ಮಣಿಪುರ ಹಿಂಸಾಚಾರ 
ದೇಶ

ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಪೊಲೀಸ್ ಠಾಣೆಗೆ ನುಗ್ಗಿ ಶಸ್ತ್ರಾಸ್ತ್ರಗಳ ಲೂಟಿ!

‘ಸ್ವಚ್ಛತಾ ಅಭಿಯಾನ’ದ ಅಂಗವಾಗಿ ಪಟ್ಟಣದ ವಿವಾದಿತ ಜಮೀನನ್ನು ಸ್ವಚ್ಛಗೊಳಿಸುವ ವಿಚಾರವಾಗಿ ಬುಧವಾರ ಎರಡು ಗುಂಪುಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಮೃತಪಟ್ಟಿದ್ದು, 20 ಮಂದಿ ಗಾಯಗೊಂಡಿದ್ದಾರೆ.

ಇಂಫಾಲ್: ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದ್ದು, ಉಖ್ರುಲ್ ಪಟ್ಟಣದಲ್ಲಿ ಎರಡು ಗುಂಪುಗಳ ನಡುವಿನ ಘರ್ಷಣೆಯಲ್ಲಿ ಒಂದು ಗುಂಪು ಪೊಲೀಸ್ ಠಾಣೆಗೆ ನುಗ್ಗಿ ಶಸ್ತ್ರಾಸ್ತ್ರಗಳನ್ನು ದೋಚಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.

‘ಸ್ವಚ್ಛತಾ ಅಭಿಯಾನ’ದ ಅಂಗವಾಗಿ ಪಟ್ಟಣದ ವಿವಾದಿತ ಜಮೀನನ್ನು ಸ್ವಚ್ಛಗೊಳಿಸುವ ವಿಚಾರವಾಗಿ ಬುಧವಾರ ಎರಡು ಗುಂಪುಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಮೃತಪಟ್ಟಿದ್ದು, 20 ಮಂದಿ ಗಾಯಗೊಂಡಿದ್ದಾರೆ.

ನಾಗಾ ಸಮುದಾಯದ ಎರಡು ಗುಂಪುಗಳ ನಡುವೆ ಘರ್ಷಣೆ ನಡೆಯುತ್ತಿರುವಾಗಲೇ ಪೊಲೀಸ್ ಠಾಣೆ ಮೇಲೆ ದಾಳಿ ನಡೆಸಲಾಗಿದೆ. ಘರ್ಷಣೆಯ ನಂತರ ಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಮತ್ತು ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ.

"ಉಖ್ರುಲ್ ಪಟ್ಟಣದಲ್ಲಿ ಹಿಂಸಾಚಾರ ಭುಗಿಲೆದ್ದ ನಂತರ, ಬಹುಪಾಲು ಯುವಕರನ್ನು ಒಳಗೊಂಡ ಗುಂಪು ವಿನೋ ಬಜಾರ್‌ನಲ್ಲಿರುವ ಪೊಲೀಸ್ ಠಾಣೆಗೆ ನುಗ್ಗಿ, ಶಸ್ತ್ರಾಸ್ತ್ರಗಳನ್ನು ದೋಚಿದೆ" ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪ್ರಕರಣದ ತನಿಖೆ ಮುಂದುವರಿದಿರುವುದರಿಂದ ಲೂಟಿ ಮಾಡಿದ ಶಸ್ತ್ರಾಸ್ತ್ರಗಳ ಸಂಖ್ಯೆ ಮತ್ತು ಅದರ ಪ್ರಕಾರಗಳನ್ನು ತಕ್ಷಣವೇ ದೃಢೀಕರಿಸಲಾಗುವುದಿಲ್ಲ ಎಂದು ಅವರು ಹೇಳಿದ್ದಾರೆ.

ಆದಾಗ್ಯೂ, ಲೂಟಿ ಮಾಡಿದ ಶಸ್ತ್ರಾಸ್ತ್ರಗಳಲ್ಲಿ AK-47 ಮತ್ತು INSAS ರೈಫಲ್‌ಗಳು ಸೇರಿವೆ ಎಂದು ಅನಧಿಕೃತ ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಹಲವು ಕುಟುಂಬಗಳ ಹೆಣ್ಮಕ್ಕಳ ಮರ್ಯಾದೆ ಕಳೆದ ಪುಣ್ಯಾತ್ಮ ಡಿಕೆಶಿ; ಪ್ರಜ್ವಲ್​​ ಕೇಸ್​ ಹಿಂದಿದ್ದವರಿಂದ ಮಾಜಿ ಸಿಎಂ ಸ್ಟಿಂಗ್​​ ಆಪರೇಷನ್: HDK ಹೊಸ ಬಾಂಬ್

Jantar Mantar ಬಳಿ ಭಾರೀ ಹೈಡ್ರಾಮಾ: ಬ್ಯಾರಿಕೇಡ್ ದಾಟಿದ CJP ನಾಯಕರು ಪೊಲೀಸ್ ವಶಕ್ಕೆ; ಪ್ರತಿರೋಧ ನಿಷೇಧ ಸಾಧ್ಯವಿಲ್ಲ-ಕೇಂದ್ರದ ವಿರುದ್ಧ ದೀಪ್ಕೆ ಆಕ್ರೋಶ

Batman masks, offline maps: ನಟಿ ರಿಚಾ ಚಡ್ಡಾ ಐಡಿಯಾ ಫಾಲೋ ಮಾಡ್ತಿರುವ ಯುವಕರು; Facial recognition camera ಫುಲ್ ಕನ್‌ಫ್ಯೂಸ್, ದೆಹಲಿ ಪೊಲೀಸರು ತಬ್ಬಿಬ್ಬು..!

ಪಂಜಾಬ್: ಫೇಸ್‌ಬುಕ್ ಲೈವ್‌ನಲ್ಲಿರುವಾಗಲೇ ಮಾದಕವಸ್ತು ವಿರೋಧಿ ಹೋರಾಟಗಾರ ಪರ್ವಿಂದರ್ ಸಿಂಗ್ ಜೋತಾ ಗುಂಡೇಟಿಗೆ ಬಲಿ!

‘ಪ್ರತಿಭಟನೆ ನಮ್ಮ ಹಕ್ಕು, ಬಂಧನಗಳಿಂದ ಹೋರಾಟ ಹತ್ತಿಕ್ಕಲು ಸಾಧ್ಯವಿಲ್ಲ’: ದೇಶಾದ್ಯಂತ ಚಳವಳಿ ವಿಸ್ತರಿಸಲು Cockroach Janta Party ಪಣ (INTERVIEW)