ಪವನ್ ಕಲ್ಯಾಣ್ ಹಾಗೂ ಪುತ್ರಿ 
ದೇಶ

ತಿಮ್ಮಪ್ಪನ ಮೇಲೆ ನಂಬಿಕೆ ಇದೆ: ತಿರುಪತಿ ದೇವಸ್ಥಾನ ಪ್ರವೇಶಕ್ಕೂ ಮುನ್ನ ಪವನ್ ಕಲ್ಯಾಣ್ ಪುತ್ರಿ ಘೋಷಣೆ

ತಿರುಪತಿ ವೆಂಕಟೇಶ್ವರ ದೇವಸ್ಥಾನಕ್ಕೆ ಭೇಟಿ ನೀಡುವ ಹಿಂದೂಯೇತರರು ಮೊದಲು ದೇವರಲ್ಲಿ ನಂಬಿಕೆ ಇದೆ ಘೋಷಿಸುವುದು ಕಡ್ಡಾಯವಾಗಿದೆ.

ತಿರುಪತಿ: ಆಂಧ್ರ ಪ್ರದೇಶದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಅವರ ಪುತ್ರಿ ಬುಧವಾರ ತಿರುಮಲ ದೇವಸ್ಥಾನ ಪ್ರವೇಶಿಸುವ ಮುನ್ನ ವೆಂಕಟೇಶ್ವರನ ಮೇಲೆ ನಂಬಿಕೆ ಇದೆ ಎಂದು ಘೋಷಿಸಿದ್ದಾರೆ.

ತಿರುಪತಿ ವೆಂಕಟೇಶ್ವರ ದೇವಸ್ಥಾನಕ್ಕೆ ಭೇಟಿ ನೀಡುವ ಹಿಂದೂಯೇತರರು ಮೊದಲು ದೇವರಲ್ಲಿ ನಂಬಿಕೆ ಇದೆ ಘೋಷಿಸುವುದು ಕಡ್ಡಾಯವಾಗಿದೆ. ಹೀಗಾಗಿ ನಟ ಹಾಗೂ ರಾಜಕಾರಣಿ ಪವನ್ ಕಲ್ಯಾಣ್ ಅವರ ಕಿರಿಯ ಪುತ್ರಿ ಪಲಿನಾ ಅಂಜನಿ ಕೊನಿಡೆಲಾ ಅವರು ಹಿಂದೂಯೇತರರಾಗಿದ್ದು, ತಮ್ಮ ನಂಬಿಕೆ ಘೋಷಣೆ ಮಾಡಿದ್ದಾರೆ ಎಂದು ವರದಿಯಾಗಿದೆ.

ತಿರುಮಲ ತಿರುಪತಿ ದೇವಸ್ಥಾನಂ(ಟಿಟಿಡಿ) ಸಿಬ್ಬಂದಿ ನೀಡಿದ ದಾಖಲೆಗಳಿಗೆ ಸಹಿ ಹಾಕುವ ಮೂಲಕ ಪಲಿನಾ ವೆಂಕಟೇಶ್ವರನಲ್ಲಿ ಭಕ್ತಿ ಹಾಗೂ ನಂಬಿಕೆ ಇರುವುದಾಗಿ ಘೋಷಿಸಿದ್ದಾರೆ.

ಪಲಿನಾ ಅಂಜನಿ ಅವರು ಅಪ್ರಾಪ್ತರಾಗಿರುವುದರಿಂದ ಅವರ ತಂದೆ ಪವನ್ ಕಲ್ಯಾಣ್ ಅವರು ದಾಖಲೆಗಳನ್ನು ಅನುಮೋದಿಸಿದ್ದಾರೆ" ಎಂದು ಜನಸೇನಾ ಪಕ್ಷ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಪ್ರಸ್ತುತ, ಪವನ್ ಕಲ್ಯಾಣ್ ಅವರು ತಿರುಪತಿ ಲಡ್ಡು ಪ್ರಸಾದದಲ್ಲಿ ದನದ ಕೊಬ್ಬು ಬಳಸಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ದೇವಸ್ಥಾನ ಶುದ್ಧೀಕರಣಕ್ಕಾಗಿ ಮತ್ತು ಪಾಪಗಳಿಗೆ ಪ್ರಾಯಶ್ಚಿತ್ತಕ್ಕಾಗಿ 11 ದಿನಗಳ ದೀಕ್ಷೆಯ ಭಾಗವಾಗಿ ದೇವಾಲಯಕ್ಕೆ ಮೂರು ದಿನಗಳ ಭೇಟಿಯಲ್ಲಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT