ಸಿಹಿ ವಿನಿಮಯ ಮಾಡಿಕೊಂಡ ಬಿಹಾರ ಬಿಜೆಪಿ ಅಧ್ಯಕ್ಷ ದಿಲೀಪ್ ಜೈಸ್ವಾಲ್ 
ದೇಶ

ಬಿಹಾರ ಉಪ ಚುನಾವಣೆ: ಎಲ್ಲಾ ನಾಲ್ಕು ಕ್ಷೇತ್ರಗಳಲ್ಲಿ NDA ಗೆಲುವು, ಖಾತೆ ತೆರೆಯುವಲ್ಲಿ 'ಜನ ಸುರಾಜ್ 'ವಿಫಲ

ಚುನಾವಣಾ ರಾಜಕೀಯಕ್ಕೆ ಚೊಚ್ಚಲ ಪ್ರವೇಶವಾಗಿದ್ದ ಮಾಜಿ ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್ ಅವರ ಜನ ಸುರಾಜ್ ಪಕ್ಷ ಖಾತೆ ತೆರೆಯುವಲ್ಲಿ ವಿಫಲವಾಗಿದೆ.

ಪಾಟ್ನಾ: ಬಿಹಾರ ವಿಧಾನಸಭಾ ಚುನಾವಣೆಗೆ ಇನ್ನೂ ಒಂದು ವರ್ಷಕ್ಕಿಂತ ಕಡಿಮೆ ಇರುವಂತೆಯೇ, ನವೆಂಬರ್ 13 ರಂದು ಉಪ ಚುನಾವಣೆ ನಡೆದಿದ್ದ ಎಲ್ಲಾ ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲಿ ಆಡಳಿತಾರೂಢ ಎನ್ ಡಿಎ ಗೆಲುವು ಸಾಧಿಸಿದ್ದು, ವಿಪಕ್ಷಗಳ INDIA ಮೈತ್ರಿಕೂಟಕ್ಕೆ ದೊಡ್ಡ ಹೊಡೆತ ಬಿದ್ದಿದೆ.

ಬೆಳಗಂಜ್, ಇಮಾಮ್‌ಗಂಜ್, ತರಾರಿ ಮತ್ತು ರಾಮಗಢ ಕ್ಷೇತ್ರಗಳ ಉಪ ಚುನಾವಣೆಯ ಫಲಿತಾಂಶ ಶನಿವಾರ ಪ್ರಕಟಗೊಂಡಿದ್ದು, ಕಳೆದ ಲೋಕಸಭೆ ಚುನಾವಣೆಯಲ್ಲಿ 40 ರಲ್ಲಿ 30 ಸ್ಥಾನಗಳನ್ನು ಗೆದಿದ್ದ NDA ಬಿಹಾರದಲ್ಲಿ ತನ್ನ ಗೆಲುವಿನ ಓಟವನ್ನು ಉಳಿಸಿಕೊಂಡಿದೆ.

ಉಪ ಚುನಾವಣೆ ಗೆಲುವಿನೊಂದಿಗೆ ಬಿಹಾರ ಬಿಜೆಪಿಯು ಮತ್ತೊಮ್ಮೆ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ನಾಯಕತ್ವದ ಮೇಲೆ ನಂಬಿಕೆ ಇಟ್ಟಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ದಿಲೀಪ್ ಜೈಸ್ವಾಲ್ ಹೇಳಿದ್ದಾರೆ.

ಉಪ ಮುಖ್ಯಮಂತ್ರಿ ಸಾಮ್ರಾಟ್ ಚೌಧರಿ, ಬಿಜೆಪಿಯ ಹಿರಿಯ ನಾಯಕ ಮಂಗಲ್ ಪಾಂಡೆ ಅವರು ಸಿಎಂ ಅಧಿಕೃತ ನಿವಾಸಕ್ಕೆ ಭೇಟಿ ನೀಡಿ, ಉಪ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿಗಳ ಗೆಲುವಿನ ಬಗ್ಗೆ ಸಂತಸ ವಿನಿಮಯ ಮಾಡಿಕೊಂಡರು.

ಚುನಾವಣಾ ರಾಜಕೀಯಕ್ಕೆ ಚೊಚ್ಚಲ ಪ್ರವೇಶವಾಗಿದ್ದ ಮಾಜಿ ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್ ಅವರ ಜನ ಸುರಾಜ್ ಪಕ್ಷ ಖಾತೆ ತೆರೆಯುವಲ್ಲಿ ವಿಫಲವಾಗಿದೆ. ವಿವಿಧ ಕಾರಣಾಂತರಗಳಿಂದ ಕೊನೆಯ ಕ್ಷಣದಲ್ಲಿ ಎರಡು ಸ್ಥಾನಗಳಲ್ಲಿ ತಮ್ಮ ಅಭ್ಯರ್ಥಿಗಳನ್ನು ಬದಲಾಯಿಸಬೇಕಾಗಿ ಬಂದ ಕಾರಣ ಕಿಶೋರ್ ಎಲ್ಲಾ ನಾಲ್ಕು ಸ್ಥಾನಗಳಲ್ಲಿ ತಮ್ಮ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದರು.

ತರಾರಿ, ಬೆಳಗಂಜ್ ಮತ್ತು ಇಮಾಮ್‌ಗಂಜ್‌ನಲ್ಲಿ ಜನ ಸೂರಾಜ್ ಪಕ್ಷದ ಅಭ್ಯರ್ಥಿಗಳು ಮೂರನೇ ಸ್ಥಾನದಲ್ಲಿದ್ದರೆ, ರಾಮಗಢದಲ್ಲಿ ನಾಲ್ಕನೇ ಸ್ಥಾನದಲ್ಲಿದೆ. ಜನ್ ಸೂರಾಜ್ ಪಕ್ಷದ ಅಭ್ಯರ್ಥಿಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಇಮಾಮ್‌ಗಂಜ್‌ನ ಜಿತೇಂದ್ರ ಪಾಸ್ವಾನ್ ಅವರು 37,103 ಮತಗಳನ್ನು ಪಡೆದು ಮೂರನೇ ಸ್ಥಾನಕ್ಕೆ ಕುಸಿದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel