ಮೂವರನ್ನು ಬಲಿ ತೆಗೆದುಕೊಂಡ ಅಪೂರ್ಣ ಸೇತುವೆ 
ದೇಶ

ಉತ್ತರ ಪ್ರದೇಶ: ತಪ್ಪಾದ ನಕ್ಷೆ ತೋರಿಸಿ ಮೂವರ ಬಲಿ ತೆಗೆದುಕೊಂಡ ಗೂಗಲ್ ಮ್ಯಾಪ್!

ಗೂಗಲ್ ತೋರಿಸಿದ್ದನ್ನು ನಂಬಿ ನಿರ್ಮಾಣ ಹಂತದಲ್ಲಿದ್ದ ಸೇತುವೆಯನ್ನು ಹತ್ತಿದ್ದಾರೆ. ಸ್ವಲ್ಪ ದೂರ ಹೋಗುತ್ತಿದ್ದಂತೆ ಸೇತುವೆ ಕಾಮಗಾರಿ ಅಲ್ಲಿಗೇ ನಿಂತಿದೆ ಅವರಿಗೆ ಇದು ಕಂಡಿಲ್ಲ.

ಲಕ್ನೋ: ಗೂಗಲ್​ ಮ್ಯಾಪ್ ನಂಬಿ ಮೂವರು ಪ್ರಾಣ ಕಳೆದುಕೊಂಡಿರುವ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ. ಕಾರಿನ ಚಾಲಕ ಗೂಗಲ್ ಮ್ಯಾಪ್ ನೋಡಿಕೊಂಡು ಕಾರು ಚಲಾಯಿಸುತ್ತಿದ್ದ, ಜತೆ ಆತನ ಸ್ನೇಹಿತರು ಕೂಡ ಇದ್ದರು.

ಗೂಗಲ್ ತೋರಿಸಿದ್ದನ್ನು ನಂಬಿ ನಿರ್ಮಾಣ ಹಂತದಲ್ಲಿದ್ದ ಸೇತುವೆಯನ್ನು ಹತ್ತಿದ್ದಾರೆ. ಸ್ವಲ್ಪ ದೂರ ಹೋಗುತ್ತಿದ್ದಂತೆ ಸೇತುವೆ ಕಾಮಗಾರಿ ಅಲ್ಲಿಗೇ ನಿಂತಿದೆ ಅವರಿಗೆ ಇದು ಕಂಡಿಲ್ಲ, ಅಲ್ಲಿಂದ ನೇರವಾಗಿ ಕಾರು ಕೆಳಗಿರುವ ನದಿಗೆ ಬಿದ್ದ ಪರಿಣಾಮ ಮೂವರು ಪ್ರಾಣ ಕಳೆದುಕೊಂಡಿದ್ದಾರೆ.ಕಾರು 50 ಅಡಿ ಎತ್ತರದಿಂದ ರಾಮಗಂಗಾ ನದಿಗೆ ಬಿದ್ದಿದೆ.

ಉತ್ತರ ಪ್ರದೇಶದ ಬರೇಲಿ ಮತ್ತು ಬುಡೌನ್ ಜಿಲ್ಲೆಗಳ ನಡುವಿನ ಗಡಿಯಲ್ಲಿರುವ ಫರೀದ್‌ಪುರ ಮತ್ತು ದತಗಂಜ್‌ಗೆ ಸಂಪರ್ಕ ಕಲ್ಪಿಸುವ ರಾಮಗಂಗಾ ನದಿಯ ಮೇಲಿನ ಅಪೂರ್ಣ ಸೇತುವೆಯಿಂದ ಕಾರು ಉರುಳಿ ಬಿದ್ದ ಪರಿಣಾಮ ಮೂವರು ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.

ನಿರ್ಮಾಣ ಹಂತದ ಸೇಲುವೆ ಮೇಲೆ‌ ಬ್ಯಾರಿಕೇಟ್ ಹಾಕದಿರುವುದಕ್ಕೆ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೂವರು ಹರ್ಯಾಣದ ಗುರುಗ್ರಾಮದಿಂದ ಕಾರಿನಲ್ಲಿ ಬರೇಲಿಗೆ ಹೊರಟಿದ್ದರು. ಇಬ್ಬರ ಮೃತದೇಹಗಳ ಗುರುತನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಸುರಕ್ಷತಾ ಕ್ರಮಗಳ ಕೊರತೆ ಅಥವಾ ಸ್ಥಳದಲ್ಲಿ ಅಡಗಿರುವ ಅಪಾಯದ ಬಗ್ಗೆ ಎಚ್ಚರಿಕೆ ನೀಡುವ ಬಗ್ಗೆಯೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯದಲ್ಲಿ ಮಳೆ ಅಭಾವ: ನಾಲ್ಕು ಕಂದಾಯ ವಿಭಾಗಗಳಲ್ಲಿ ಮೋಡ ಬಿತ್ತನೆ; 27 ಕೋಟಿ ರೂ ವೆಚ್ಚ- ಜಲ ಸಂಪನ್ಮೂಲ ಸಚಿವ ಚಲುವರಾಯಸ್ವಾಮಿ!

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

ಭಾರತದಲ್ಲಿ ಫುಡ್‌ ಕಂಪನಿಗಳ ಲಾಬಿ: ಚಿಪ್ಸ್ ಮತ್ತು ಕೂಲ್ ಡ್ರಿಂಕ್ಸ್ ಮೇಲೆ ‘ರೆಡ್‌ ಅಲರ್ಟ್’ ಪ್ರಸ್ತಾವ ಕೈಬಿಟ್ಟ FSSAI, ಆಗಿದ್ದೇನು?

'ಬ್ರೋ, ನೀವು ಸುಮ್ಮನೆ ಸಮಯ ವ್ಯರ್ಥ ಮಾಡುತ್ತಿದ್ದೀರಿ': ಎರಡನೇ ಟೆಸ್ಟ್ ಪಂದ್ಯದಲ್ಲಿ ಶ್ರೀಲಂಕಾ ನಾಯಕನ ಕಾಲೆಳೆದ ಸರ್ಫರಾಜ್ ಖಾನ್!