ದೇವೇಂದ್ರ ಫಡ್ನವೀಸ್  
ದೇಶ

ದೇವೇಂದ್ರ ಫಡ್ನವೀಸ್ ಗೆ ಮಹಾರಾಷ್ಟ್ರ ಸಿಎಂ ಹುದ್ದೆ ಬಹುತೇಕ ಖಚಿತ; ಆದರೂ ಬೇರೆ ಹೆಸರುಗಳು ಮುಂಚೂಣಿಗೆ!

ಮುಂಬೈ: ಮಹಾರಾಷ್ಟ್ರದ ಮುಂದಿನ ಮುಖ್ಯಮಂತ್ರಿಯ ಬಗ್ಗೆ ಬಿಜೆಪಿ ನಾಯಕತ್ವದ ಯಾವುದೇ ನಿರ್ಧಾರವನ್ನು ಒಪ್ಪಿಕೊಳ್ಳುವುದಾಗಿ ಏಕನಾಥ್ ಶಿಂಧೆ ಅವರು ಸ್ಪಷ್ಟವಾಗಿ ಹೇಳಿರುವ ಮೂಲಕ, ದೇವೇಂದ್ರ ಫಡ್ನವೀಸ್ ಅವರಿಗೆ ಮುಖ್ಯಮಂತ್ರಿ ಪಟ್ಟ ನೀಡಲು ಇದ್ದ ಗೊಂದಲ ನಿವಾರಣೆಯಾಗಿದೆ. ಆದರೂ ಬಿಜೆಪಿ ಇತರ ಆಯ್ಕೆಗಳನ್ನು ಪರಿಶೀಲಿಸುತ್ತಿದೆ.

ವಿಧಾನಸಭೆ ಚುನಾವಣೆಯಲ್ಲಿ 288ರಲ್ಲಿ 132 ಸ್ಥಾನಗಳನ್ನು ಪಡೆದು ಬಿಜೆಪಿ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದು, ಮಹಾಯುತಿ ಮೈತ್ರಿಕೂಟ 230 ಸ್ಥಾನಗಳಲ್ಲಿ ಭರ್ಜರಿ ಗೆಲುವು ಸಾಧಿಸಿದ್ದರೂ ಏಕನಾಥ್ ಶಿಂಧೆ ಅವರನ್ನು ಮತ್ತೆ ಸಿಎಂ ಮಾಡಲು ಸಾಧ್ಯವಿಲ್ಲ ಎಂದು ಪಕ್ಷದ ಉನ್ನತ ನಾಯಕತ್ವ ತಿಳಿಸಿರುವುದಾಗಿ ಬಿಜೆಪಿ ಮೂಲಗಳು ತಿಳಿಸಿವೆ.

ದೇವೇಂದ್ರ ಫಡ್ನವೀಸ್ ಅವರಿಗೆ ಸಿಎಂ ಸ್ಥಾನ ಸಿಗಬಹುದು. ಆದರೆ ಉತ್ತರ ಮಹಾರಾಷ್ಟ್ರದಿಂದ ನಾಯಕತ್ವದ ಆಯ್ಕೆಗಳನ್ನು ಅನ್ವೇಷಿಸುವ ಮೂಲಕ (ಮಹಾಯುತಿ 47 ವಿಧಾನಸಭಾ ಸ್ಥಾನಗಳಲ್ಲಿ 44 ಸ್ಥಾನಗಳನ್ನು ಗೆದ್ದಿದ್ದಾರೆ) ವಿದರ್ಭ ಮತ್ತು ಪಶ್ಚಿಮ ಮಹಾರಾಷ್ಟ್ರದ ಸಾಂಪ್ರದಾಯಿಕ ರಾಜಕೀಯ ಮ್ಯಾಟ್ರಿಕ್ಸ್ ನ್ನು ಮುರಿಯಲು ಉನ್ನತ ನಾಯಕತ್ವ ಬಯಸಿದೆ ಎಂದು ಒಬ್ಬರು ಹೇಳುತ್ತಾರೆ.

ಮುಖ್ಯಮಂತ್ರಿ ಹುದ್ದೆಗೆ ದೇವೇಂದ್ರ ಫಡ್ನವೀಸ್‌ ಮುಂಚೂಣಿಯಲ್ಲಿರುವುದು ನಿಜವಾದರೂ ಉತ್ತರ ಮಹಾರಾಷ್ಟ್ರದ ನಾಯಕರೂ ರೇಸ್ ನಲ್ಲಿದ್ದಾರೆ. ಈ ನಾಯಕರಲ್ಲಿ ಮಾಜಿ ಸಚಿವ ಗಿರೀಶ್ ಮಹಾಜನ್ ಅವರು ದೇವೇಂದ್ರ ಫಡ್ನವಿಸ್ ಅವರಿಗೆ ನಿಕಟರಾಗಿದ್ದಾರೆ. ಕೇಂದ್ರ ಸಚಿವ ಅಮಿತ್ ಶಾ ಅವರ ನಿಕಟವರ್ತಿಯಾಗಿರುವ ಮಾಜಿ ಕಂದಾಯ ಸಚಿವ ರಾಧಾಕೃಷ್ಣ ವಿಖೆ ಪಾಟೀಲ್ ಅವರು ಗ್ರಾಮೀಣ ಪ್ರದೇಶದ ಪ್ರಬಲ ನಾಯಕರಾಗಿದ್ದಾರೆ. ಕೆಲವು ಮಹಿಳಾ ಬಿಜೆಪಿ ನಾಯಕರೂ ಉನ್ನತ ಹುದ್ದೆಯ ರೇಸ್‌ ನಲ್ಲಿದ್ದಾರೆ ಎಂದು ಹೇಳಲಾಗುತ್ತಿದೆ.

ಎನ್‌ಸಿಪಿ ಮತ್ತು ಶಿವಸೇನೆ ಶಾಸಕರು ಕ್ರಮವಾಗಿ ಅಜಿತ್ ಪವಾರ್ ಮತ್ತು ಏಕನಾಥ್ ಶಿಂಧೆ ಅವರನ್ನು ತಮ್ಮ ನಾಯಕರನ್ನಾಗಿ ಆಯ್ಕೆ ಮಾಡಿದ್ದಾರೆ ಆದರೆ ಬಿಜೆಪಿ ಇನ್ನೂ ತನ್ನ ಚುನಾಯಿತ ಶಾಸಕರ ಸಭೆಯನ್ನು ಕರೆದು ಮುಖ್ಯಸ್ಥರ ಹಕ್ಕು ಪಡೆಯುವ ಸಾಧ್ಯತೆಯಿರುವ ತಮ್ಮ ನಾಯಕನನ್ನು ಆಯ್ಕೆ ಮಾಡಬೇಕಾಗಿದೆ ಎಂದು ಇನ್ನೊಬ್ಬ ಹಿರಿಯ ಬಿಜೆಪಿ ನಾಯಕರು ಹೇಳುತ್ತಾರೆ.

ನಿರ್ಗಮಿತ ಸಿಎಂ ಶಿಂಧೆ ಸರ್ಕಾರ ರಚನೆಗೆ ಅಡ್ಡಿಯಾಗುವುದಿಲ್ಲ ಎಂದು ಈ ಹಿಂದೆಯೇ ಸ್ಪಷ್ಟಪಡಿಸಿದ್ದರು. ನಾನು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸಚಿವ ಅಮಿತ್ ಶಾ ಅವರೊಂದಿಗೆ ಮಾತನಾಡಿದ್ದೇನೆ, ಅವರು ತೆಗೆದುಕೊಳ್ಳುವ ಯಾವುದೇ ನಿರ್ಧಾರ ನನಗೆ ಮತ್ತು ನನ್ನ ಪಕ್ಷಕ್ಕೆ ಸ್ವೀಕಾರಾರ್ಹ ಎಂದು ತಿಳಿಸಿದ್ದೇನೆ. ನನ್ನ ಕಡೆಯಿಂದ ಯಾವುದೇ ಅಡೆತಡೆ ಇರುವುದಿಲ್ಲ. ಯಾವುದೇ ನಿರ್ಧಾರವನ್ನು ಸಂತೋಷದಿಂದ ಸ್ವೀಕರಿಸುತ್ತೇನೆ. ನನ್ನನ್ನು ಮತ್ತೆ ಮುಖ್ಯಮಂತ್ರಿಯನ್ನಾಗಿ ಮಾಡದಿದ್ದರೂ, ನಾನು ಅಸಮಾಧಾನಗೊಳ್ಳುವುದಿಲ್ಲ, ಮಹಾರಾಷ್ಟ್ರದ ಕಲ್ಯಾಣ ಮತ್ತು ಅಭಿವೃದ್ಧಿಗಾಗಿ ಕೆಲಸ ಮಾಡುವುದು ನನ್ನ ಗುರಿ ಎಂದಿದ್ದಾರೆ.

ಈ ಮಧ್ಯೆ, ಬಿಜೆಪಿ ಮತ್ತು ಅದರ ಮೈತ್ರಿ ಪಾಲುದಾರರ ನಾಯಕರು ಸರ್ಕಾರ ರಚನೆಯನ್ನು ಅಂತಿಮಗೊಳಿಸಲು ಪಕ್ಷದ ಉನ್ನತ ನಾಯಕತ್ವವನ್ನು ಭೇಟಿ ಮಾಡಲು ದೆಹಲಿಗೆ ತೆರಳುವ ಸಾಧ್ಯತೆಯಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT