ಮಣಿಪುರ ಹಿಂಸಾಚಾರದ ಸಾಂದರ್ಭಿಕ ಚಿತ್ರ 
ದೇಶ

ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರ: ಮೇ 2023 ರಿಂದ ಇದುವರೆಗೆ 258 ಜನರ ಹತ್ಯೆ

ಇಂಫಾಲ್‌ನಲ್ಲಿ ಭದ್ರತಾ ಪರಿಶೀಲನಾ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಂಗ್, ಸೇನೆ, ಪೊಲೀಸ್, ಸಿಆರ್ ಪಿಎಫ್, ಬಿಎಸ್ ಎಫ್ ಮತ್ತು ಐಟಿಬಿಪಿ ಅಧಿಕಾರಿಗಳೊಂದಿಗಿನ ಸಭೆಯಲ್ಲಿ ಪರಿಸ್ಥಿತಿ ಕುರಿತು ಪರಾಮರ್ಶೆ ನಡೆಸಲಾಯಿತು ಎಂದರು.

ಇಂಫಾಲ: ಕಳೆದ ವರ್ಷ ಮೇ ತಿಂಗಳಿನಿಂದ ಮಣಿಪುರದಲ್ಲಿ ಆರಂಭವಾದ ಜನಾಂಗೀಯ ಹಿಂಸಾಚಾರದಲ್ಲಿ 258 ಮಂದಿ ಬಲಿಯಾಗಿದ್ದಾರೆ ಎಂದು ರಾಜ್ಯ ಸರ್ಕಾರದ ಭದ್ರತಾ ಸಲಹೆಗಾರ ಕುಲದೀಪ್ ಸಿಂಗ್ ಶುಕ್ರವಾರ ತಿಳಿಸಿದ್ದಾರೆ.

ಇಂಫಾಲ್‌ನಲ್ಲಿ ಭದ್ರತಾ ಪರಿಶೀಲನಾ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಂಗ್, ಸೇನೆ, ಪೊಲೀಸ್, ಸಿಆರ್ ಪಿಎಫ್, ಬಿಎಸ್ ಎಫ್ ಮತ್ತು ಐಟಿಬಿಪಿ ಅಧಿಕಾರಿಗಳೊಂದಿಗಿನ ಸಭೆಯಲ್ಲಿ ಪರಿಸ್ಥಿತಿ ಕುರಿತು ಪರಾಮರ್ಶೆ ನಡೆಸಲಾಯಿತು ಎಂದರು.

ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಎಸ್ ಪಿ ಗಳೊಂದಿಗೆ ಚರ್ಚೆ ನಡೆಸಿದ್ದೇವೆ. ಈಗಾಗಲೇ ಮಣಿಪುರದಲ್ಲಿರುವ 198 ಸೇನಾ ತುಕಡಿ ಅಲ್ಲದೇ, ಕೇಂದ್ರ ಸಶಸ್ತ್ರ ಪೊಲೀಸ್ ಪಡೆಯ (ಸಿಎಪಿಎಫ್) ಸುಮಾರು 90 ತುಕಡಿ (10,000 ಹೆಚ್ಚುವರಿ ಪಡೆ) ನೆರವನ್ನು ರಾಜ್ಯವು ಪಡೆಯಲಿದೆ ಎಂದು ತಿಳಿಸಿದರು.

ಮೇ 2023 ರಿಂದ ಇಲ್ಲಿವರೆಗೂ ಉಗ್ರರು ಸೇರಿದಂತೆ ಒಟ್ಟು 258 ಮಂದಿ ಸಾವನ್ನಪ್ಪಿದ್ದಾರೆ. ಸಚಿವರು ಮತ್ತು ಶಾಸಕರ ಆಸ್ತಿ ಧ್ವಂಸ ಮತ್ತು ಸುಟ್ಟು ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ 32 ಜನರನ್ನು ಬಂಧಿಸಲಾಗಿದ್ದು, ಸುಮಾರು 3,000 ಲೂಟಿ ಮಾಡಿದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅವರು ಮಾಹಿತಿ ನೀಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್