ಚಿನ್ಮಯಿ ಕೃಷ್ಣದಾಸ್ ಬಂಧನ ಖಂಡಿಸಿ ಪ್ರತಿಭಟನೆ  
ದೇಶ

ಕೂಡಲೇ ಹಿಂದೂಗಳ ಮೇಲಿನ ದೌರ್ಜನ್ಯ ನಿಲ್ಲಿಸಿ: ಬಾಂಗ್ಲಾದೇಶಕ್ಕೆ RSS ಮನವಿ

ಬಾಂಗ್ಲಾದೇಶದಲ್ಲಿನ ಹಿಂದೂಗಳು ಮತ್ತಿತರ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ ತಡೆಗೆ ಕೇಂದ್ರ ಸರ್ಕಾರ ತನ್ನ ಪ್ರಯತ್ನಗಳನ್ನು ಮುಂದುವರೆಸಬೇಕು. ಆದಷ್ಟು ಬೇಗ ಈ ಕುರಿತು ಜಾಗತಿಕ ಅಭಿಪ್ರಾಯ ಮೂಡಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು

ನವದೆಹಲಿ: ಬಾಂಗ್ಲಾದೇಶದಲ್ಲಿನ ಹಿಂದೂಗಳ ಮೇಲಿನ ದೌರ್ಜನ್ಯವನ್ನು ನಿಲ್ಲಿಸಬೇಕು ಹಾಗೂ ಇಸ್ಕಾನ್ ಸನ್ಯಾಸಿ ಚಿನ್ಮಯಿ ಕೃಷ್ಣದಾಸ್ ಅವರನ್ನು ಕೂಡಲೇ ಜೈಲಿನಿಂದ ಬಿಡುಗಡೆ ಮಾಡಬೇಕು ಎಂದು ಅಲ್ಲಿನ ಮಧ್ಯಂತರ ಸರ್ಕಾರವನ್ನು ರಾಷ್ಟ್ರೀಯ ಸ್ವಯಂ ಸೇವಕ ಸಂಘ ಒತ್ತಾಯಿಸಿದೆ.

ಬಾಂಗ್ಲಾದೇಶದಲ್ಲಿನ ಹಿಂದೂಗಳು ಮತ್ತಿತರ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ ತಡೆಗೆ ಕೇಂದ್ರ ಸರ್ಕಾರ ತನ್ನ ಪ್ರಯತ್ನಗಳನ್ನು ಮುಂದುವರೆಸಬೇಕು. ಆದಷ್ಟು ಬೇಗ ಈ ಕುರಿತು ಜಾಗತಿಕ ಅಭಿಪ್ರಾಯ ಮೂಡಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಆರ್ ಎಸ್ ಎಸ್ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಮನವಿ ಮಾಡಿದ್ದಾರೆ.

ಬಾಂಗ್ಲಾದೇಶದಲ್ಲಿ ಹಿಂದೂಗಳು, ಮಹಿಳೆಯರು ಸೇರಿದಂತೆ ಇತರ ಅಲ್ಪಸಂಖ್ಯಾತರ ಮೇಲಿನ ಇಸ್ಲಾಮಿಕ್ ಮೂಲಭೂತವಾದಿಗಳು ನಡೆಸುತ್ತಿರುವ ದಾಳಿಗಳು, ಕೊಲೆ, ಲೂಟಿ, ಅಮಾನವೀಯ ದೌರ್ಜನ್ಯಗಳು ಅತ್ಯಂತ ಕಳವಳಕಾರಿಯಾಗಿದ್ದು, ಇದನ್ನು ಆರ್ ಎಸ್ ಎಸ್ ಖಂಡಿಸುತ್ತದೆ. ಇದನ್ನು ನಿಲ್ಲಿಸುವ ಬದಲು ಬಾಂಗ್ಲಾದೇಶದಲ್ಲಿನ ಮಧ್ಯಂತರ ಸರ್ಕಾರ ಮತ್ತಿತರ ಏಜೆನ್ಸಿಗಳು ಮೂಕ ಪ್ರೇಕ್ಷಕರಾಗಿದ್ದಾರೆ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತ, ಆಫ್ರಿಕಾಗೆ ಸೂಕ್ತ ಪ್ರಾತಿನಿಧ್ಯ ಸಿಗಲೇಬೇಕು: ಜೈಶಂಕರ್ ಆಗ್ರಹ

ಪ್ರತಿಭಟನೆಗಳ ನಡುವೆಯೇ ಚು. ಆಯೋಗ ಮಹತ್ವದ ನಡೆ, ಹೊಸ ಉಪಾಯುಕ್ತರ ನೇಮಕ, 27 ಅಧಿಕಾರಿಗಳಿಗೆ ಹೊಸ ಹೊಣೆ!

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: 30 ಮನೆ-ಅಂಗಡಿಗಳಿಗೆ ಬೆಂಕಿ, ಕನಿಷ್ಠ 5 ಸಾವು!

ಸರ್ಕಾರ ಕೇವಲ ಪ್ರೇಕ್ಷಕನಾಗಿ ಉಳಿಯಲು ಸಾಧ್ಯವಿಲ್ಲ: ದೆಹಲಿ ದಮನಕಾರಿ ಕ್ರಮ ಬೆಂಬಲಿಸಿದ ಸಚಿವ ಪ್ರಹ್ಲಾದ್ ಜೋಶಿ