ಪೊಲೀಸ್ ಅಧಿಕಾರಿಗಳು  online desk
ದೇಶ

UP bypolls 2024: ಪೊಲೀಸ್ ಅಧಿಕಾರಿಗಳಿಂದಲೇ ನೀತಿ ಸಂಹಿತೆ ಉಲ್ಲಂಘನೆ; 7 ಆಧಿಕಾರಿಗಳು ಅಮಾನತು!

ಮತದಾರರ ನಿಗ್ರಹ ಮತ್ತು ಮತದಾನ ಕೇಂದ್ರಗಳಲ್ಲಿನ ಅಕ್ರಮಗಳ ಬಗ್ಗೆ ಸಮಾಜವಾದಿ ಪಕ್ಷ (ಎಸ್‌ಪಿ) ಮತ್ತು ಭಾರತೀಯ ಜನತಾ ಪಕ್ಷ (ಬಿಜೆಪಿ) ಆರೋಪ ಮಾಡಿದ್ದವು.

ಲಖನೌ: ಉತ್ತರ ಪ್ರದೇಶ ಉಪಚುನಾವಣೆ ವೇಳೆ ಮತದಾರರ ಗುರುತಿನ ಚೀಟಿ ಪರಿಶೀಲನೆಯಲ್ಲಿ ಮಾರ್ಗಸೂಚಿಗಳನ್ನು ಉಲ್ಲಂಘಿಸಿದ ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸುವಂತೆ ಚುನಾವಣಾ ಆಯೋಗ (EC) ಬುಧವಾರ ಆದೇಶಿಸಿದೆ.

ಮತದಾರರ ನಿಗ್ರಹ ಮತ್ತು ಮತದಾನ ಕೇಂದ್ರಗಳಲ್ಲಿನ ಅಕ್ರಮಗಳ ಬಗ್ಗೆ ಸಮಾಜವಾದಿ ಪಕ್ಷ (ಎಸ್‌ಪಿ) ಮತ್ತು ಭಾರತೀಯ ಜನತಾ ಪಕ್ಷ (ಬಿಜೆಪಿ) ಆರೋಪ ಮಾಡಿದ್ದವು. ಈ ಹಿನ್ನೆಲೆಯಲ್ಲಿ ಆಯೋಗ ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸುವಂತೆ ಆದೇಶಿಸಿದೆ.

ಮುಜಾಫರ್‌ನಗರದಂತಹ ಪ್ರದೇಶಗಳಲ್ಲಿ ಮತದಾರರು ಮತದಾನ ಮಾಡದಂತೆ ಪೊಲೀಸ್ ಸಿಬ್ಬಂದಿ ತಡೆಯುತ್ತಿದ್ದಾರೆ ಎಂದು ಸಮಾಜವಾದಿ ಪಕ್ಷ ಆರೋಪಿಸಿದೆ.

ಎಸ್‌ಪಿ ಅಧ್ಯಕ್ಷ ಅಖಿಲೇಶ್ ಯಾದವ್, ಚುನಾವಣಾ ಆಯೋಗ ಮತ್ತು ಸುಪ್ರೀಂ ಕೋರ್ಟ್ ಮಧ್ಯಪ್ರವೇಶಿಸಬೇಕೆಂದು ಒತ್ತಾಯಿಸಿದರು. ವೀಡಿಯೊ ಸಾಕ್ಷ್ಯಾಧಾರಗಳ ಆಧಾರದ ಮೇಲೆ ಮತದಾರರ ನಿಗ್ರಹಕ್ಕೆ ಕಾರಣರಾದವರ ವಿರುದ್ಧ ತಕ್ಷಣ ಕ್ರಮ ತೆಗೆದುಕೊಳ್ಳುವಂತೆ ಕರೆ ನೀಡಿದ್ದಾರೆ. ಯಾದವ್ ತಮ್ಮ ಪೋಸ್ಟ್‌ನಲ್ಲಿ, "ಮತದಾರರ ಕಾರ್ಡ್ ಮತ್ತು ಆಧಾರ್ ಐಡಿಗಳನ್ನು ಪರಿಶೀಲಿಸುತ್ತಿರುವ ಎಲ್ಲಾ ಪೊಲೀಸ್ ಅಧಿಕಾರಿಗಳನ್ನು ವೀಡಿಯೊ ಸಾಕ್ಷ್ಯದ ಆಧಾರದ ಮೇಲೆ ತಕ್ಷಣವೇ ಅಮಾನತುಗೊಳಿಸಬೇಕು" ಎಂದು ಒತ್ತಾಯಿಸಿದ್ದಾರೆ. ಆಧಾರ್ ಅಥವಾ ಗುರುತಿನ ಚೀಟಿಗಳನ್ನು ಪರಿಶೀಲಿಸಲು ಪೊಲೀಸರಿಗೆ ಯಾವುದೇ ಹಕ್ಕಿಲ್ಲ ಎಂದು ಅವರು ಒತ್ತಿ ಹೇಳಿದರು, ಮತಗಟ್ಟೆ ಅಧಿಕಾರಿಗಳಿಗೆ ಮಾತ್ರ ಹಾಗೆ ಮಾಡಲು ಅನುಮತಿ ಇದೆ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT