ಕಾರ್ತಿ ಚಿದಂಬರಂ online desk
ದೇಶ

EVM ತಿರುಚಿರುವುದಕ್ಕೆ ಸಾಕ್ಷ್ಯಗಳಿಲ್ಲ: ಸ್ವಪಕ್ಷದ ಆರೋಪಕ್ಕೆ ಕಾರ್ತಿ ಚಿದಂಬರಂ ತದ್ವಿರುದ್ಧ ಹೇಳಿಕೆ

"ನಾನು 2004 ರಿಂದಲೂ ಚುನಾವಣೆಗಳಲ್ಲಿ ಭಾಗಿಯಾಗುತ್ತಿದ್ದೇನೆ, "ವೈಯಕ್ತಿಕವಾಗಿ," ಇವಿಎಂ ಟ್ಯಾಂಪರಿಂಗ್ ಅಥವಾ ತಿರುಚಿರುವುದಕ್ಕೆ ಸಂಬಂಧಿಸಿದ ಪುರಾವೆಗಳನ್ನು ನೋಡಿಲ್ಲ ಎಂದು ಕಾರ್ತಿ ಚಿದಂಬರಂ ಹೇಳಿದ್ದಾರೆ.

ಚೆನ್ನೈ: ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಫಲಿತಾಂಶದ ಬಗ್ಗೆ ಕಾಂಗ್ರೆಸ್ ನಲ್ಲಿ ಆತ್ಮಾವಲೋಕನ ನಡೆಯುತ್ತಿದೆ. ಕೆಲವು ನಾಯಕರು ಇವಿಎಂ ತಿರುಚಲಾಗಿದೆ ಎಂಬ ಆರೋಪ ಮಾಡಿದರೆ, ಕಾಂಗ್ರೆಸ್ ಸಂಸದ ಕಾರ್ತಿ ಚಿದಂಬರಂ ಇದಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿದ್ದಾರೆ.

"ನಾನು 2004 ರಿಂದಲೂ ಚುನಾವಣೆಗಳಲ್ಲಿ ಭಾಗಿಯಾಗುತ್ತಿದ್ದೇನೆ, "ವೈಯಕ್ತಿಕವಾಗಿ," ಇವಿಎಂ ಟ್ಯಾಂಪರಿಂಗ್ ಅಥವಾ ತಿರುಚಿರುವುದಕ್ಕೆ ಸಂಬಂಧಿಸಿದ ಪುರಾವೆಗಳನ್ನು ನೋಡಿಲ್ಲ ಎಂದು ಕಾರ್ತಿ ಚಿದಂಬರಂ ಹೇಳಿದ್ದಾರೆ.

ಚಿದಂಬರಂ ಎಎನ್‌ಐ ನೊಂದಿಗೆ ಮಾತನಾಡಿದ್ದು "ನಾನು 2004 ರಿಂದ ಇವಿಎಂಗಳನ್ನು ಬಳಸಿರುವ ಚುನಾವಣೆಯಲ್ಲಿ ಭಾಗವಹಿಸುತ್ತಿದ್ದೇನೆ. ನನಗೆ ವೈಯಕ್ತಿಕವಾಗಿ ಯಾವುದೇ ಕೆಟ್ಟ ಅನುಭವವಿಲ್ಲ. ಯಾವುದೇ ರೀತಿಯ ಟ್ಯಾಂಪರಿಂಗ್ ನಡೆದಿದೆ ಎಂದು ಸಾಬೀತುಪಡಿಸಲು ನನ್ನ ಬಳಿ ಯಾವುದೇ ಪುರಾವೆಗಳಿಲ್ಲ." ಎಂದು ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಆರೋಪಗಳನ್ನು ವೈಜ್ಞಾನಿಕ ಡೇಟಾದಿಂದ ಸಾಬೀತುಪಡಿಸಬೇಕು ಎಂದು ಕಾರ್ತಿ ಚಿದಂಬರಂ ಹೇಳಿದ್ದಾರೆ.

"ಯಾರಾದರೂ ವಾಸ್ತವವಾಗಿ ಟ್ಯಾಂಪರಿಂಗ್ ನಡೆದಿದೆ ಎಂದು ವೈಜ್ಞಾನಿಕ ದತ್ತಾಂಶದೊಂದಿಗೆ ಸಾಬೀತುಪಡಿಸದ ಹೊರತು, ನನ್ನ ದೃಷ್ಟಿಕೋನವನ್ನು ಬದಲಾಯಿಸಲು ನಾನು ಸಿದ್ಧನಿಲ್ಲ. ನನ್ನ ಪಕ್ಷದ ಅನೇಕರು ವಿಭಿನ್ನ ದೃಷ್ಟಿಕೋನವನ್ನು ಹೊಂದಿದ್ದಾರೆಂದು ನನಗೆ ತಿಳಿದಿದೆ" ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

ಕಾಂಗ್ರೆಸ್‌ನಲ್ಲಿ ಕುರ್ಚಿ ಕಸರತ್ತು: ದೆಹಲಿಗೆ 'ಕೈ' ಶಾಸಕರ ಪ್ರಯಾಣ, ಸಚಿವ ಸ್ಥಾನಕ್ಕಾಗಿ ಲಾಬಿ..!

'ಅಲ್ಪಸಂಖ್ಯಾತರ ಚಾಂಪಿಯನ್‌ ಎನಿಸಿಕೊಂಡವರ ಡಬಲ್‌ ಗೇಮ್‌: ದಾವಣಗೆರೆಯಲ್ಲಿ ನಮ್ಮ ಅಭ್ಯರ್ಥಿಯನ್ನೇ ಸೋಲಿಸಲು ಯತ್ನ'

ಗ್ರಾಮೀಣ ಪ್ರದೇಶಗಳಿಗೆ ಅಗ್ಗದ ದರದಲ್ಲಿ ಔಷಧಿ: ಇಂಡಿಯಾ ಪೋಸ್ಟ್‌ ಮೂಲಕ ಜನೌಷಧಿ ಸೇವೆ ವಿಸ್ತರಿಸಲು ಕೇಂದ್ರ ಸರ್ಕಾರ ಚಿಂತನೆ..!

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

SCROLL FOR NEXT