ಜಮ್ಮು-ಕಾಶ್ಮೀರ ಚುನಾವಣೆ. 
ದೇಶ

ಜಮ್ಮು, ಕಾಶ್ಮೀರ ಚುನಾವಣೆ: ಅಂತಿಮ ಹಂತದಲ್ಲಿ ಶೇ.65ಕ್ಕೂ ಹೆಚ್ಚು ಮತದಾನ

ಆಯೋಗದ ಅಂಕಿಅಂಶಗಳ ಪ್ರಕಾರ ಇಂದು ನಡೆದ ಅಂತಿಮ ಹಂತದ ಚುನಾವಣೆಯಲ್ಲಿ ಸಂಜೆ 5 ಗಂಟೆಯವರೆಗೆ ಶೇ. 65.48 ರಷ್ಟು ಮತದಾನವಾಗಿದೆ.

ಶ್ರೀನಗರ: ಕೇಂದ್ರಾಡಳಿತ ಪ್ರದೇಶ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಗೆ ಚುನಾವಣೆಯ ಮೂರನೇ ಮತ್ತು ಅಂತಿಮ ಹಂತದ ಮತದಾನದ ಮಂಗಳವಾರ ಮುಕ್ತಾಯವಾಗಿದ್ದು, ಶೇ.65ಕ್ಕೂ ಹೆಚ್ಚು ಮತದಾನವಾಗಿದೆ.

ಆಯೋಗದ ಅಂಕಿಅಂಶಗಳ ಪ್ರಕಾರ ಇಂದು ನಡೆದ ಅಂತಿಮ ಹಂತದ ಚುನಾವಣೆಯಲ್ಲಿ ಸಂಜೆ 5 ಗಂಟೆಯವರೆಗೆ ಶೇ. 65.48 ರಷ್ಟು ಮತದಾನವಾಗಿದೆ.

ಚಳಿಗಾಲದ ರಾಜಧಾನಿ ಜಮ್ಮು ಸೇರಿದಂತೆ ಜಮ್ಮು ಮತ್ತು ಕಾಶ್ಮೀರದ ಏಳು ಜಿಲ್ಲೆಗಳ 40 ವಿಧಾನಸಭಾ ಕ್ಷೇತ್ರಗಳಲ್ಲಿ ಬಿಗಿ ಭದ್ರತೆಯ ನಡುವೆ ಇಂದು ಬೆಳಗ್ಗೆ 7 ಗಂಟೆಗೆ ಮತದಾನ ಪ್ರಾರಂಭವಾಯಿತು ಮತ್ತು ಸಂಜೆ 6 ಗಂಟೆಗೆ ಮುಕ್ತಾಯಗೊಂಡಿದೆ.

ಇಂದು ನಡೆದ ಮೂರನೇ ಹಂತದ ಚುನಾವಣೆಯಲ್ಲಿ ಇಬ್ಬರು ಮಾಜಿ ಉಪಮುಖ್ಯಮಂತ್ರಿಗಳಾದ ತಾರಾ ಚಂದ್ ಮತ್ತು ಮುಜಾಫರ್ ಬೇಗ್ ಸೇರಿದಂತೆ 415 ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ.

2019 ರ ಆಗಸ್ಟ್‌ನಲ್ಲಿ 370ನೇ ವಿಧಿಯನ್ನು ರದ್ದುಗೊಳಿಸಿದ ನಂತರ ಮೊದಲ ಬಾರಿಗೆ ವಿಧಾನಸಭಾ ಚುನಾವಣೆ ನಡೆದಿದ್ದು, ಅಂತರಾಷ್ಟ್ರೀಯ ಗಡಿ ನಿಯಂತ್ರಣ ರೇಖೆ(ಎಲ್‌ಒಸಿ)ಯ ವಿಶೇಷ ಮತಗಟ್ಟೆಗಳು ಸೇರಿದಂತೆ ಎಲ್ಲಾ ಮತಗಟ್ಟೆಗಳಲ್ಲಿ ಯಾವುದೇ ಅಹಿತಕರ ಘಟನೆಗಳು ವರದಿಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸೆಪ್ಟೆಂಬರ್ 18ರಂದು ನಡೆದ ಮೊದಲ ಹಂತದಲ್ಲಿ ಶೇ.61.38ರಷ್ಟು ಮತದಾನ ನಡೆದಿದ್ದರೆ, ಸೆಪ್ಟೆಂಬರ್ 26ರಂದು ನಡೆದ ಎರಡನೇ ಹಂತದಲ್ಲಿ ಶೇ.57.31ರಷ್ಟು ಮತದಾನವಾಗಿತ್ತು. ಮೂರನೇ ಹಂತದಲ್ಲಿ ಶೇ. 65ಕ್ಕೂ ಹೆಚ್ಚು ಮತದಾನವಾಗಿದ್ದು, ಅಕ್ಟೋಬರ್ 8 ರಂದು ಫಲಿತಾಂಶ ಪ್ರಕಟವಾಗಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ

'ತಂದಿಟ್ಟ ಗಿಡ ಮನೆಗೇ ಹಾನಿ ಮಾಡಿದ್ರೆ..'; 'ನೋ ಕ್ಲಾಸ್', BiggBoss ಇತಿಹಾಸದ ಅತಿದೊಡ್ಡ ನಿರ್ಧಾರದ ಸುಳಿವು ನೀಡಿದ ಕಿಚ್ಚಾ ಸುದೀಪ್

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌‌ವೇಯಲ್ಲಿ ಅಪಘಾತಕ್ಕೆ ಬಿಗ್ ಟ್ವಿಸ್ಟ್: ಸ್ನೇಹಿತನಿಂದಲೇ ಭೂಮಿಕಾ ಕೊಲೆ?

CJP ಪ್ರತಿಭಟನೆ: ದೆಹಲಿ ಪೊಲೀಸರ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆ!