ಸೂಪರ್ ಸ್ಟಾರ್ ರಜನಿಕಾಂತ್ 
ದೇಶ

ಸೂಪರ್ ಸ್ಟಾರ್ ರಜನಿಕಾಂತ್ ಆಸ್ಪತ್ರೆಗೆ ದಾಖಲು: ಅಭಿಮಾನಿಗಳಲ್ಲಿ ಹೆಚ್ಚಿದ ಆತಂಕ, ಶೀಘ್ರಗತಿ ಗುಣಮುಖರಾಗುವಂತೆ ಪ್ರಾರ್ಥನೆ

ಆಸ್ಪತ್ರೆಗೂ ದಾಖಲಾಗುವುದಕ್ಕೂ ಮುನ್ನ ರಜನಿಕಾಂತ್​​​ ಮುಂಬರುವ ವೆಟ್ಟೈಯನ್​​​ ಸಿನಿಮಾದ ಆಡಿಯೋ ಲಾಂಚ್​ ಕಾರ್ಯಕ್ರಮದಲ್ಲಿ ಕಾಣಿಸಿಕೊಂಡಿದ್ದರು.

ಚೆನ್ನೈ: ಸೂಪರ್ ಸ್ಟಾರ್ ರಜನಿಕಾಂತ್ ಅವರು ದಿಢೀರ್ ಆಸ್ಪತ್ರೆಗೆ ದಾಖಲಾಗಿದ್ದು, ಈ ಬೆಳವಣಿಗೆ ಅಭಿಮಾನಿಗಳಲ್ಲಿ ಆತಂಕ ಹೆಚ್ಚಾಗುವಂತೆ ಮಾಡಿದೆ.

ರಜನಿಕಾಂತ್ ಅವರು ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಯಿಂದಾಗಿ ಚಿಕಿತ್ಸೆಗಾಗಿ ಸೋಮವಾರ ತಡರಾತ್ರಿ ಚೆನ್ನೈನ ಆಯರ್ವಿಳಕ್ಕು ಪ್ರದೇಶದ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದು, ಸದ್ಯ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಮೂಲಗಳು ತಿಳಿಸಿವೆ.

ರಜನಿಕಾಂತ್​ಗೆ ಕಾರ್ಡಿಯಾಕ್​ ಕ್ಯಾಥ್​ ಕ್ಯಾಬ್​ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎನ್ನಲಾಗುತ್ತಿದ್ದು, ತಮ್ಮ ನೆಚ್ಚಿನ ನಟ ಶೀಘ್ರಗತಿಯಲ್ಲಿ ಗುಣಮುಖರಾಗಲಿ ಎಂದು ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ.

ಇನ್ನು ರಜನಿಕಾಂತ್​ ಅವರ ಆರೋಗ್ಯದ ಬಗ್ಗೆ ಅಪೋಲೋ ಆಸ್ಪತ್ರೆ ಅಥವಾ ರಜನಿಕಾಂತ್​ ಅವರ ಕುಟುಂಬದವರಿಂದ ಯಾವುದೇ ಅಧಿಕೃತ ಹೇಳಿಕೆ ಬಂದಿಲ್ಲ. ಇಂದು ಬೆಳಗ್ಗೆ ರಜನಿಕಾಂತ್​ ಅವರ ಆರೋಗ್ಯದ ಬಗ್ಗೆ ಆಸ್ಪತ್ರೆಯಿಂದ ಪತ್ರಿಕಾ ಪ್ರಕಟಣೆ ಹೊರಡಿಸುವ ನಿರೀಕ್ಷೆಯಿದೆ.

ಆಸ್ಪತ್ರೆಗೂ ದಾಖಲಾಗುವುದಕ್ಕೂ ಮುನ್ನ ರಜನಿಕಾಂತ್​​​ ಮುಂಬರುವ ವೆಟ್ಟೈಯನ್​​​ ಸಿನಿಮಾದ ಆಡಿಯೋ ಲಾಂಚ್​ ಕಾರ್ಯಕ್ರಮದಲ್ಲಿ ಕಾಣಿಸಿಕೊಂಡಿದ್ದರು.

ಇದು ಆ್ಯಕ್ಷನ್​​​ ಪ್ಯಾಕ್ಡ್​​​ ಮನರಂಜನೆಯ ಸಿನಿಮಾವಾಗಿದ್ದು, ಅಕ್ಟೋಬರ್​​ 10ರಂದು ಥಿಯೇಟರ್​​ಗಳಿಗೆ ಬರಲಿದೆ. ಈ ಸಿನಿಮಾವನ್ನು ಟಿಜೆ ಜ್ಞಾನವೇಲ್​​ ನಿರ್ದೇಶಿಸಿದ್ದಾರೆ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT