ಮೊಹಮ್ಮದ್ ಜುಬೇರ್ TNIE
ದೇಶ

'ಭಾರತದ ಸಾರ್ವಭೌಮತ್ವಕ್ಕೆ ಅಪಾಯ': ಮೊಹಮ್ಮದ್ ಜುಬೇರ್ ವಿರುದ್ಧ ಉತ್ತರ ಪ್ರದೇಶ ಪೊಲೀಸರು FIR ದಾಖಲು

ಆಲ್ಟ್ ನ್ಯೂಸ್ ಸಹ-ಸಂಸ್ಥಾಪಕ ಮೊಹಮ್ಮದ್ ಜುಬೇರ್ ವಿರುದ್ಧ 'ಭಾರತದ ಸಾರ್ವಭೌಮತೆ, ಏಕತೆ ಮತ್ತು ಸಮಗ್ರತೆಗೆ ಅಪಾಯ ತಂದೊಡ್ಡುವ' ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಅಲಹಾಬಾದ್ ಹೈಕೋರ್ಟ್‌ಗೆ ಗಾಜಿಯಾಬಾದ್ ಪೊಲೀಸರು ಮಾಹಿತಿ ನೀಡಿದ್ದಾರೆ.

ಗಾಜಿಯಾಬಾದ್(ಉತ್ತರ ಪ್ರದೇಶ): ಆಲ್ಟ್ ನ್ಯೂಸ್ ಸಹ-ಸಂಸ್ಥಾಪಕ ಮೊಹಮ್ಮದ್ ಜುಬೇರ್ ವಿರುದ್ಧ 'ಭಾರತದ ಸಾರ್ವಭೌಮತೆ, ಏಕತೆ ಮತ್ತು ಸಮಗ್ರತೆಗೆ ಅಪಾಯ ತಂದೊಡ್ಡುವ' ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಅಲಹಾಬಾದ್ ಹೈಕೋರ್ಟ್‌ಗೆ ಗಾಜಿಯಾಬಾದ್ ಪೊಲೀಸರು ಮಾಹಿತಿ ನೀಡಿದ್ದಾರೆ.

ಮುಸ್ಲಿಮರಿಂದ ಹಿಂಸಾಚಾರವನ್ನು ಪ್ರಚೋದಿಸುವ ಸಲುವಾಗಿ ಘಾಜಿಯಾಬಾದ್‌ನ ದಾಸ್ನಾ ದೇವಿ ದೇವಸ್ಥಾನದ ಅರ್ಚಕ ಯತಿ ನರಸಿಂಹಾನಂದ ಅವರ ಹಳೆಯ ವೀಡಿಯೊ ಕ್ಲಿಪ್ ಅನ್ನು ಹಂಚಿಕೊಂಡಿದ್ದಾರೆಎಂದು ಮೊಹಮ್ಮದ್ ಜುಬೇರ್ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿದ್ದರು. ಈ ಎಫ್ಐಆರ್ ರದ್ದುಗೊಳಿಸುವಂತೆ ಕೋರಿ ಪತ್ರಕರ್ತ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ನಡೆಸುತ್ತಿರುವ ಸಂದರ್ಭದಲ್ಲಿ ಹೇಳಿಕೆ ಬಂದಿದೆ. ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್) ಸೆಕ್ಷನ್ 152ರ ಅಡಿಯಲ್ಲಿ ಭಾರತದ ಸಾರ್ವಭೌಮತೆ, ಏಕತೆ ಮತ್ತು ಸಮಗ್ರತೆಗೆ ಅಪಾಯವನ್ನುಂಟುಮಾಡುವ ಅಪರಾಧವನ್ನು ಪತ್ರಕರ್ತನ ವಿರುದ್ಧ ಎಫ್‌ಐಆರ್ ನಲ್ಲಿ ದಾಖಲಿಸಲಾಗಿದೆ ಎಂದು ಪ್ರಕರಣದ ತನಿಖೆಯ ಅಧಿಕಾರಿ ಹೈಕೋರ್ಟ್‌ಗೆ ತಿಳಿಸಿದರು.

ವಿಚಾರಣೆಯ ಸಂದರ್ಭದಲ್ಲಿ ಜುಬೈರ್ ಪರ ವಕೀಲೆ ವೃಂದಾ ಗ್ರೋವರ್ ನ್ಯಾಯಾಲಯಕ್ಕೆ ಯುಪಿ ಪೊಲೀಸರು ಎಫ್‌ಐಆರ್‌ನಲ್ಲಿ ಹೆಚ್ಚಿನ ವಿಭಾಗಗಳನ್ನು ಸೇರಿಸಿದ್ದಾರೆ ಎಂದು ಹೇಳಿದರು. ಆದರೆ ಈ ಬಗ್ಗೆ ಯಾವುದೇ ಔಪಚಾರಿಕ ದಾಖಲೆಯನ್ನು ನೀಡಿಲ್ಲ. ಇಂದು ಬೆಳಿಗ್ಗೆ, ತನಿಖಾಧಿಕಾರಿಯು ಐಟಿ ಕಾಯಿದೆಯ ಸೆಕ್ಷನ್ 152 (ಬಿಎನ್ಎಸ್) ಮತ್ತು ಸೆಕ್ಷನ್ 66ರ ಸೇರ್ಪಡೆಯನ್ನು ಬಹಿರಂಗಪಡಿಸುವ ಅಫಿಡವಿಟ್ ಅನ್ನು ಸಲ್ಲಿಸಿದ್ದಾರೆ ಎಂದರು. ಮೊದಲು ಜುಬೈರ್ ವಿರುದ್ಧದ ಎಲ್ಲಾ ಆರೋಪಗಳು ಗರಿಷ್ಠ ಏಳು ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸುವ ಸೆಕ್ಷನ್‌ಗಳ ಅಡಿಯಲ್ಲಿದ್ದು, ಅನಗತ್ಯವಾಗಿ ಬಂಧನ ಮಾಡಲಾಗಿದೆ. ಆದಾಗ್ಯೂ, ಸೆಕ್ಷನ್ 152 ಅನ್ನು ಸೇರಿಸುವ ಮೂಲಕ ವೈಯಕ್ತಿಕ ಸ್ವಾತಂತ್ರ್ಯವನ್ನು ಅಪಾಯಕ್ಕೆ ಸಿಲುಕಿಸಲಾಗುತ್ತಿದೆ ಎಂದು ನಾವು ಭಾವಿಸುತ್ತೇವೆ ಎಂದರು.

ಯತಿ ನರಸಿಂಹಾನಂದ ಸರಸ್ವತಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಉದಿತಾ ತ್ಯಾಗಿ ಅವರು ಅಕ್ಟೋಬರ್ 8ರಂದು ಮೂಲ ಎಫ್‌ಐಆರ್ ದಾಖಲಿಸಿದ್ದಾರೆ. ಎಫ್‌ಐಆರ್‌ನಲ್ಲಿ, ಜುಬೈರ್ ವಿರುದ್ಧ ದ್ವೇಷವನ್ನು ಉತ್ತೇಜಿಸುವುದು (ಸೆಕ್ಷನ್ 196 ಬಿಎನ್‌ಎಸ್), ಸುಳ್ಳು ಪುರಾವೆಗಳನ್ನು ನಿರ್ಮಿಸುವುದು (ಸೆಕ್ಷನ್ 228 ಬಿಎನ್‌ಎಸ್), ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸುವುದು (ಸೆಕ್ಷನ್ 299 ಬಿಎನ್‌ಎಸ್), ಮಾನನಷ್ಟ (ಸೆಕ್ಷನ್ 356 (3) ಬಿಎನ್‌ಎಸ್) ಮತ್ತು ಕ್ರಿಮಿನಲ್ ಅಪರಾಧಗಳ ಆರೋಪವಿದೆ.

ಅಕ್ಟೋಬರ್ 3ರಂದು ನರಸಿಂಹಾನಂದರ ಹಳೆಯ ವೀಡಿಯೊ ಕ್ಲಿಪ್ ಅನ್ನು ಜುಬೈರ್ ಪೋಸ್ಟ್ ಮಾಡಿರುವುದು ಮುಸ್ಲಿಮರಿಂದ ಹಿಂಸಾಚಾರವನ್ನು ಪ್ರಚೋದಿಸುವ ಗುರಿಯನ್ನು ಹೊಂದಿದೆ ಎಂದು ತ್ಯಾಗಿ ಹೇಳಿದ್ದಾರೆ. ಆದರೆ, ಎಫ್‌ಐಆರ್ ರದ್ದುಗೊಳಿಸುವಂತೆ ಜುಬೇರ್ ಅಲಹಾಬಾದ್ ಹೈಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯಾವ ಕ್ರಾಂತಿಯು ಇಲ್ಲ, ಕೇವಲ ''ಮಾಧ್ಯಮ ಸೃಷ್ಟಿ''; ನನ್ನ ಸ್ಥಾನ ಈಗಲೂ ಗಟ್ಟಿ, ಮುಂದೆಯೂ ಗಟ್ಟಿ

ಬೆಂಗಳೂರು ಎಟಿಎಂ ದರೋಡೆ ಪ್ರಕರಣ: ತಿರುಪತಿಯಲ್ಲಿ ಇಬ್ಬರ ಬಂಧನ

ನೇಪಾಳದಲ್ಲಿ ಮತ್ತೆ ಭುಗಿಲೆದ್ದ Gen- Z​​ ಹಿಂಸಾಚಾರ, ಕರ್ಫ್ಯೂ ಜಾರಿ; ಪ್ರಚೋದನೆ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆ

Delhi Blast: ವೈದ್ಯನಾದರೂ ತಲೆ ತುಂಬ 'ಇಸ್ಲಾಮ್ ಮೂಲಭೂತವಾದ' ತುಂಬಿಕೊಂಡಿದ್ದ ಬಾಂಬರ್! ರೋಗಿಗಳಿಗೆ ಏನು ಹೇಳ್ತಿದ್ದ ಗೊತ್ತಾ?

Delhi Blast: ಅಲ್ ಫಲಾಹ್ ವಿಶ್ವವಿದ್ಯಾಲಯದಲ್ಲಿ ಪರಿಶೀಲನೆ, 200 ವೈದ್ಯರು, ಸಿಬ್ಬಂದಿಗಳ ವಿಚಾರಣೆ

SCROLL FOR NEXT