ಸಲ್ಮಾನ್ ರೆಹಮಾನ್ ಖಾನ್ online desk
ದೇಶ

ಸಿಬಿಐ, ಎನ್‌ಐಎ, ಇಂಟರ್‌ಪೋಲ್‌ ಸಮನ್ವಯ ಕಾರ್ಯಾಚರಣೆ: ಲಷ್ಕರ್-ಎ-ತೊಯ್ಬಾ ಸದಸ್ಯ ರುವಾಂಡಾದಿಂದ ಗಡಿಪಾರು

ಅಂತರಾಷ್ಟ್ರೀಯವಾಗಿ ನಿಷೇಧಕ್ಕೆ ಒಳಗಾದ ಭಯೋತ್ಪಾದಕ ಸಂಘಟನೆಯ ಸದಸ್ಯನಾಗಿರುವ ಸಲ್ಮಾನ್ ರೆಹಮಾನ್ ಖಾನ್, ಬೆಂಗಳೂರಿನಲ್ಲಿ ಮತ್ತಷ್ಟು ಭಯೋತ್ಪಾದಕ ಚಟುವಟಿಕೆಗಳಿಗೆ ಶಸ್ತ್ರಾಸ್ತ್ರ, ಮದ್ದುಗುಂಡು ಮತ್ತು ಸ್ಫೋಟಕಗಳನ್ನು ಒದಗಿಸುವಲ್ಲಿ ಸಹಾಯ ಮಾಡಿದ್ದ ಎಂದು ಅಧಿಕಾರಿಗಳು ಹೇಳಿದ್ದಾರೆ.

ನವದೆಹಲಿ: ಎನ್‌ಐಎ ಮತ್ತು ಸಿಬಿಐ ನಡೆಸಿದ ಕಾರ್ಯಾಚರಣೆಯಲ್ಲಿ ಇಂಟರ್‌ಪೋಲ್ ರೆಡ್ ನೋಟಿಸ್ ಎದುರಿಸುತ್ತಿರುವ ಪಾಕಿಸ್ತಾನ ಮೂಲದ ಭಯೋತ್ಪಾದಕ ಗುಂಪು ಲಷ್ಕರ್-ಎ-ತೈಬಾ (ಎಲ್‌ಇಟಿ) ಸದಸ್ಯನನ್ನು ರುವಾಂಡಾ ಗುರುವಾರ ಭಾರತಕ್ಕೆ ಹಸ್ತಾಂತರಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಂತರಾಷ್ಟ್ರೀಯವಾಗಿ ನಿಷೇಧಕ್ಕೆ ಒಳಗಾದ ಭಯೋತ್ಪಾದಕ ಸಂಘಟನೆಯ ಸದಸ್ಯನಾಗಿರುವ ಸಲ್ಮಾನ್ ರೆಹಮಾನ್ ಖಾನ್, ಬೆಂಗಳೂರಿನಲ್ಲಿ ಮತ್ತಷ್ಟು ಭಯೋತ್ಪಾದಕ ಚಟುವಟಿಕೆಗಳಿಗೆ ಶಸ್ತ್ರಾಸ್ತ್ರ, ಮದ್ದುಗುಂಡು ಮತ್ತು ಸ್ಫೋಟಕಗಳನ್ನು ಒದಗಿಸುವಲ್ಲಿ ಸಹಾಯ ಮಾಡಿದ್ದ ಎಂದು ಅಧಿಕಾರಿಗಳು ಹೇಳಿದ್ದಾರೆ.

ಭಯೋತ್ಪಾದನೆ ಸಂಬಂಧಿತ ಅಪರಾಧಗಳಿಗಾಗಿ ಎನ್‌ಐಎ ಬಯಸಿದ ಸಲ್ಮಾನ್ ರೆಹಮಾನ್ ಖಾನ್‌ನ ರುವಾಂಡಾದಿಂದ ಭಾರತಕ್ಕೆ ವಾಪಸ್ ಕರೆತರಲು " ಸಿಬಿಐ ಜಾಗತಿಕ ಕಾರ್ಯಾಚರಣೆ ಕೇಂದ್ರ ಎನ್‌ಐಎ ಮತ್ತು ಇಂಟರ್‌ಪೋಲ್ ನ್ಯಾಷನಲ್ ಸೆಂಟ್ರಲ್ ಬ್ಯೂರೋ-ಕಿಗಾಲಿಯೊಂದಿಗೆ ನಿಕಟವಾಗಿ ಸಂಘಟಿತವಾಗಿತ್ತು ಎಂದು ಸಿಬಿಐ ವಕ್ತಾರರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) 2023 ರಲ್ಲಿ ರೆಹಮಾನ್ ವಿರುದ್ಧ ಬೆಂಗಳೂರಿನಲ್ಲಿ ಭಯೋತ್ಪಾದನೆಯನ್ನು ಹರಡಲು ಕ್ರಿಮಿನಲ್ ಪಿತೂರಿಗೆ ಸಂಬಂಧಿಸಿದ ಪ್ರಕರಣವನ್ನು ದಾಖಲಿಸಿದೆ ಎಂದು ವಕ್ತಾರರು ಹೇಳಿದ್ದಾರೆ.

ಬೆಂಗಳೂರಿನ ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ಕೂಡ ದಾಖಲಾಗಿದೆ. ಈ ಹಿಂದೆ ಪೋಕ್ಸೊ ಪ್ರಕರಣದಲ್ಲಿ (20182022) ಜೈಲಿನಲ್ಲಿದ್ದ ಖಾನ್, ಭಯೋತ್ಪಾದನಾ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೊಳಗಾದ ಟಿ ನಾಸೀರ್ ಜೈಲಿನಲ್ಲಿದ್ದ ಸಮಯದಲ್ಲಿ ತೀವ್ರಗಾಮಿಯಾಗಿ ಬದಲಾಗಿದ್ದ ಮತ್ತು ಉಗ್ರ ಸಂಘಟನೆಗೆ ನೇಮಕಗೊಂಡ ನಂತರ ಇತರ ಭಯೋತ್ಪಾದಕ ಆರೋಪಿಗಳಿಗೆ ಸ್ಫೋಟಕಗಳನ್ನು ಸಂಗ್ರಹಿಸಲು ಮತ್ತು ವಿತರಿಸಲು ಅನುಕೂಲ ಮಾಡಿಕೊಟ್ಟಿದ್ದ ಎಂದು ಎನ್ಐಎ ತನಿಖೆಯಿಂದ ತಿಳಿದುಬಂದಿದೆ.

ನಾಸೀರ್ ಜೈಲಿನಿಂದ ನ್ಯಾಯಾಲಯಕ್ಕೆ ಪರಾರಿಯಾಗಲು ಸಂಚು ರೂಪಿಸಿದ್ದಲ್ಲದೆ, ದೇಶದಲ್ಲಿ ಮತ್ತಷ್ಟು ಎಲ್‌ಇಟಿ ಕಾರ್ಯಾಚರಣೆಗಳಿಗೆ ಉತ್ತೇಜನ ನೀಡುವ ಕೆಲಸ ಮಾಡುತ್ತಿದ್ದ ಸಂಸ್ಥೆ ಹೇಳಿದೆ. ಇಂಟರ್‌ಪೋಲ್‌ನ ಸಮನ್ವಯದಲ್ಲಿ ಇದೇ ರೀತಿಯ ಕಾರ್ಯಾಚರಣೆಗಳನ್ನು ನಡೆಸಿ ಖಾನ್ ಮಾದರಿಯಲ್ಲೇ ಇಬ್ಬರು ಆರೋಪಿಗಳನ್ನು ಸೌದಿ ಅರೇಬಿಯಾದಿಂದ ವಾಪಸ್ ಕರೆಸಿತ್ತು.

ಇಂಟರ್‌ಪೋಲ್ ರೆಡ್ ನೋಟಿಸ್ ಹೊಂದಿದ್ದ ಬರ್ಕತ್ ಅಲಿ ಖಾನ್ 2012ರ ಗಲಭೆ ಮತ್ತು ಸ್ಫೋಟಕ ವಸ್ತುಗಳ ಬಳಕೆಯ ಪ್ರಕರಣದಲ್ಲಿ ಬೇಕಾಗಿದ್ದ. ನವೆಂಬರ್ 14 ರಂದು ಅವರನ್ನು ಸೌದಿ ಅರೇಬಿಯಾದಿಂದ ವಾಪಸ್ ಕರೆತರಲಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT