ಅಶೋಕ್ ತನ್ವಾರ್-ರಾಹುಲ್ ಗಾಂಧಿ PTI
ದೇಶ

ಹರಿಯಾಣ: ಬೆಳಗ್ಗೆ ಬಿಜೆಪಿ ಪರ ಪ್ರಚಾರ ಮಾಡುತ್ತಿದ್ದ ಅಶೋಕ್ ತನ್ವಾರ್ ಮಧ್ಯಾಹ್ನ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ!

ಮಹೇಂದ್ರಗಢದಲ್ಲಿ ಚುನಾವಣಾ ರ್ಯಾಲಿಯಲ್ಲಿ ರಾಹುಲ್ ಗಾಂಧಿ ಮತ್ತು ಭೂಪೇಂದ್ರ ಸಿಂಗ್ ಹೂಡಾ ಅವರ ಸಮ್ಮುಖದಲ್ಲಿ ಅಶೋಕ್ ತನ್ವಾರ್ ಕಾಂಗ್ರೆಸ್‌ಗೆ ಮರುಸೇರ್ಪಡೆಯಾದರು.

ಹರಿಯಾಣ ವಿಧಾನಸಭೆ ಚುನಾವಣೆಯ ಪ್ರಚಾರಕ್ಕೆ ಇಂದು ಕೊನೆಯ ದಿನ. ಚುನಾವಣಾ ಪ್ರಚಾರದ ನಡುವೆಯೇ ಭಾರತೀಯ ಜನತಾ ಪಕ್ಷ (ಬಿಜೆಪಿ) ಭಾರಿ ಮುಖಭಂಗ ಅನುಭವಿಸಿದೆ. ಬೆಳಗ್ಗೆವರೆಗೂ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ನಡೆಸಿದ್ದ ಅಶೋಕ್ ತನ್ವಾರ್ ಮಧ್ಯಾಹ್ನದ ವೇಳೆಗೆ ಮತ್ತೊಮ್ಮೆ ಕಾಂಗ್ರೆಸ್‌ಗೆ ಸೇರ್ಪಡೆಯಾದರು.

ಮಹೇಂದ್ರಗಢದಲ್ಲಿ ಚುನಾವಣಾ ರ್ಯಾಲಿಯಲ್ಲಿ ರಾಹುಲ್ ಗಾಂಧಿ ಮತ್ತು ಭೂಪೇಂದ್ರ ಸಿಂಗ್ ಹೂಡಾ ಅವರ ಸಮ್ಮುಖದಲ್ಲಿ ಅಶೋಕ್ ತನ್ವಾರ್ ಕಾಂಗ್ರೆಸ್‌ಗೆ ಮರುಸೇರ್ಪಡೆಯಾದರು.

ಹರಿಯಾಣ ಕಾಂಗ್ರೆಸ್ ಅಧ್ಯಕ್ಷರಾಗಿದ್ದ ತನ್ವರ್ 2019ರಲ್ಲಿ ಪಕ್ಷಕ್ಕೆ ರಾಜೀನಾಮೆ ನೀಡಿದ್ದರು. ಇದರ ನಂತರ, ಅವರು ನವೆಂಬರ್ 2021ರಲ್ಲಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಗೆ ಸೇರಿದರು. ಬಳಿಕ 2022ರ ಏಪ್ರಿಲ್ ನಲ್ಲಿ ಆಮ್ ಆದ್ಮಿ ಪಕ್ಷವನ್ನು (ಎಎಪಿ) ಸೇರಿದ್ದರು. ಈ ವರ್ಷದ ಆರಂಭದಲ್ಲಿ, ಅವರು ಬಿಜೆಪಿಗೆ ಸೇರಿದ್ದು ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವ ಮತ್ತು ಆಡಳಿತದಲ್ಲಿ ದೇಶದಲ್ಲಿನ ಬದಲಾವಣೆಗಳನ್ನು ಶ್ಲಾಘಿಸಿದರು.

ಜಿಂದ್ ಜಿಲ್ಲೆಯ ಸಫಿಡಾನ್‌ನಲ್ಲಿ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ನಡೆಸಿದ ಕೆಲವೇ ಗಂಟೆಗಳಲ್ಲಿ ತನ್ವರ್ ಕಾಂಗ್ರೆಸ್ ಸೇರಿದರು. ರಾಹುಲ್ ಗಾಂಧಿ ತಮ್ಮ ಭಾಷಣದ ವೇಳೆ ವೇದಿಕೆಯಿಂದ ಘೋಷಣೆ ಮಾಡಲಾಯಿತು. ಸಭಿಕರನ್ನು ಕೆಲವು ನಿಮಿಷಗಳ ಕಾಲ ಕಾಯುವಂತೆ ಕೇಳಲಾಯಿತು. ಸ್ವಲ್ಪ ಸಮಯದ ನಂತರ ತನ್ವರ್ ವೇದಿಕೆಗೆ ಬಂದು ಇದು ನನ್ನ ಘರ್ ವಾಪ್ಸಿ ಎಂದು ಘೋಷಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಐವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

Indre Nemdiyag Irbek: ಯೂ ಟ್ಯೂಬ್ ನಲ್ಲಿ ಧೂಳೆಬ್ಬಿಸುತ್ತಿರುವಂತೆ ವಿವಾದಕ್ಕೆ ಗುರಿಯಾದ Devil ಸಾಂಗ್! ಟ್ಯೂನ್ ಕದ್ದ ಆರೋಪ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

SCROLL FOR NEXT