ದೇವೇಂದ್ರ ಫಡ್ನವೀಸ್ ಹಾಗೂ ಏಕನಾಥ್ ಶಿಂಧೆ. 
ದೇಶ

ಮಹಾರಾಷ್ಟ್ರ ಸಿಎಂ ರೇಸ್: ಫಡ್ನವೀಸ್ ಮುಂಚೂಣಿಯಲ್ಲಿ; ನಾಳೆ ಏಕನಾಥ್ ಶಿಂಧೆ ರಾಜೀನಾಮೆ

ಫಡ್ನವೀಸ್ ರಾಜ್ಯದ ಹೊಸ ಮುಖ್ಯಮಂತ್ರಿಯಾಗುವ ಸಾಧ್ಯತೆಯಿದೆ. ಏಕೆಂದರೆ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಅವರ ಹೆಸರಿಗೆ ಯಾವುದೇ ಆಕ್ಷೇಪಣೆಯಿಲ್ಲ ಎಂದು ಬಿಜೆಪಿ ನಾಯಕತ್ವಕ್ಕೆ ತಿಳಿಸಿದೆ.

ನವದೆಹಲಿ: ಬಿಜೆಪಿ, ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ, ಅಜಿತ್ ಪವಾರ್ ನೇತೃತ್ವದಲ್ಲಿ ಎನ್‌ಸಿಪಿ ಒಳಗೊಂಡ ಮಹಾಯುತಿ ಮೈತ್ರಿಕೂಟದ ಭರ್ಜರಿ ಗೆಲುವಿನ ನಂತರ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ನೂತನ ಮುಖ್ಯಮಂತ್ರಿ ಹುದ್ದೆಗೆ ಪ್ರಬಲ ಆಕಾಂಕ್ಷಿಯಾಗಿ ಹೊರಹೊಮ್ಮಿದ್ದಾರೆ ಎಂದು ಮೂಲಗಳು ಸೋಮವಾರ ತಿಳಿಸಿವೆ.

ಮೂಲಗಳ ಪ್ರಕಾರ, ಫಡ್ನವೀಸ್ ರಾಜ್ಯದ ಹೊಸ ಮುಖ್ಯಮಂತ್ರಿಯಾಗುವ ಸಾಧ್ಯತೆಯಿದೆ. ಏಕೆಂದರೆ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಅವರ ಹೆಸರಿಗೆ ಯಾವುದೇ ಆಕ್ಷೇಪಣೆಯಿಲ್ಲ ಎಂದು ಬಿಜೆಪಿ ನಾಯಕತ್ವಕ್ಕೆ ತಿಳಿಸಿದೆ ಎಂದು ವರದಿಯಾಗಿದೆ. ಆದಾಗ್ಯೂ, ಶಿಂಧೆ ನೇತೃತ್ವದ ಶಿವಸೇನೆಯ ನಿಲುವು ಅಸ್ಪಷ್ಟವಾಗಿದೆ ಎಂದು ಅವರು ಹೇಳಿದ್ದಾರೆ.

ಫಡ್ನವಿಸ್, ಶಿಂಧೆ ಮತ್ತು ಪವಾರ್ ಇಂದು ಸಂಜೆ ದೆಹಲಿಗೆ ಆಗಮಿಸಿರುವುದರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು ರಾತ್ರಿ ಮಹಾರಾಷ್ಟ್ರ ನಾಯಕರನ್ನು ಭೇಟಿ ಮಾಡಬಹುದು ಎನ್ನಲಾಗಿದೆ.

ಆದಾಗ್ಯೂ, ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರ ಮಗಳ ಮದುವೆಯ ಆರತಕ್ಷತೆಯಲ್ಲಿ ಭಾಗವಹಿಸಲು ಮಹಾರಾಷ್ಟ್ರ ನಾಯಕರು ರಾಜಧಾನಿಯಲ್ಲಿದ್ದಾರೆ ಎಂದು ವಿಶ್ವಾಸಾರ್ಹ ಮೂಲಗಳು ತಿಳಿಸಿವೆ.

ಮಹಾರಾಷ್ಟ್ರ ಮುಖ್ಯಮಂತ್ರಿ ನೇಮಕದ ಬಗ್ಗೆ ಚರ್ಚಿಸಲು ಯಾವುದೇ ಅಧಿಕೃತ ಸಭೆಯನ್ನು ನಿಗದಿಪಡಿಸಲಾಗಿಲ್ಲ.ಆದರೆ, ಶಿಂಧೆ ಮಂಗಳವಾರ ರಾಜೀನಾಮೆ ಸಲ್ಲಿಸಿದ ನಂತರ, ಅಂತಿಮ ನಿರ್ಧಾರ ಹೊರಬೀಳುವ ಸಾಧ್ಯತೆ ಇದೆ.

ಫಡ್ನವಿಸ್ ಮುಖ್ಯಮಂತ್ರಿಯಾಗಿ ನೇಮಕಗೊಂಡರೆ, ಶಿವಸೇನೆ ಮತ್ತು ಎನ್‌ಸಿಪಿ ಎರಡೂ ಪಕ್ಷಗಳಿಂದ ತಲಾ ಒಬ್ಬರು ಉಪಮುಖ್ಯಮಂತ್ರಿಯಾಗುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ಗೃಹ ಮತ್ತು ಹಣಕಾಸು ಖಾತೆ ಸೇರಿದಂತೆ ಪ್ರಮುಖ ಖಾತೆಗಳನ್ನು ಮಿತ್ರ ಪಕ್ಷಗಳಾದ ಎನ್ ಸಿಪಿ ಮತ್ತು ಶಿವಸೇನೆ ಹಂಚಲಾಗುತ್ತದೆ ಎನ್ನಲಾಗಿದೆ.

ಫಡ್ನವಿಸ್ ಅವರು ಈ ಹಿಂದೆ 2014 ರಲ್ಲಿ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು. ಆಗಿನ ಅವಿಭಜಿತ ಶಿವಸೇನೆಯೊಂದಿಗೆ ಸಮ್ಮಿಶ್ರ ಸರ್ಕಾರದಲ್ಲಿ ಐದು ವರ್ಷಗಳ ಅವಧಿಯನ್ನು ಪೂರ್ಣಗೊಳಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮಕ್ಕಳ ಸಾವಿಗೆ ಪ್ರತೀಕಾರ: ಇಸ್ರೇಲ್-ಅಮೆರಿಕ, ಗಲ್ಫ್ ದೇಶಗಳ ಮೇಲೆ ದಾಳಿ ನಿಲ್ಲಲ್ಲ; ಇರಾನ್ ಹೊಸ ಸರ್ವೋಚ್ಛ ನಾಯಕ ವಾರ್ನಿಂಗ್!

ಯುಗಾದಿ ಹಬ್ಬಕ್ಕೆ ಬಮೂಲ್ ನಿಂದ ಭರ್ಜರಿ ಗಿಫ್ಟ್: ಪ್ರತಿ ಲೀಟರ್ ಗೆ 1 ರೂ.ನಂತೆ ಹಾಲು ಉತ್ಪಾದಕರಿಗೆ ಬೋನಸ್; ಡಿ.ಕೆ. ಸುರೇಶ್

ಮದ್ಯ ಮಾರಾಟದಲ್ಲಿ ಶೇ.0.51 ಇಳಿಕೆ, ಆದರೂ ಸರ್ಕಾರಕ್ಕೆ 36,492 ಕೋಟಿ ರೂ. ಆದಾಯ..!

No shortage of fuel: ಹಾರ್ಮುಜ್ ಜಲಸಂಧಿ ತಲುಪಿಸಬಹುದಾದ ತೈಲಕ್ಕಿಂತ ಹೆಚ್ಚಿನದ್ದು ಬೇರೆಡೆಯಿಂದ ಭಾರತ ತಲುಪಿದೆ; ಪೆಟ್ರೋಲಿಯಂ ಸಚಿವ

ಮಧ್ಯಪ್ರಾಚ್ಯ ಯುದ್ಧಗ್ರಸ್ತ: ತೈಲ, ಅನಿಲ ಪೂರೈಕೆ ವ್ಯತ್ಯಯ ಸಂಕಷ್ಟ; ಆದರೂ ರಹಸ್ಯ'ಭೂಗತ ಗುಹೆ'ಗಳಿಂದ ಭಾರತಕ್ಕೆ No Tension!

SCROLL FOR NEXT