ಸಂವಿಧಾನದ ಪುಸ್ತಕ ಹಿಡಿದು ಪ್ರಮಾಣವಚನ ಸ್ವೀಕರಿಸಿದ ಪ್ರಿಯಾಂಕಾ ಗಾಂಧಿ.  
ದೇಶ

ವಯನಾಡು ಸಂಸದೆಯಾಗಿ ಪ್ರಿಯಾಂಕಾ ಗಾಂಧಿ ಪ್ರಮಾಣ ವಚನ ಸ್ವೀಕಾರ

ಪ್ರಿಯಾಂಕಾ ಗಾಂಧಿ 2019 ರಲ್ಲಿ ಸಕ್ರಿಯ ರಾಜಕೀಯಕ್ಕೆ ಧುಮುಕಿದರು ಮತ್ತು ನಂತರ ಕಾಂಗ್ರೆಸ್‌‍ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡರು.

ನವದೆಹಲಿ: ಕೇರಳದ ವಯನಾಡ್‌ನಿಂದ ನಡೆದ ಉಪಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ್ದ ಕಾಂಗ್ರೆಸ್‌‍ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಗುರುವಾರ ಲೋಕಸಭೆಯ ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಕೈಯಲ್ಲಿ ಸಂವಿಧಾನದ ಪುಸ್ತಕ ಹಿಡಿದು ಪ್ರಿಯಾಂಕಾ ಅವರು ಪ್ರಮಾಣವಚನ ಸ್ವೀಕಾರ ಮಾಡಿದ್ದು, ಪ್ರಿಯಾಂಕಾ ಅವರಿಗೆ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು ಪ್ರಮಾಣ ವಚನ ಬೋಧಿಸಿದರು.

ಇದೇ ವೇಳೆ ನಾಂದೇಡ್‌ ಉಪಚುನಾವಣೆಯಲ್ಲಿ ಗೆದ್ದಿರುವ ರವೀಂದ್ರ ಚವಾಣ್‌ (ಕಾಂಗ್ರೆಸ್‌) ಕೂಡ ದೇವರ ಹೆಸರಿನಲ್ಲಿ ಮರಾಠಿಯಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಇತ್ತೀಚೆಗೆ ಅವರ ತಂದೆ ವಸಂತರಾವ್‌ ಚವಾಣ್‌ ಅವರ ನಿಧನದ ಹಿನ್ನೆಲೆಯಲ್ಲಿ ಉಪಚುನಾವಣೆ ನಡೆದಿತ್ತು.

ಪ್ರಿಯಾಂಕಾ ಗಾಂಧಿ 2019 ರಲ್ಲಿ ಸಕ್ರಿಯ ರಾಜಕೀಯಕ್ಕೆ ಧುಮುಕಿದರು ಮತ್ತು ನಂತರ ಕಾಂಗ್ರೆಸ್‌‍ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡರು. ಐದು ವರ್ಷಗಳ ನಂತರ, ಪ್ರಿಯಾಂಕಾ ಗಾಂಧಿ ಅವರು ಚುನಾಯಿತ ಜನಪ್ರತಿನಿಧಿಯಾಗಿ ತಮ ಪ್ರಯಾಣವನ್ನು ಪ್ರಾರಂಭಿಸಿದ್ದಾರೆ.

ಪ್ರಮಾಣವಚನ ಸ್ವೀಕಾರದ ವೇಳೆ ಪ್ರಿಯಾಂಕಾ ಅವರು ಕೇರಳದ ಬ್ರೋಕೆಡ್ ಸೀರೆಯನ್ನು ಧರಿಸಿದ್ದರು. ತನ್ನ ತಾಯಿ ಸೋನಿಯಾ ಗಾಂಧಿ, ಸಹೋದರ ರಾಹುಲ್ ಗಾಂಧಿ ಮತ್ತು ಪತಿ ರಾಬರ್ಟ್ ವಾದ್ರಾ ಅವರೊಂದಿಗೆ ಸಂಸತ್ ಭವನಕ್ಕೆ ಆಗಮಿಸಿದ್ದರು. ಅಲ್ಲದೆ, ಪ್ರಿಯಾಂಕಾ ಅವರ ಮಕ್ಕಳಿಬ್ಬರೂ ಸಂಸತ್​ಗೆ ಆಗಮಿಸಿದ್ದರು.

ಇತ್ತೀಚೆಗೆ ಪ್ರಕಟಗೊಂಡ ವಯನಾಡ್ ಲೋಕಸಭಾ ಉಪ ಚುನಾವಣೆಯಲ್ಲಿ 4 ಲಕ್ಷಕ್ಕೂ ಹೆಚ್ಚು ಮತಗಳ ದಾಖಲೆ ಅಂತರದಿಂದ ಗೆಲುವು ಸಾಧಿಸಿರುವ ಪ್ರಿಯಾಂಕಾ ಗಾಂಧಿ, ಆ ಮೂಲಕ ಪ್ರಪ್ರಥಮ ಬಾರಿಗೆ ಚುನಾಯಿತ ಪ್ರತಿನಿಧಿಯಾಗಿದ್ದಾರೆ.

ಇಲ್ಲಿಯವರೆಗೆ ಪಕ್ಷ ಸಂಘಟನೆಯಲ್ಲಿ ತಮ್ಮ ಸಹೋದರ ರಾಹುಲ್ ಗಾಂಧಿಗೆ ನೆರವು ನೀಡುತ್ತಾ ಬಂದಿದ್ದ ಪ್ರಿಯಾಂಕಾ ಗಾಂಧಿ, ಇದೀಗ ಲೋಕಸಭೆಯಲ್ಲೂ ತಮ್ಮ ಸಹೋದರನಿಗೆ ಸಾಥ್ ನೀಡಲಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

SCROLL FOR NEXT