ದೇವೇಂದ್ರ ಫಡ್ನವಿಸ್ - ಅಮಿತ್ ಶಾ - ಏಕನಾಥ್ ಶಿಂಧೆ  
ದೇಶ

ಮಹಾರಾಷ್ಟ್ರ ಸಿಎಂ ಪಟ್ಟ ಬಿಜೆಪಿಗೆ; ಮೂರು ಪ್ರಮುಖ ಖಾತೆ, ಡಿಸಿಎಂ ಸ್ಥಾನಕ್ಕೆ ಶಿಂಧೆ ಪಟ್ಟು

ಮಹಾರಾಷ್ಟ್ರ ನಿಯೋಜಿತ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಬಿಜೆಪಿಗೆ ಮುಖ್ಯಮಂತ್ರಿ ಸ್ಥಾನವನ್ನು ಬಿಟ್ಟುಕೊಡಲು ಸಿದ್ಧರಾಗಿದ್ದರೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ರಾಜಿ ಸೂತ್ರವನ್ನು ನೀಡಿದ್ದಾರೆ.

ನವದೆಹಲಿ: ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಫಲಿತಾಂಶ ಪ್ರಕಟವಾಗಿ ಐದು ದಿನ ಕಳೆದಿದ್ದು, ಮಹಾಯುತಿ ಭರ್ಜರಿ ಗೆಲುವು ಸಾಧಿಸಿದರು ಕೂಡ ಹೊಸ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿಯೇ ಉಳಿದಿದೆ.

ಮಹಾರಾಷ್ಟ್ರ ನಿಯೋಜಿತ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಬಿಜೆಪಿಗೆ ಮುಖ್ಯಮಂತ್ರಿ ಸ್ಥಾನವನ್ನು ಬಿಟ್ಟುಕೊಡಲು ಸಿದ್ಧರಾಗಿದ್ದರೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ರಾಜಿ ಸೂತ್ರವನ್ನು ನೀಡಿದ್ದಾರೆ ಎಂದು ಶಿವಸೇನೆ ಮೂಲಗಳು ತಿಳಿಸಿವೆ.

288 ಸದಸ್ಯ ಬಲದ ರಾಜ್ಯ ವಿಧಾನಸಭೆಯಲ್ಲಿ ಮಹಾಯುತಿ 230 ಸ್ಥಾನಗಳನ್ನು ಗೆದ್ದ ನಂತರ ಅಧಿಕಾರ ಹಂಚಿಕೆ ಕುರಿತು ಚರ್ಚಿಸಲು ಶಿಂಧೆ, ದೇವೇಂದ್ರ ಫಡ್ನವಿಸ್ ಮತ್ತು ಅಜಿತ್ ಪವಾರ್ ಅವರು ಗುರುವಾರ ರಾತ್ರಿ ದೆಹಲಿಯಲ್ಲಿ ಅಮಿ ಶಾ ಅವರನ್ನು ಭೇಟಿ ಮಾಡಿದ್ದರು.

ತಮ್ಮ ನಾಯಕತ್ವದಲ್ಲಿ ವಿಧಾನಸಭಾ ಚುನಾವಣೆ ನಡೆದಿದ್ದರಿಂದ ಮಹಿಳಾ ಮತದಾರರು, ಮರಾಠರು ಮತ್ತು ಒಬಿಸಿಗಳು, ಲಾಡ್ಲಿ ಬಹೆನಾ ಯೋಜನೆ, ಮೀಸಲಾತಿ ನಿರ್ಧಾರ ಮತ್ತು ವಿವಿಧ ಸಮುದಾಯಗಳಿಗೆ ಸ್ಥಾಪಿಸಲಾದ ಸಹಕಾರ ಮಂಡಳಿಗಳಿಂದಾಗಿ ಮಹಾಯುತಿಗೆ ಮತ ಹಾಕಿದ್ದಾರೆ ಎಂದು ಶಿಂಧೆ ಅಮಿತ್ ಶಾ ಅವರಿಗೆ ತಿಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

"ತಾವು ಮಹಾರಾಷ್ಟ್ರದ ಮುಂದಿನ ಮುಖ್ಯಮಂತ್ರಿಯಾಗುತ್ತಾರೆ ಎಂಬ ನಿರೀಕ್ಷೆಯೊಂದಿಗೆ ಜನ ಮತ ಹಾಕಿದ್ದಾರೆ ಎಂದು ಶಿಂಧೆ ಹೇಳಿದ್ದಾರೆ. ಅಲ್ಲದೆ ಒಂದು ವೇಳೆ ತಮ್ಮನ್ನು ಮುಖ್ಯಮಂತ್ರಿಯನ್ನಾಗಿ ಮಾಡದಿದ್ದರೆ, ಸಮಾಜದ ಈ ವರ್ಗಗಳಿಗೆ ತಪ್ಪು ಸಂದೇಶ ರವಾನೆಯಾಗುತ್ತದೆ ಎಂದು ತಿಳಿಸಿದ್ದಾರೆ.

132 ಸ್ಥಾನಗಳನ್ನು ಗೆದ್ದಿರುವುದರಿಂದ ಮುಂದಿನ ಸಿಎಂ ನಮ್ಮ ಪಕ್ಷದಿಂದ ಆಯ್ಕೆಯಾಗದಿದ್ದರೆ ಅನ್ಯಾಯವಾಗಲಿದೆ ಎಂದು ಬಿಜೆಪಿ ನಾಯಕತ್ವ ಸಭೆಯಲ್ಲಿ ಹೇಳಿದೆ.

"ಫಡ್ನವಿಸ್ ಅವರನ್ನು ಮುಖ್ಯಮಂತ್ರಿಯಾಗಿ ನೇಮಕ ಮಾಡಿದರೆ ರಾಜ್ಯದಲ್ಲಿ ಅಧಿಕಾರವನ್ನು ಸಮತೋಲನಗೊಳಿಸಲು ಶಿಂಧೆ ಅವರು ಮೂರು ಪ್ರಮುಖ ಖಾತೆಗಳಾದ ಗೃಹ, ಹಣಕಾಸು ಮತ್ತು ಕಂದಾಯ ಖಾತೆಗಳನ್ನು ತಮಗೆ ನೀಡಬೇಕು ಮತ್ತು ತಾವು ಹೇಳಿದವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಪಟ್ಟು ಹಿಡಿದಿದ್ದಾರೆ.

ಅಮಿತ್ ಶಾ ಅವರು ಮುಂಬೈನಲ್ಲಿ ಮತ್ತೆ ಭೇಟಿಯಾಗುವಂತೆ ಮಹಾಯುತಿಯ ಎಲ್ಲಾ ಮೂವರು ನಾಯಕರಿಗೆ ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಈ ಮೂರು ಪ್ರಮುಖ ಖಾತೆಗಳನ್ನು ಶಿವಸೇನೆಗೆ ನೀಡಲು ಸಾಧ್ಯವಾಗದಿದ್ದರೆ, ತಮ್ಮ ಪಕ್ಷವು ಸರ್ಕಾರದ ಭಾಗವಾಗುವುದಿಲ್ಲ. ರಾಜ್ಯದಲ್ಲಿ ಶಿವಸೇನೆಯು ಹೊರಗಿನಿಂದ ಬೆಂಬಲ ನೀಡುತ್ತದೆ ಮತ್ತು ಪಕ್ಷದ ಏಳು ಲೋಕಸಭಾ ಸಂಸದರು ಹಿಂದುತ್ವದ ಕಾರಣಕ್ಕಾಗಿ ನರೇಂದ್ರ ಮೋದಿ ಸರ್ಕಾರವನ್ನು ಹೊರಗಿನಿಂದ ಬೆಂಬಲಿಸುತ್ತಾರೆ" ಎಂದು ಶಿಂಧೆ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT