ಎನ್‌ಎಸ್‌ಯುಐ ಮುಖಂಡರ ಸಂಭ್ರಮ 
ದೇಶ

ದೆಹಲಿ ವಿವಿ ಚುನಾವಣೆ: 7 ವರ್ಷಗಳ ನಂತರ ಗೆದ್ದು ಬೀಗಿದ ಕಾಂಗ್ರೆಸ್ ವಿದ್ಯಾರ್ಥಿ ಘಟಕ

ಅಧ್ಯಕ್ಷೀಯ ರೇಸ್‌ನಲ್ಲಿ ಎನ್‌ಎಸ್‌ಯುಐನ ರೌನಕ್ ಖತ್ರಿ ಅವರು ಆರ್‌ಎಸ್‌ಎಸ್ ಬೆಂಬಲಿತ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ ಅಭ್ಯರ್ಥಿ ರಿಷಭ್ ಚೌಧರಿ ಅವರನ್ನು 1,300 ಮತಗಳಿಂದ ಸೋಲಿಸಿದ್ದಾರೆ.

ನವದೆಹಲಿ: ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ನ್ಯಾಷನಲ್ ಸ್ಟೂಡೆಂಟ್ಸ್ ಯೂನಿಯನ್ ಆಫ್ ಇಂಡಿಯಾ(NSUI) ಏಳು ವರ್ಷಗಳ ಗೆದ್ದು ಬೀಗಿದ್ದು, ಅಧ್ಯಕ್ಷ ಮತ್ತು ಜಂಟಿ ಕಾರ್ಯದರ್ಶಿ ಸ್ಥಾನಗಳನ್ನು ಪಡೆದುಕೊಂಡಿದೆ.

ಅಧ್ಯಕ್ಷೀಯ ರೇಸ್‌ನಲ್ಲಿ ಎನ್‌ಎಸ್‌ಯುಐನ ರೌನಕ್ ಖತ್ರಿ ಅವರು ಆರ್‌ಎಸ್‌ಎಸ್ ಬೆಂಬಲಿತ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ ಅಭ್ಯರ್ಥಿ ರಿಷಭ್ ಚೌಧರಿ ಅವರನ್ನು 1,300 ಮತಗಳಿಂದ ಸೋಲಿಸಿದ್ದಾರೆ.

ಖತ್ರಿ ಅವರು 20,207 ಮತಗಳನ್ನು ಪಡೆದರೆ, ಚೌಧರಿ 18,864 ಮತಗಳನ್ನು ಪಡೆದು ಸೋಲು ಅನುಭವಿಸಿದ್ದಾರೆ.

ಫಲಿತಾಂಶ ಪ್ರಕಟವಾಗುತ್ತಿದ್ದಂತೆಯೇ ಸಂಭ್ರಮಾಚರಣೆ ನಡೆದಿದ್ದು, ಕಾಂಗ್ರೆಸ್‌ನ ವಿದ್ಯಾರ್ಥಿ ಘಟಕದ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿ, ಘೋಷಣೆಗಳನ್ನು ಕೂಗುತ್ತಾ, ತಮ್ಮ ನಾಯಕರನ್ನು ಹುರಿದುಂಬಿಸಿದರು.

ಎನ್‌ಎಸ್‌ಯುಐ ಎರಡು ಪ್ರಮುಖ ಹುದ್ದೆಗಳನ್ನು ಗೆದ್ದುಕೊಂಡರೆ, ಎಬಿವಿಪಿ ಉಪಾಧ್ಯಕ್ಷ ಸ್ಥಾನವನ್ನು ಭದ್ರಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ ಮತ್ತು ಕಾರ್ಯದರ್ಶಿ ಸ್ಥಾನವನ್ನು ಉಳಿಸಿಕೊಂಡಿದೆ.

ಎಬಿವಿಪಿಯ ಉಪಾಧ್ಯಕ್ಷ ಅಭ್ಯರ್ಥಿ ಭಾನು ಪ್ರತಾಪ್ ಸಿಂಗ್ 24,166 ಮತಗಳನ್ನು ಪಡೆದರೆ, ಎನ್‌ಎಸ್‌ಯುಐನ ಯಶ್ ನಂದಲ್ ಅವರು 15,404 ಮತಗಳನ್ನು ಪಡೆಯುವ ಮೂಲಕ ಸೋಲಪ್ಪಿಕೊಂಡರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಂಚಿ ಪರೀಕ್ಷೆ ವಿವಾದ: ಬ್ಯಾರಿಕೇಡ್ ಮುರಿದು ವಿಧಾನಸೌಧದತ್ತ ನುಗ್ಗಿದ ವಿದ್ಯಾರ್ಥಿಗಳು! ಜಲಫಿರಂಗಿ ಬಳಸಿದ ಪೊಲೀಸರು, Video

'JDS ಪಾದಯಾತ್ರೆಯ ಬಂಡವಾಳ ಬಯಲು ಮಾಡಿದ ವಿಜಯೇಂದ್ರ': ಕಾಂಗ್ರೆಸ್​​ನಿಂದ ವಿಡಿಯೋ ಬಿಡುಗಡೆ!

TNIE Exclusive | Air India ವಿಮಾನದಲ್ಲಿ ಭಾರೀ ತಾಂತ್ರಿಕ ದೋಷ..! Phuket-Delhi ವಿಮಾನ 300 ಅಡಿ ಕುಸಿತಕ್ಕೆ Triple hydraulic systems ವೈಫಲ್ಯ ಕಾರಣ..?

GBA: ಖಾಲಿ ನಿವೇಶನ ಸ್ವಚ್ಛಗೊಳಿಸದ, ಡೆಬ್ರಿಸ್ ತೆರವುಗೊಳಿಸದ ಮಾಲೀಕರೆ ಎಚ್ಚರ! 19 ಸಾವಿರ ರೂಗಳಿಂದ 1.28 ಲಕ್ಷವರೆಗೂ ಬೀಳಲಿದೆ ದಂಡ!

ಸಂಪುಟ ವಿಸ್ತರಣೆ ಬಿಕ್ಕಟ್ಟು ಶಮನಕ್ಕೆ ಸಿಎಂ ಡಿಕೆ.ಶಿವಕುಮಾರ್ ದೆಹಲಿಗೆ ದೌಡು: ಹೈಕಮಾಂಡ್‌ ಜೊತೆ ಮಹತ್ವದ ಚರ್ಚೆ..!