ಉಲ್ಫಾ ಸಂಘಟನೆ ಬಂಡುಕೋರರ ಸಾಂದರ್ಭಿಕ ಚಿತ್ರ 
ದೇಶ

ಅಸ್ಸಾಂ: 'ಉಲ್ಫಾ' ಮೇಲಿನ ನಿಷೇಧ ಇನ್ನೂ 5 ವರ್ಷ ವಿಸ್ತರಿಸಿದ ಕೇಂದ್ರ ಸರ್ಕಾರ

ಉಲ್ಫಾ ತನ್ನ ಎಲ್ಲಾ ಬಣಗಳು ಮತ್ತು ಮುಂಚೂಣಿ ಸಂಘಟನೆಗಳೊಂದಿಗೆ ಭಾರತದ ಸಾರ್ವಭೌಮತೆ ಮತ್ತು ಸಮಗ್ರತೆಗೆ ಹಾನಿಯಾಗುವಂತಹ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದೆ

ಗುವಾಹಟಿ: ಭಾರತದಿಂದ ಅಸ್ಸಾಂ ಪ್ರತ್ಯೇಕಗೊಳಿಸುವ ಉದ್ದೇಶದ ಕೆಲಸ ಮುಂದುವರಿಕೆ ಮತ್ತು ಸುಲಿಗೆ, ಹಿಂಸಾಚಾರಕ್ಕಾಗಿ ಇತರ ದಂಗೆಕೋರ ಗುಂಪುಗಳೊಂದಿಗೆ ಸಂಪರ್ಕದಲ್ಲಿರುವುದಕ್ಕಾಗಿ ಬಂಡುಕೋರ ಸಂಘಟನೆ ಯುನೈಟೆಡ್ ಲಿಬರೇಶನ್ ಫ್ರಂಟ್ ಆಫ್ ಅಸೋಮ್ 'ಉಲ್ಫಾ' (ULFA ) ಮೇಲಿನ ನಿಷೇಧವನ್ನು ಕೇಂದ್ರ ಸರ್ಕಾರ ಮತ್ತೆ ಐದು ವರ್ಷಗಳವರೆಗೆ ವಿಸ್ತರಿಸಿದೆ.

ಉಲ್ಫಾವನ್ನು 1990 ರಲ್ಲಿ ಮೊದಲ ಬಾರಿಗೆ ನಿಷೇಧಿತ ಸಂಘಟನೆ ಎಂದು ಘೋಷಿಸಲಾಗಿತ್ತು. ಅಂದಿನಿಂದ ನಿಷೇಧವನ್ನು ನಿಯತಕಾಲಿಕವಾಗಿ ವಿಸ್ತರಿಸಲಾಗಿದೆ. ಉಲ್ಫಾ ತನ್ನ ಎಲ್ಲಾ ಬಣಗಳು ಮತ್ತು ಮುಂಚೂಣಿ ಸಂಘಟನೆಗಳೊಂದಿಗೆ ಭಾರತದ ಸಾರ್ವಭೌಮತೆ ಮತ್ತು ಸಮಗ್ರತೆಗೆ ಹಾನಿಯಾಗುವಂತಹ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದೆ ಎಂದು ಕೇಂದ್ರ ಗೃಹ ಸಚಿವಾಲಯ ಅಧಿಸೂಚನೆಯಲ್ಲಿ ಹೇಳಿದೆ.

ಅಸ್ಸಾಂ ಅನ್ನು ಭಾರತದಿಂದ ಪ್ರತ್ಯೇಕಿಸುವುದು ತನ್ನ ಉದ್ದೇಶವೆಂದು ಉಲ್ಫಾ ಘೋಷಿಸಿದೆ. ತಮ್ಮ ಸಂಘಟನೆಗೆ ಹಣಕ್ಕಾಗಿ ಸುಲಿಗೆ ಮತ್ತು ಬೆದರಿಕೆಯನ್ನು ಮುಂದುವರೆಸಿದೆ. ಹಿಂಸಾಚಾರ ನಡೆಸಲು ಇತರ ಬಂಡಾಯ ಗುಂಪುಗಳೊಂದಿಗೆ ಸಂಪರ್ಕವನ್ನು ಹೊಂದಿದೆ ಎಂದು ಹೇಳಿದೆ.

ಅಸ್ಸಾಂನಲ್ಲಿ ನವೆಂಬರ್ 27, 2019 ರಿಂದ ಜುಲೈ 1, 2024 ರ ಅವಧಿಯಲ್ಲಿ ಹಲವಾರು ಸ್ಫೋಟಗಳು ಅಥವಾ ಸ್ಫೋಟಕ ಅಳವಡಿಕೆಯ ಹಲವಾರು ಪ್ರಕರಣಗಳು ಸೇರಿದಂತೆ 16 ಕ್ರಿಮಿನಲ್ ಪ್ರಕರಣಗಳಲ್ಲಿ ಭಾಗಿಯಾಗಿರುವ ಈ ಸಂಘಟನೆಯು ಅಕ್ರಮ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ಹೊಂದಿದೆ ಮತ್ತು ಅಸ್ಸಾಂನಾದ್ಯಂತ 2024ರ ಸ್ವಾತಂತ್ರ್ಯ ದಿನದವರೆಗೂ ಹಲವು ಸ್ಫೋಟಗಳನ್ನು ನಡೆಸಿದೆ ಎಂದು ಅಧಿ ಸೂಚನೆ ಹೇಳಿದೆ.

ಕಳೆದ ಐದು ವರ್ಷಗಳಲ್ಲಿ ಮೂರು ಉಲ್ಫಾ ಕಾರ್ಯಕರ್ತರು ಪೊಲೀಸ್ ಅಥವಾ ಭದ್ರತಾ ಪಡೆಗಳ ಕಾರ್ಯಾಚರಣೆಯಲ್ಲಿ ಹತ್ಯೆಯಾಗಿದ್ದಾರೆ. ಅದರ ಕಾರ್ಯಕರ್ತರ ವಿರುದ್ಧ 15 ಪ್ರಕರಣಗಳನ್ನು ದಾಖಲಿಸಲಾಗಿದ್ದು, ಮೂರು ಆರೋಪಪಟ್ಟಿಗಳನ್ನು ದಾಖಲಿಸಲಾಗಿದೆ ಮತ್ತು ಮೂರು ಕೇಡರ್‌ಗಳನ್ನು ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಗೃಹ ಸಚಿವಾಲಯ ತಿಳಿಸಿದೆ.

ಉಲ್ಫಾ ಇತರ 27 ಕ್ರಿಮಿನಲ್ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದು, ಅದರ 56 ಕಾರ್ಯಕರ್ತರನ್ನು ಬಂಧಿಸಲಾಗಿದೆ ಮತ್ತು 63 ಕಾರ್ಯಕರ್ತರು ಶರಣಾಗಿದ್ದಾರೆ. ಉಲ್ಫಾ ಸದಸ್ಯರಿಂದ 27 ಶಸ್ತ್ರಾಸ್ತ್ರಗಳು, 550 ಗುಂಡಿನ ಸುತ್ತುಗಳು, ಒಂಬತ್ತು ಗ್ರೆನೇಡ್‌ಗಳು ಮತ್ತು ಎರಡು ಸುಧಾರಿತ ಸ್ಫೋಟಕ ಸಾಧನಗಳನ್ನು ವಶಪಡಿಸಿಕೊಳ್ಳಲಾಗಿದೆ.

ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯಿದೆ, 1967 (1967 ರ 37) ನಿಬಂಧನೆಗಳ ಅಡಿಯಲ್ಲಿ ಉಲ್ಫಾವನ್ನು ಕಾನೂನುಬಾಹಿರ ಸಂಘಟನೆ ಎಂದು ಘೋಷಿಸಲು ಅಸ್ಸಾಂ ಸರ್ಕಾರವು ಶಿಫಾರಸು ಮಾಡಿದೆ ಎಂದು ಸಚಿವಾಲಯ ತಿಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT