ಸಂಭಾಲ್ ಮಸೀದಿ ವಿವಾದ 
ದೇಶ

Sambhal mosque row: 10 ದಿನಗಳಲ್ಲಿ ಸಮೀಕ್ಷಾ ವರದಿ ಸಲ್ಲಿಕೆಗೆ ಉತ್ತರ ಪ್ರದೇಶ ಕೋರ್ಟ್ ಆದೇಶ, ವಿಚಾರಣೆ ಜನವರಿ 8ಕ್ಕೆ ಮುಂದೂಡಿಕೆ

ಸಂಭಾಲ್ ನ ಜಾಮಾ ಮಸೀದಿಯನ್ನು ದೇವಸ್ಥಾನದ ಮೇಲೆ ನಿರ್ಮಿಸಲಾಗಿದೆ ಎಂಬ ಆರೋಪದ ಮೇಲೆಗೆ ಉತ್ತರ ಪ್ರದೇಶ ಕೋರ್ಟ್ ಇಲ್ಲಿ ಸಮೀಕ್ಷೆಗೆ ಆದೇಶ ಸೂಚಿಸಿತ್ತು. ಇದಕ್ಕಾಗಿ ಸಮೀಕ್ಷಾ ತಂಡವನ್ನೂ ಕೂಡ ರಚನೆ ಮಾಡಿತ್ತು.

ಸಂಭಾಲ್: ಉತ್ತರ ಪ್ರದೇಶದಲ್ಲಿ ತೀವ್ರ ಸುದ್ದಿಗೆ ಗ್ರಾಸವಾಗಿರುವ ಸಂಭಾಲ್ ನ ಜಾಮಾ ಮಸೀದಿ ಆವರಣದಲ್ಲಿನ ಸಮೀಕ್ಷಾ ವರದಿಯನ್ನು ಇನ್ನು 10 ದಿನಗಳಲ್ಲಿ ಸಲ್ಲಿಕೆ ಮಾಡುವಂತೆ ಉತ್ತರ ಪ್ರದೇಶ ಕೋರ್ಟ್ ಆದೇಶ ಶುಕ್ರವಾರ ಆದೇಶ ನೀಡಿದ್ದು, ಮುಂದಿನ ವಿಚಾರಣೆಯನ್ನು ಜನವರಿ 8ಕ್ಕೆ ಮುಂದೂಡಿಕೆ ಮಾಡಿದೆ.

ಸಂಭಾಲ್ ನ ಜಾಮಾ ಮಸೀದಿಯನ್ನು ದೇವಸ್ಥಾನದ ಮೇಲೆ ನಿರ್ಮಿಸಲಾಗಿದೆ ಎಂಬ ಆರೋಪದ ಮೇಲೆಗೆ ಉತ್ತರ ಪ್ರದೇಶ ಕೋರ್ಟ್ ಇಲ್ಲಿ ಸಮೀಕ್ಷೆಗೆ ಆದೇಶ ಸೂಚಿಸಿತ್ತು. ಇದಕ್ಕಾಗಿ ಸಮೀಕ್ಷಾ ತಂಡವನ್ನೂ ಕೂಡ ರಚನೆ ಮಾಡಿತ್ತು. ಆದರೆ ಸಮೀಕ್ಷೆಗೆ ಮುಸ್ಲಿಂ ಸಮುದಾಯದ ಕೆಲ ದುಷ್ಕರ್ಮಿಗಳು ಅಡ್ಡಿಪಡಿಸುತ್ತಿರುವ ಹಿನ್ನಲೆಯಲ್ಲಿ ಈ ವಿಚಾರ ವ್ಯಾಪಕ ಸುದ್ದಿಗೆ ಗ್ರಾಸವಾಗುತ್ತಿದೆ.

ವಿವಾದಿತ ಮಸೀದಿಯು ಹರಿಹರ ದೇವಾಲಯದ ಸ್ಥಳದಲ್ಲಿ ನಿರ್ಮಾಣವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ 10 ದಿನಗಳೊಳಗೆ ಸಮೀಕ್ಷಾ ವರದಿ ಸಲ್ಲಿಸುವಂತೆ ನ್ಯಾಯಾಲಯ ನೇಮಿಸಿದ ಕಮಿಷನರ್‌ಗೆ ಶುಕ್ರವಾರ ಸೂಚಿಸಿದ ನ್ಯಾಯಾಲಯ, ಮುಂದಿನ ವಿಚಾರಣೆಯನ್ನು ಜನವರಿ 8ಕ್ಕೆ ನಿಗದಿಪಡಿಸಿದೆ. ಸಿವಿಲ್ ನ್ಯಾಯಾಧೀಶ ಆದಿತ್ಯ ಸಿಂಗ್ ಅವರು ಈ ವಿಷಯವನ್ನು ಆಲಿಸಿದ್ದಾರೆ ಎಂದು ನ್ಯಾಯಾಲಯದಿಂದ ನೇಮಕಗೊಂಡ ಆಯುಕ್ತ ರಾಕೇಶ್ ಸಿಂಗ್ ರಾಘವ್ ಹೇಳಿದ್ದಾರೆ.

ಸಮೀಕ್ಷಾ ವರದಿ ಪೂರ್ಣಗೊಂಡಿಲ್ಲ, ಹೆಚ್ಚುವರಿ ಕಾಲಾವಕಾಶ ಬೇಕು ಎಂದು ನ್ಯಾಯಾಲಯಕ್ಕೆ ತಿಳಿಸಲಾಗಿದ್ದು, ಮನವಿಯನ್ನು ಪುರಸ್ಕರಿಸಿದ ನ್ಯಾಯಾಲಯ ವಿಚಾರಣೆಯನ್ನು ಜನವರಿ 8ಕ್ಕೆ ನಿಗದಿಪಡಿಸಿದೆ ಎಂದು ಮಾಹಿತಿ ನೀಡಿದ್ದಾರೆ.

ಮಸೀದಿ ಸಮಿತಿಯ ವಕೀಲ ಅಮೀರ್ ಹುಸೇನ್ ಮಾತನಾಡಿ, 'ಘಟನಾ ಸ್ಥಳವನ್ನು ಪರಿಶೀಲಿಸಿದ ನ್ಯಾಯಾಲಯದ ಆಯುಕ್ತರಲ್ಲದೆ ಹಿಂದೂ ಮತ್ತು ಮುಸ್ಲಿಂ ಎರಡೂ ಕಡೆಯವರು ನ್ಯಾಯಾಲಯದಲ್ಲಿ ಹಾಜರಿದ್ದರು. ಕೋರ್ಟ್ ಕಮಿಷನರ್ ಅವರು ವರದಿಯನ್ನು ಸಿದ್ಧಪಡಿಸಲು ಸಾಧ್ಯವಿಲ್ಲ ಎಂದು ನ್ಯಾಯಾಲಯಕ್ಕೆ ತಿಳಿಸಿದರು.

ನಂತರ ನ್ಯಾಯಾಧೀಶರು ಸ್ಥಳಕ್ಕೆ ಭೇಟಿ ನೀಡಲು ಮತ್ತೊಂದು ಅವಕಾಶ ಸಿಗುವುದಿಲ್ಲ ಎಂದು ಹೇಳಿದರು ಮತ್ತು ವರದಿಯನ್ನು ಸಿದ್ಧಪಡಿಸಿ 10 ದಿನಗಳಲ್ಲಿ ಸಲ್ಲಿಸುವಂತೆ ಹೇಳಿದರು' ಎಂದು ಮಾಹಿತಿ ನೀಡಿದರು.

ನವೆಂಬರ್ 19 ರಂದು ಸಂಭಾಲ್ ನ ಜಾಮಾ ಮಸೀದಿ ಅವರಣದಲ್ಲಿ ಸರ್ವೆ ಕಾರ್ಯ ನಡೆಸಲು ಅಧಿಕಾರಿಗಳು ಮುಂದಾದಾಗ ಅಲ್ಲಿ ಸಮೀಕ್ಷೆಗೆ ಅಡ್ಡಿ ಪಡಿಸಿತ್ತು. ಬಳಿಕ ಈ ಪ್ರದೇಶದಲ್ಲಿ ಉದ್ವಿಗ್ನತೆ ಹೆಚ್ಚಿತ್ತು. ನವೆಂಬರ್ 24 ರಂದು ಎರಡನೇ ಸಮೀಕ್ಷೆಯ ಸಮಯದಲ್ಲಿ ಪರಿಸ್ಥಿತಿ ಹಿಂಸಾಚಾರಕ್ಕೆ ತಿರುಗಿತು, ಪ್ರತಿಭಟನಾಕಾರರು ಮಸೀದಿ ಬಳಿ ಜಮಾಯಿಸಿ ಭದ್ರತಾ ಪಡೆಗಳೊಂದಿಗೆ ಘರ್ಷಣೆ ನಡೆಸಿದರು. ಅಶಾಂತಿಯು ಕಲ್ಲು ತೂರಾಟ ಮತ್ತು ಬೆಂಕಿಗೆ ಕಾರಣವಾಯಿತು. ಈ ಸಂಘರ್ಷದಲ್ಲಿ ನಾಲ್ವರು ಜೀವಕಳೆದುಕೊಂಡು ಅನೇಕರು ಗಾಯಗೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT