ಕೇಂದ್ರ ಗೃಹ ಸಚಿವ ಅಮಿತ್ ಶಾ- ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ online desk
ದೇಶ

ಮಹಾಯುತಿಯಲ್ಲಿ ಭಿನ್ನಮತ: ಕುತೂಹಲ ಮೂಡಿಸಿದ ಅಜಿತ್ ಪವಾರ್- ಅಮಿತ್ ಶಾ ಭೇಟಿ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿರುವುದು ಕುತೂಹಲ ಮೂಡಿಸಿದೆ.

ಮುಂಬೈ: ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಸನಿಹವಾಗುತ್ತಿದ್ದಂತೆಯೇ ಮಹಾಯುತಿ ಮೈತ್ರಿಕೂಟದಲ್ಲಿ ಎಲ್ಲವೂ ಸರಿ ಇಲ್ಲ ಎಂಬುದು ಗೋಚರಿಸುತ್ತಿದೆ.

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿರುವುದು ಕುತೂಹಲ ಮೂಡಿಸಿದೆ.

ಮುಂಬೈ ನಲ್ಲಿ ಈ ಸಭೆ ನಡೆದಿದ್ದು, ಸಭೆಯಲ್ಲಿ ಚರ್ಚೆಯಾದ ವಿಷಯದ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮೈತ್ರಿಕೂಟದಲ್ಲಿರುವುದು ಮತ್ತು ಕೆಲವು ಬಿಜೆಪಿ ನಾಯಕರ ಮುಸ್ಲಿಂ ವಿರೋಧಿ ಅಲೆಗೆ ಅಜಿತ್ ಪವಾರ್ ಪಕ್ಷದ ವಿರೋಧದ ಬಗ್ಗೆ ಆಡಳಿತಾರೂಢ ಮಹಾಯುತಿ ಮೈತ್ರಿಕೂಟದಲ್ಲಿನ ಭಿನ್ನಾಭಿಪ್ರಾಯಗಳ ಹಿನ್ನೆಲೆಯಲ್ಲಿ ಈ ಸಭೆ ನಡೆದಿರುವುದು ಮಹತ್ವ ಪಡೆದಿದೆ.

ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆಯ ನಾಯಕರು ಕೂಡ ಎನ್‌ಸಿಪಿಯನ್ನು ಟೀಕಿಸಿದ್ದಾರೆ. ಮೂರು ಮಹಾಯುತಿ ಪಾಲುದಾರರು ಮುಂದಿನ ತಿಂಗಳು ನಡೆಯಲಿರುವ 228 ಸದಸ್ಯರ ವಿಧಾನಸಭೆಗೆ ಚುನಾವಣೆಗೆ ಸೀಟು ಹಂಚಿಕೆಯನ್ನು ಇನ್ನೂ ಅಂತಿಮಗೊಳಿಸಿಲ್ಲ.

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಕಳೆದ ವಾರ 2024 ರ ಲೋಕಸಭಾ ಚುನಾವಣೆಯಲ್ಲಿ ಶಿವಸೇನೆಗಿಂತ ತನ್ನ ಹೊಸ ಮಿತ್ರಪಕ್ಷವಾದ ಎನ್‌ಸಿಪಿಯಿಂದಾಗಿ ಕಡಿಮೆ ಮತಗಳನ್ನು ಪಡೆದಿರುವುದನ್ನು ಒಪ್ಪಿಕೊಂಡಿದ್ದಾರೆ.

ಮಹಾಯುತಿ ಪಾಲುದಾರರು ಒಗ್ಗಟ್ಟಿನಿಂದ ಇರುತ್ತಾರೆ ಮತ್ತು ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಮೈತ್ರಿಕೂಟದ ಗೆಲುವನ್ನು ಖಚಿತಪಡಿಸಿಕೊಳ್ಳಲು ಕೆಲಸ ಮಾಡುವುದಾಗಿ ಅಜಿತ್ ಪವಾರ್ ಈ ಹಿಂದೆ ಹೇಳಿದ್ದರು. ಮಂಗಳವಾರ ಮುಂಬೈನಲ್ಲಿ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಶಾ ಮಾತನಾಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT