ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರೊಂದಿಗೆ ಐಪಿಎಸ್ ಅಧಿಕಾರಿ ರಶ್ಮಿ ಶುಕ್ಲಾ 
ದೇಶ

ಮಹಾರಾಷ್ಟ್ರ: ವಿವಾದಿತ ಐಪಿಎಸ್ ಅಧಿಕಾರಿ ರಶ್ಮಿ ಶುಕ್ಲಾ ಡಿಜಿಪಿಯಾಗಿ ಮರು ನೇಮಕ

ಚುನಾವಣೆಗೆ ಮುನ್ನ ಭಾರತೀಯ ಚುನಾವಣಾ ಆಯೋಗದ ನಿರ್ದೇಶನದ ಮೇರೆಗೆ ಶುಕ್ಲಾ ಅವರನ್ನು ಡಿಜಿಪಿ ಹುದ್ದೆಯಿಂದ ವಜಾಗೊಳಿಸಿದ ನಂತರ ಸಂಜಯ್ ಕುಮಾರ್ ವರ್ಮಾ ಅವರು ಡಿಜಿಪಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.

ಮುಂಬೈ: ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಮುಗಿದ ನಂತರ ವಿವಾದಿತ ಐಪಿಎಸ್ ಅಧಿಕಾರಿ ರಶ್ಮಿ ಶುಕ್ಲಾ ಅವರನ್ನು ಪೊಲೀಸ್ ಮಹಾನಿರ್ದೇಶಕರಾಗಿ (DGP) ಮರುನೇಮಕಗೊಳಿಸಿ ರಾಜ್ಯ ಗೃಹ ಇಲಾಖೆ ಸೋಮವಾರ ಸಂಜೆ ಆದೇಶ ಹೊರಡಿಸಿದೆ.

ಚುನಾವಣೆಗೆ ಮುನ್ನ ಭಾರತೀಯ ಚುನಾವಣಾ ಆಯೋಗದ ನಿರ್ದೇಶನದ ಮೇರೆಗೆ ಶುಕ್ಲಾ ಅವರನ್ನು ಡಿಜಿಪಿ ಹುದ್ದೆಯಿಂದ ವಜಾಗೊಳಿಸಿದ ನಂತರ ಸಂಜಯ್ ಕುಮಾರ್ ವರ್ಮಾ ಅವರು ಡಿಜಿಪಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಶುಕ್ಲಾ ಅವರನ್ನು ಚುನಾವಣೆಯಿಂದ ದೂರವಿಡಬೇಕು ಎಂದು ಕಾಂಗ್ರೆಸ್ ಒತ್ತಾಯಿಸಿತ್ತು.

ಭಾರತೀಯ ಪೊಲೀಸ್ ಸೇವೆಯ ಹಿರಿಯ ಅಧಿಕಾರಿಯಾಗಿರುವ ವರ್ಮಾ ಅವರು ಚುನಾವಣಾ ಪ್ರಕ್ರಿಯೆ ಮುಗಿಯುವವರೆಗೆ ಡಿಜಿಪಿಯಾಗಿ ಇರಬೇಕಿತ್ತು. ಆದರೆ ಚುನಾವಣೆ ವೇಳೆ ಶುಕ್ಲಾ ಅವರನ್ನು ಕಡ್ಡಾಯ ರಜೆಯ ಮೇಲೆ ಕಳುಹಿಸಲಾಗಿತ್ತು.

ಚುನಾವಣಾ ಪ್ರಕ್ರಿಯೆ ಪೂರ್ಣಗೊಂಡು ಚುನಾವಣಾ ಫಲಿತಾಂಶ ಪ್ರಕಟವಾದ ಹಿನ್ನೆಲೆಯಲ್ಲಿ ಮಾದರಿ ನೀತಿ ಸಂಹಿತೆ ಸೋಮವಾರದಿಂದ ಸ್ಥಗಿತಗೊಂಡಿದೆ ಎಂದು ಗೃಹ ಇಲಾಖೆ ಆದೇಶದಲ್ಲಿ ತಿಳಿಸಲಾಗಿದೆ.

ನೀತಿ ಸಂಹಿತೆ ಸ್ಥಗಿತ ಹಿನ್ನೆಲೆಯಲ್ಲಿ ಸರ್ಕಾರ ಶುಕ್ಲಾ ಅವರ ಕಡ್ಡಾಯ ರಜೆ ಅವಧಿಯನ್ನು ಕೊನೆಗೊಳಿಸಿದ್ದು, ಡಿಜಿಪಿಯಾಗಿ ಮುಂದುವರೆಯಲು ಅವರಿಗೆ ಸೂಚಿಸಲಾಗಿದೆ. ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಒಕ್ಕೂಟವು ಭರ್ಜರಿ ಬಹುಮತದೊಂದಿಗೆ ಅಧಿಕಾರವನ್ನು ಉಳಿಸಿಕೊಂಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್