ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಕೌಲಾಲಂಪುರದಿಂದ ಚೆನ್ನೈಗೆ ಹಾರುತ್ತಿದ್ದ ವಿಮಾನದಲ್ಲಿ ಮಹಿಳೆ ಸಾವು

ಮಹಿಳೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ವೈದ್ಯರು ಘೋಷಿಸಿದರು ಎಂದು ಪೊಲೀಸರು ತಿಳಿಸಿದ್ದಾರೆ.

ಸಾಂದರ್ಭಿಕ ಚಿತ್ರ — online desk
Lingaraj Badiger
Updated On : 19 Nov 2024, 12:37 pm

ಚೆನ್ನೈ: ಕೌಲಾಲಂಪುರದಿಂದ ಚೆನ್ನೈಗೆ ಪ್ರಯಾಣಿಸುತ್ತಿದ್ದ 37 ವರ್ಷದ ಮಹಿಳೆ ಮಂಗಳವಾರ ಚೆನ್ನೈ ವಿಮಾನ ನಿಲ್ದಾಣಕ್ಕೆ ಆಗಮಿಸುವ ವೇಳೆ ಶವವಾಗಿ ಪತ್ತೆಯಾಗಿದ್ದು, ಅವರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ವಿಮಾನವು ಚೆನ್ನೈಗೆ ಆಗಮಿಸಿದ ನಂತರ ಖಾಸಗಿ ವಿಮಾನದ ಸಿಬ್ಬಂದಿಗೆ ಮಹಿಳೆ ಸ್ಪಂದಿಸದಿರುವುದನ್ನು ಕಂಡು, ವೈದ್ಯರ ತಂಡ ಅವರನ್ನು ಪರೀಕ್ಷಿಸಿತು. ನಂತರ ವೈದ್ಯರು ಮಹಿಳೆ ಮೃತಪಟ್ಟಿರುವುದಾಗಿ ಘೋಷಿಸಿದರು.

ಮಹಿಳೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ವೈದ್ಯರು ಘೋಷಿಸಿದರು ಎಂದು ಪೊಲೀಸರು ತಿಳಿಸಿದ್ದಾರೆ.

Advertisement

Advertisement

Also Read

ಚೆನ್ನೈ: ವಿಮಾನ ನಿಲ್ದಾಣದಲ್ಲಿ 19 ಕೆಜಿ ಚಿನ್ನ ವಶ; ಸಿಂಗಾಪುರದಿಂದ ಬಂದಿಳಿದ 25 ಪ್ರಯಾಣಿಕರ ಬಂಧನ

ಬಳಿಕ ಶವವನ್ನು ಸಮೀಪದ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಮೃತ ಮಹಿಳೆ ತಮಿಳುನಾಡಿನ ಕಲ್ಲಕುರಿಚಿ ಜಿಲ್ಲೆಯವರು ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement