ ಗುಜರಾತ್ ಮುಖ್ಯಮಂತ್ರಿಯಾಗಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ಬಿಕ್ಕಟ್ಟಿನ ಸಂದರ್ಭದಲ್ಲಿ ರಾಜ್ಯ ಮತ್ತು ರಾಷ್ಟ್ರದ ಗೌರವವನ್ನು ಕಾಪಾಡಿದ್ದಾರೆ ಎಂದು ಶ್ಲಾಘಿಸಿದರು.

ಇನ್ನು ‘ದಿ ಸಬರಮತಿ ರಿಪೋರ್ಟ್’ ಸಿನಿಮಾವನ್ನು ಉಲ್ಲೇಖಿಸಿ ಪ್ರಧಾನಿ ನರೇಂದ್ರ ಮೋದಿ ಅವರು ಸಹ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದು, ಸುಳ್ಳು ನಿರೂಪಣೆಯು ಸೀಮಿತ ಅವಧಿಯವರೆಗೆ ಮಾತ್ರ ಇರುತ್ತದೆ ಎಂದು ಹೇಳಿದ್ದಾರೆ.

‘ಸಾಮಾನ್ಯ ಜನರು ನೋಡುವ ರೀತಿಯಲ್ಲಿ ಸತ್ಯ ಹೊರಗೆ ಬರುತ್ತಿರುವುದು ಒಳ್ಳೆಯ ವಿಷಯ. ಸುಳ್ಳಿನ ನಿರೂಪಣೆ ಕ್ಷಣಿಕ ಕಾಲಕ್ಕೆ ಮಾತ್ರ ಇರುತ್ತದೆ. ಕೊನೆಗೂ ಸತ್ಯ ಹೊರಗೆ ಬರುತ್ತದೆ’ ಎಂದು ನರೇಂದ್ರ ಮೋದಿ ಪೋಸ್ಟ್ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

SCROLL FOR NEXT