ಜಮ್ಮು-ಕಾಶ್ಮೀರ ಚುನಾವಣೆ  
ದೇಶ

ಜಮ್ಮು-ಕಾಶ್ಮೀರ ವಿಧಾನಸಭೆ ಚುನಾವಣೆ: ಅಂತಿಮ ಹಂತದಲ್ಲಿ ಮತದಾನ ಬಿರುಸು, ಬೆಳಗ್ಗೆ 11ರವರೆಗೆ ಶೇ.28 ರಷ್ಟು ಮತ ಚಲಾವಣೆ

ಜಮ್ಮು ಮತ್ತು ಕಾಶ್ಮೀರದ ಏಳು ಜಿಲ್ಲೆಗಳ 40 ವಿಧಾನಸಭಾ ಕ್ಷೇತ್ರಗಳಲ್ಲಿ ಬಿಗಿ ಭದ್ರತೆಯ ನಡುವೆ ಬೆಳಗ್ಗೆ 7 ಗಂಟೆಗೆ ಮತದಾನ ಆರಂಭವಾಗಿದೆ.

ಜಮ್ಮು/ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆಯ ಮೂರನೇ ಮತ್ತು ಅಂತಿಮ ಹಂತದ ಮತದಾನದ ಮೊದಲ ನಾಲ್ಕು ಗಂಟೆಗಳಲ್ಲಿ ಶೇ 28.12 ರಷ್ಟು ಮತದಾನವಾಗಿದೆ ಎಂದು ಚುನಾವಣಾ ಆಯೋಗದ (EC) ಅಂಕಿಅಂಶಗಳು ತಿಳಿಸಿವೆ.

ಜಮ್ಮು ಮತ್ತು ಕಾಶ್ಮೀರದ ಏಳು ಜಿಲ್ಲೆಗಳ 40 ವಿಧಾನಸಭಾ ಕ್ಷೇತ್ರಗಳಲ್ಲಿ ಬಿಗಿ ಭದ್ರತೆಯ ನಡುವೆ ಬೆಳಗ್ಗೆ 7 ಗಂಟೆಗೆ ಮತದಾನ ಆರಂಭವಾಗಿದೆ.

ಇಬ್ಬರು ಮಾಜಿ ಉಪಮುಖ್ಯಮಂತ್ರಿಗಳಾದ ತಾರಾ ಚಂದ್ ಮತ್ತು ಮುಜಾಫರ್ ಬೇಗ್ ಸೇರಿದಂತೆ 415 ಅಭ್ಯರ್ಥಿಗಳ ಭವಿಷ್ಯವನ್ನು ನಿರ್ಧರಿಸಲು 39.18 ಲಕ್ಷಕ್ಕೂ ಹೆಚ್ಚು ಅರ್ಹ ಮತದಾರರು ಸಿದ್ಧರಾಗಿದ್ದಾರೆ.

ಬೆಳಗ್ಗೆ 7 ಗಂಟೆಗೆ ಆರಂಭವಾದ ಮತದಾನ ಬಿಗಿ ಭದ್ರತೆಯ ನಡುವೆ ಶಾಂತಿಯುತವಾಗಿ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಚುನಾವಣಾ ಆಯೋಗವು ಇನ್ನೂ ಯಾವುದೇ ಮತದಾನದ ಅಂಕಿಅಂಶಗಳನ್ನು ಬಿಡುಗಡೆ ಮಾಡದಿದ್ದರೂ, ಅಧಿಕೃತ ಮೂಲಗಳು ಕಾಶ್ಮೀರದಲ್ಲಿ ಮತದಾನದ ಮೊದಲ ಗಂಟೆಯಲ್ಲಿ ಶೇಕಡಾ 3.5ರಷ್ಟು ಮತದಾನವಾಗಿದೆ ಎಂದು ಅಂದಾಜಿಸಲಾಗಿದೆ.

ಉತ್ತರ ಕಾಶ್ಮೀರದ ಮೂರು ಗಡಿ ಜಿಲ್ಲೆಗಳಾದ ಬಾರಾಮುಲ್ಲಾ, ಬಂಡಿಪೋರಾ ಮತ್ತು ಕುಪ್ವಾರದಲ್ಲಿ ಮತದಾನ ನಡೆಯುತ್ತಿದೆ.

ಬಾರಾಮುಲ್ಲಾ ಜಿಲ್ಲೆಯ ಬಾರಾಮುಲ್ಲಾ, ಉರಿ, ರಫಿಯಾಬಾದ್, ಪಟ್ಟನ್, ಗುಲ್ಮಾರ್ಗ್, ಸೋಪೋರ್ ಮತ್ತು ವಾಗೂರಾ-ಕ್ರೀರಿ ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ; ಕುಪ್ವಾರಾ ಜಿಲ್ಲೆಯಲ್ಲಿ ಕುಪ್ವಾರಾ, ಕರ್ನಾಹ್, ಟ್ರೆಹ್ಗಾಮ್, ಹಂದ್ವಾರಾ, ಲೋಲಾಬ್ ಮತ್ತು ಲಂಗೇಟ್; ಮತ್ತು ಬಂಡಿಪೋರಾ ಜಿಲ್ಲೆಯ ಬಂಡಿಪೋರಾ, ಸೋನಾವರಿ ಮತ್ತು ಗುರೇಜ್ ಈ 16 ಕ್ಷೇತ್ರಗಳಲ್ಲಿ ಒಟ್ಟು 202 ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ಜಮ್ಮು ಪ್ರದೇಶದ ಉಧಂಪುರ, ಸಾಂಬಾ ಮತ್ತು ಕಥುವಾ ಜಿಲ್ಲೆಗಳ 24 ವಿಧಾನಸಭಾ ಕ್ಷೇತ್ರಗಳಲ್ಲಿಯೂ ಮತದಾನ ನಡೆಯುತ್ತಿದೆ.

2019 ರ ಆರ್ಟಿಕಲ್ 370 ರದ್ದತಿಯ ನಂತರ ಮೊದಲ ಬಾರಿಗೆ ಮತದಾನದ ಹಕ್ಕನ್ನು ಪಡೆದ ನಂತರ ಉತ್ಸಾಹಭರಿತ ಪಶ್ಚಿಮ ಪಾಕಿಸ್ತಾನಿ ನಿರಾಶ್ರಿತರು, ವಾಲ್ಮೀಕಿ ಸಮಾಜ ಮತ್ತು ಗೂರ್ಖಾ ಸಮುದಾಯದ ಸದಸ್ಯರು ಮುಂಜಾನೆ ಮತದಾನ ಕೇಂದ್ರಗಳಲ್ಲಿ ನೆರೆದರು.

ಅವರು ಈ ಹಿಂದೆ ಕ್ರಮವಾಗಿ 2019 ಮತ್ತು 2020 ರಲ್ಲಿ ಬ್ಲಾಕ್ ಅಭಿವೃದ್ಧಿ ಮಂಡಳಿ ಮತ್ತು ಜಿಲ್ಲಾ ಅಭಿವೃದ್ಧಿ ಮಂಡಳಿ ಚುನಾವಣೆಯಲ್ಲಿ ಭಾಗವಹಿಸಿದ್ದರು.

ಸುಗಮ ಮತದಾನಕ್ಕೆ ಅರೆಸೈನಿಕ ಮತ್ತು ಸಶಸ್ತ್ರ ಪೊಲೀಸ್ ಸಿಬ್ಬಂದಿ ಸೇರಿದಂತೆ 400 ಕ್ಕೂ ಹೆಚ್ಚು ಕಂಪನಿಗಳ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ. ಸೆ.18ರಂದು ನಡೆದ ಮೊದಲ ಹಂತದ ಚುನಾವಣೆಯಲ್ಲಿ ಶೇ.61.38 ಹಾಗೂ ಎರಡನೇ ಹಂತದಲ್ಲಿ ಸೆ.25ರಂದು ಶೇ.57.31ರಷ್ಟು ಮತದಾನವಾಗಿದ್ದು, ಅಕ್ಟೋಬರ್ 8ರಂದು ಫಲಿತಾಂಶ ಪ್ರಕಟವಾಗಲಿದೆ.

ಮತದಾನ ಸಂಜೆ 6 ಗಂಟೆಗೆ ಮುಕ್ತಾಯಗೊಳ್ಳಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

2nd test, Day 2: 518 ರನ್ ಗಳಿಗೆ ಭಾರತ ಇನ್ನಿಂಗ್ಸ್ ಡಿಕ್ಲೇರ್!

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

SCROLL FOR NEXT