ರಾಹುಲ್ ಗಾಂಧಿ 
ದೇಶ

ರಾಹುಲ್ ಗಾಂಧಿಗೆ ಪೌರತ್ವ ಸಂಕಷ್ಟ? ಡಿಸೆಂಬರ್ 19 ರೊಳಗೆ ನಿರ್ಧರಿಸುವಂತೆ ಕೇಂದ್ರ ಗೃಹ ಸಚಿವಾಲಯಕ್ಕೆ ಹೈಕೋರ್ಟ್ ನಿರ್ದೇಶನ!

ರಾಹುಲ್ ಗಾಂಧಿಯ ಪೌರತ್ವ ಪ್ರಕರಣವನ್ನು ಸಿಬಿಐ ತನಿಖೆಗೆ ಒತ್ತಾಯಿಸಿ ಕರ್ನಾಟಕ ಬಿಜೆಪಿ ಕಾರ್ಯಕರ್ತ ಎಸ್ ವಿಘ್ನೇಶ್ ಶಿಶಿರ್ ಅವರು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ (ಪಿಐಎಲ್) ಮೇಲೆ ನ್ಯಾಯಮೂರ್ತಿಗಳಾದ ಎಆರ್ ಮಸೂದಿ ಮತ್ತು ಸುಭಾಷ್ ವಿದ್ಯಾರ್ಥಿ ಅವರ ವಿಭಾಗೀಯ ಪೀಠವು ಈ ಆದೇಶ ನೀಡಿದೆ.

ಲಖನೌ: ಬ್ರಿಟನ್ ಪೌರತ್ವ ಹೊಂದಿರುವ ಆರೋಪದ ಮೇಲೆ ಹಿರಿಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಭಾರತೀಯ ಪೌರತ್ವವನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಿರುವ ಅರ್ಜಿಯ ಕುರಿತು ಡಿಸೆಂಬರ್ 19ರೊಳಗೆ ನಿರ್ಧಾರ ಕೈಗೊಳ್ಳುವಂತೆ ಅಲಹಾಬಾದ್ ಹೈಕೋರ್ಟ್ ಕೇಂದ್ರ ಗೃಹ ಸಚಿವಾಲಯಕ್ಕೆ ಸೂಚಿಸಿದೆ.

ಹೈಕೋರ್ಟ್‌ನ ಲಖನೌ ಪೀಠವು ಕೇಂದ್ರಕ್ಕೆ ಸೂಚನೆಗಳನ್ನು ನೀಡಿದ್ದು ಈ ಪ್ರಾತಿನಿಧ್ಯದ ಮೇಲೆ ತೆಗೆದುಕೊಂಡ ಕ್ರಮದ ವಿವರಗಳನ್ನು ಕೇಳಿದೆ. ರಾಹುಲ್ ಗಾಂಧಿಯ ಪೌರತ್ವ ಪ್ರಕರಣವನ್ನು ಸಿಬಿಐ ತನಿಖೆಗೆ ಒತ್ತಾಯಿಸಿ ಕರ್ನಾಟಕ ಬಿಜೆಪಿ ಕಾರ್ಯಕರ್ತ ಎಸ್ ವಿಘ್ನೇಶ್ ಶಿಶಿರ್ ಅವರು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ (ಪಿಐಎಲ್) ಮೇಲೆ ನ್ಯಾಯಮೂರ್ತಿಗಳಾದ ಎಆರ್ ಮಸೂದಿ ಮತ್ತು ಸುಭಾಷ್ ವಿದ್ಯಾರ್ಥಿ ಅವರ ವಿಭಾಗೀಯ ಪೀಠವು ಈ ಆದೇಶ ನೀಡಿದೆ.

ಮೂರು ವಾರಗಳಲ್ಲಿ ಈ ಸಂಬಂಧ ಗೃಹ ಸಚಿವಾಲಯದಿಂದ ಸೂಚನೆಗಳನ್ನು ಪಡೆದು ಮುಂದಿನ ದಿನಾಂಕದಂದು ಉತ್ತರವನ್ನು ಸಲ್ಲಿಸುವಂತೆ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್ ಬಿ ಪಾಂಡೆ ಅವರಿಗೆ ನ್ಯಾಯಾಲಯ ಸೂಚಿಸಿದೆ.

ಪೌರತ್ವ ಪ್ರಕರಣದ ಸಿಬಿಐ ತನಿಖೆಯನ್ನು ಪ್ರಾರಂಭಿಸಲಾಗಿದೆ ಎಂದು ನವೆಂಬರ್ 6 ರಂದು ದೆಹಲಿ ಹೈಕೋರ್ಟ್‌ಗೆ ತಿಳಿಸಲಾಯಿತು. ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿಯವರ ದೆಹಲಿ ಹೈಕೋರ್ಟ್‌ನಲ್ಲಿ ರಾಹುಲ್ ಗಾಂಧಿ ಪೌರತ್ವ ಪ್ರಕರಣವನ್ನು ದಾಖಲಿಸಿದ್ದು ರಾಹುಲ್ ಗಾಂಧಿಯ ಭಾರತೀಯ ಪೌರತ್ವವನ್ನು ರದ್ದುಗೊಳಿಸುವಂತೆ ತಮ್ಮ ಪ್ರಾತಿನಿಧ್ಯವನ್ನು ನಿರ್ಧರಿಸಲು ಗೃಹ ಸಚಿವಾಲಯಕ್ಕೆ ನಿರ್ದೇಶನವನ್ನು ಕೋರಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್