ಮಾಜಿ ಕ್ರಿಕೆಟಿಗ ಸಲೀಲ್ ಅಂಕೋಲಾ ತಾಯಿ 
ದೇಶ

ಕತ್ತು ಸೀಳಿದ ಸ್ಥಿತಿಯಲ್ಲಿ ಮಾಜಿ ಕ್ರಿಕೆಟಿಗನ ತಾಯಿ ಶವ ಪತ್ತೆ?

ಸಲೀಲ್ ಅಂಕೊಲಾ ಅವರ ತಾಯಿ ಮಾಲಾ ಅಶೋಕ್ ಅಂಕೋಲಾ ಅವರ ಶವ ಮಹಾರಾಷ್ಟ್ರದ ಪುಣೆಯ ಪ್ರಭಾತ್ ರಸ್ತೆಯಲ್ಲಿರುವ ಡೆಕ್ಕನ್ ಜಿಮ್ಖಾನಾ ಪ್ರದೇಶದಲ್ಲಿರುವ ಅಪಾರ್ಟ್‌ಮೆಂಟ್‌ನಲ್ಲಿ ಪತ್ತೆಯಾಗಿದೆ.

ಪುಣೆ: ಮಾಜಿ ಕ್ರಿಕೆಟಿಗ ಸಲೀಲ್ ಅಂಕೊಲಾ ತಾಯಿಯ ಮೃತದೇಹ ಕತ್ತು ಸೀಳಿದ ಸ್ಥಿತಿಯಲ್ಲಿ ಪುಣೆಯ ಅಪಾರ್ಟ್‌ಮೆಂಟ್‌ನಲ್ಲಿ ಶುಕ್ರವಾರ ಪತ್ತೆಯಾಗಿದೆ.

ಸಲೀಲ್ ಅಂಕೊಲಾ ಅವರ ತಾಯಿ ಮಾಲಾ ಅಶೋಕ್ ಅಂಕೋಲಾ ಅವರ ಶವ ಮಹಾರಾಷ್ಟ್ರದ ಪುಣೆಯ ಪ್ರಭಾತ್ ರಸ್ತೆಯಲ್ಲಿರುವ ಡೆಕ್ಕನ್ ಜಿಮ್ಖಾನಾ ಪ್ರದೇಶದಲ್ಲಿರುವ ಅಪಾರ್ಟ್‌ಮೆಂಟ್‌ನಲ್ಲಿ ಪತ್ತೆಯಾಗಿದೆ. ಮನೆಗೆಲಸಕ್ಕೆ ಬಂದವರು ಬಾಗಿಲು ತೆರೆದಾಗ ಪ್ರಕರಣ ಬೆಳಕಿಗೆ ಬಂದಿದೆ.

ತಕ್ಷಣ ಅವರು ಮಾಲಾ ಅವರ ಸಂಬಂಧಿಕರಿಗೆ ಮಾಹಿತಿ ಮುಟ್ಟಿಸಿದ್ದಾರೆ. ಪುಣೆ ನಗರದ ಡೆಕ್ಕನ್ ಪ್ರದೇಶದ ಪ್ರಮುಖ ಸ್ಥಳವಾದ ರೇಗೆ ಪಥ್, ಲೇನ್ ಸಂಖ್ಯೆ 14, ಪ್ರಭಾತ್ ರಸ್ತೆಯಲ್ಲಿರುವ ವಸತಿ ಕಟ್ಟಡವಾದ ಆದಿಯ ಮೊದಲ ಮಹಡಿಯಲ್ಲಿ ಮಾಲಾ ತಂಗಿದ್ದರು ಎನ್ನಲಾಗಿದೆ.

ಪೊಲೀಸ್ ಮೂಲಗಳ ಪ್ರಕಾರ ಅಪಾರ್ಟ್‌ಮೆಂಟ್ ಕೊಲೆಯಾದ ಮಾಲಾ ಅಶೋಕ್ ಅಂಕೋಲಾ ಅವರ ಮಗಳ ಹೆಸರಿನಲ್ಲಿ ನೋಂದಾಯಿಸಲ್ಪಟ್ಟಿದೆ. ಆಕೆ ಕೂಡ ಅಪಾರ್ಟ್‌ಮೆಂಟ್‌ನ ಸಮೀಪದಲ್ಲೇ ಇದ್ದು, ಆಗಾಗ ಮನೆಗೆ ಬಂದು ಹೋಗುತ್ತಿದ್ದರು. ಬೆಳಗ್ಗೆ 11 ಗಂಟೆ ಸುಮಾರಿಗೆ ಮನೆಯ ಸಹಾಯಕಿ ಬಂದು ಬಾಗಿಲು ಬಡಿದಿದ್ದಾರೆ. ಆಗ ಮಾಲಾ ಮನೆಯ ಬಾಗಿಲು ತೆರೆಯಲಿಲ್ಲ. ಮಾಲಾ ಅವರು ಮನೆಯ ಒಳಗೆ ಪ್ರತಿಕ್ರಿಯಿಸದಿರುವುದರಿಂದ ಮನೆಯ ಕೆಲಸದಾಕೆ ಸಮೀಪದಲ್ಲೇ ವಾಸವಿರುವ ಆಕೆಯ ಮಗಳನ್ನು ಸಂಪರ್ಕಿಸಿದ್ದಾರೆ. ಸ್ಥಳದಲ್ಲಿದ್ದ ಭದ್ರತಾ ಸಿಬ್ಬಂದಿ ಮಾಲಾ ಅವರ ಮಗಳು ಮನೆಯ ಕೀಲಿಯೊಂದಿಗೆ ಒಬ್ಬ ವ್ಯಕ್ತಿಯನ್ನು ಕಳುಹಿಸಿದರು ಎಂದು ಹೇಳಿದರು.

ಆ ವ್ಯಕ್ತಿ ಬಂದು ಬಾಗಿಲು ತೆರೆದಾಗ ಮನೆಯ ಕೆಲಸದಾಕೆಯು ಭದ್ರತಾ ಸಿಬ್ಬಂದಿಯೊಂದಿಗೆ ಒಳಗೆ ಹೋದಾಗ ಮಾಲಾ ತನ್ನ ಹಾಸಿಗೆಯ ಮೇಲೆ ಗಾಯಗೊಂಡ ಸ್ಥಿತಿಯಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿರುವುದನ್ನು ಕಂಡು ಗಾಬರಿಗೊಂಡಿದ್ದಾರೆ. ಮಾಲಾ ಅವರ ಕತ್ತಿನ ಮೇಲೆ ಗಾಯಗಳಾಗಿತ್ತು ಎಂದು ಭದ್ರತಾ ಸಿಬ್ಬಂದಿ ತಿಳಿಸಿದ್ದಾರೆ. ಕುಟುಂಬಸ್ಥರು ಆಕೆಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದರಾದರೂ ಯಾವುದೇ ಪ್ರಯೋಜನವಾಗಿಲ್ಲ, ಅವರು ಮೃತಪಟ್ಟಿದ್ದಾಳೆ ಎಂದು ತಿಳಿದು ಬಂದಿದೆ. ಮಾಹಿತಿ ಪಡೆದ ಡೆಕ್ಕನ್ ಪೊಲೀಸರು ಸ್ಥಳಕ್ಕೆ ಆಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮಾನಸಿಕ ಸಮಸ್ಯೆಯಿಂದ ಬಳಲುತ್ತಿದ್ದ ಮಾಲಾ

ಇನ್ನು ಮಾಲಾ ಅವರು ಮಾನಸಿಕ ಸಮಸ್ಯೆಯಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದೆ. ಕುತ್ತಿಗೆಗೆ ತಾವೇ ಚುಚ್ಚಿಕೊಂಡಿರುವ ಸಾಧ್ಯತೆ ಇದ್ದು, ತನಿಖೆ ಪ್ರಗತಿಯಲ್ಲಿದೆ. ಎಲ್ಲಾ ಆಯಾಮಗಳಿಂದಲೂ ಪ್ರಕರಣದ ತನಿಖೆ ನಡಸಲಾಗುವುದು’ ಎಂದು ಡಿಸಿಪಿ ಸಂದೀಪ್ ಸಿಂಗ್ ಗಿಲ್ ಹೇಳಿದ್ದಾರೆ.

ಕತ್ತು ಕೊಯ್ದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಪ್ರಾಥಮಿಕ ಹಂತದ ಶಂಕೆ ವ್ಯಕ್ತವಾಗಿದ್ದು, ಇದು ಆತ್ಮಹತ್ಯೆಯೇ ಅಥವಾ ಕೊಲೆಯೇ ಎಂಬುದು ಇನ್ನೂ ಕೂಡ ತಿಳಿದು ಬಂದಿಲ್ಲ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಕೊಲೆಯೇ ಆತ್ಮಹತ್ಯೆಯೇ ಎಂಬುದನ್ನು ತಿಳಿಯಲು ವಿವಿಧ ಕೋನಗಳಲ್ಲಿ ತನಿಖೆ ನಡೆಸಲಾಗುತ್ತಿದೆ ಎಂದು ಮತ್ತೋರ್ವ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮಧ್ಯಮ ವೇಗಿಯಾಗಿದ್ದ ಸಲೀಲ್ ಅಂಕೋಲಾ ಅವರು 1989ರಿಂದ 1997ರವರೆಗೆ 20 ಅಂತಾರಾಷ್ಟ್ರೀಯ ಏಕದಿನ ಪಂದ್ಯಗಳನ್ನು ಆಡಿದ್ದಾರೆ. ಕ್ರಿಕೆಟ್‌ನಿಂದ ವಿದಾಯ ಹೇಳಿದ ನಂತರ ಕೆಲ ಸಿನಿಮಾ ಹಾಗೂ ಟಿ.ವಿ. ಧಾರವಾಹಿಗಳಲ್ಲೂ ನಟಿಸಿದ್ದಾರೆ ಎನ್ನಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಉಪ ಚುನಾವಣೆ ಫಲಿತಾಂಶ| ಅಸ್ಸಾಂ, ಪ.ಬಂಗಾಳ, ತಮಿಳುನಾಡು, ಪುದುಚೇರಿಯ ಆರು ಕ್ಷೇತ್ರಗಳಲ್ಲಿ ಮತ ಎಣಿಕೆ ಪ್ರಗತಿಯಲ್ಲಿ

Sting operation ಮೂಲಕ ನಿಮ್ಮನ್ನು ಸಿಲುಕಿಸಲು ಯತ್ನಿಸಿರುವುದು ನಿಜವೇ ಆಗಿದ್ದರೆ ತನಿಖೆಗೆ ಆದೇಶಿಸಿ: ಸಿಎಂ ಡಿಕೆ.ಶಿವಕುಮಾರ್'ಗೆ HDK ಸವಾಲು

ಮತ ಕಳ್ಳತನದಿಂದಲೇ ಮೋದಿ ಪ್ರಧಾನಿಯಾಗಿದ್ದು, ಗೆಲ್ಲಲಾಗದ ರಾಜ್ಯಗಳಲ್ಲೂ BJP ಗೆಲುವು: ಅಭಿಜೀತ್ ದೀಪ್ಕೆ

ರಾಜ್ಯದ ಬಾಕಿ ಹಣದ ಬಗ್ಗೆ ನಿರ್ಮಲಾ ಸೀತಾರಾಮನ್ ಜೊತೆ ಚರ್ಚೆ: GST ಮಂಡಳಿ ಸಭೆ ಬಳಿಕ CM ಡಿಕೆ.ಶಿವಕುಮಾರ್ ಹರ್ಷ

ಉತ್ತರ ಭಾರತ ವ್ಯಕ್ತಿಯಿಂದ ಡಿಕೆಶಿ ಸಿಲುಕಿಸಲು ಯತ್ನ: ಸಚಿವ ಸತೀಶ್ ಜಾರಕಿಹೊಳಿ