ಸುಪ್ರೀಂ ಕೋರ್ಟ್ online desk
ದೇಶ

ಗುಜರಾತ್ ನಲ್ಲಿ ತೆರವು ಕಾರ್ಯಾಚರಣೆ: ಅಧಿಕಾರಿಗಳ ತಪ್ಪಿದ್ದಲ್ಲಿ ಕಟ್ಟಡಗಳ ಮರುಸ್ಥಾಪನೆಗೆ ಸೂಚಿಸುತ್ತೇವೆ- ಸುಪ್ರೀಂ ಕೋರ್ಟ್

ಸೆ.17 ರ ತನ್ನ ಆದೇಶದಲ್ಲಿ ಸುಪ್ರೀಂ ಕೋರ್ಟ್ ದೇಶಾದ್ಯಂತ, ಯಾವುದೇ ಆರೋಪಿಗೆ ಸಂಬಂಧಿಸಿದ ಕಟ್ಟಡಗಳನ್ನು ತನ್ನ ಅನುಮತಿ ಇಲ್ಲದೇ ತೆರವುಗೊಳಿಸಬಾರದು ಎಂದು ಹೇಳಿತ್ತು.

ನವದೆಹಲಿ: ಅಪರಾಧ ಪ್ರಕರಣಗಳ ಆರೋಪಿಗಳಿಗೆ ಸಂಬಂಧಿಸಿದ ಆಸ್ತಿಗಳನ್ನು ತೆರವು ಮಾಡುವ ಕಾರ್ಯಾಚರಣೆ ವಿಷಯದಲ್ಲಿ ಸೆ.17 ರಂದು ಸುಪ್ರೀಂ ಕೋರ್ಟ್ ನೀಡಿದ ತೀರ್ಪನ್ನು ಗುಜರಾತ್ ಅಧಿಕಾರಿಗಳು ಉಲ್ಲಂಘಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಗುಜರಾತ್ ಅಧಿಕಾರಿಗಳ ವಿರುದ್ಧ ಸಲ್ಲಿಸಲಾಗಿದ್ದ ನ್ಯಾಯಾಂಗ ನಿಂದನೆ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಗುಜರಾತ್ ಅಧಿಕಾರಿಗಳು ನ್ಯಾಯಾಂಗದ ಆದೇಶಕ್ಕೆ ವಿರುದ್ಧವಾಗಿ ಕಾರ್ಯಾಚರಣೆ ನಡೆಸಿದ್ದಾರೆ ಎಂಬುದು ಸ್ಪಷ್ಟವಾದರೆ ತೆರವುಗೊಳಿಸಲಾದ ಕಟ್ಟಡಗಳನ್ನು ಮರುಸ್ಥಾಪಿಸಲು ಆದೇಶ ನೀಡಲಾಗುತ್ತದೆ ಎಂದು ನ್ಯಾ.ಬಿಆರ್ ಗವಾಯಿ ಅವರಿದ್ದ ಪೀಠ ಹೇಳಿದೆ.

ಸೆ.17 ರ ತನ್ನ ಆದೇಶದಲ್ಲಿ ಸುಪ್ರೀಂ ಕೋರ್ಟ್ ದೇಶಾದ್ಯಂತ, ಯಾವುದೇ ಆರೋಪಿಗೆ ಸಂಬಂಧಿಸಿದ ಕಟ್ಟಡಗಳನ್ನು ತನ್ನ ಅನುಮತಿ ಇಲ್ಲದೇ ತೆರವುಗೊಳಿಸಬಾರದು ಎಂದು ಹೇಳಿತ್ತು.

ಸುಪ್ರೀಂ ಕೋರ್ಟ್‌ನ ಆದೇಶದ ಹೊರತಾಗಿಯೂ ಗುಜರಾತ್‌ನ ಅಧಿಕಾರಿಗಳು ಕಟ್ಟಡಗಳನ್ನು ನೆಲಸಮ ಮಾಡಿದ್ದಾರೆ ಎಂದು ಅರ್ಜಿದಾರರಾದ ಸುಮ್ಮಸ್ತ್ ಪಟ್ನಿ ಮುಸ್ಲಿಂ ಜಮಾತ್ ಪರ ವಾದ ಮಂಡಿಸಿದ ಹಿರಿಯ ವಕೀಲ ಸಂಜಯ್ ಹೆಗ್ಡೆ ವಾದಿಸಿದರು.

ಗುಜರಾತ್ ಅಧಿಕಾರಿಗಳ ಪರ ವಾದ ಮಂಡಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಈ ರಚನೆಗಳು ಸಮುದ್ರಕ್ಕೆ ತಾಗಿಕೊಂಡಿವೆ ಮತ್ತು ಸೋಮನಾಥ ದೇವಾಲಯದಿಂದ ಸುಮಾರು 340 ಮೀಟರ್ ದೂರದಲ್ಲಿವೆ ಎಂದು ಹೇಳಿದರು. "ಇದು ನ್ಯಾಯಾಲಯ ನೀಡಿರುವ ವಿನಾಯಿತಿಯ ವ್ಯಾಪ್ತಿಯೊಳಗೆ ಬರುತ್ತದೆ" ಎಂದು ಸಾಲಿಸಿಟರ್ ಜನರಲ್ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CEC ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹಿಸಿ CJP ಪ್ರತಿಭಟನೆ: ದೆಹಲಿಯಲ್ಲಿ ಬಂಧನ ಪ್ರಕ್ರಿಯೆ ಆರಂಭ, ತೀವ್ರ ಭದ್ರತೆ; Video

‘ಕಾನೂನು ಸುವ್ಯವಸ್ಥೆಗೆ ಗಂಭೀರ ಅಪಾಯವಿದೆ’: ಸಿಜೆಪಿ ಪ್ರತಿಭಟನೆಗೆ ಕೆಲವೇ ಗಂಟೆ ಮೊದಲು ರಾಜ್ಯಗಳಿಗೆ ಪತ್ರ ಬರೆದು MHA ಹೇಳಿದ್ದೇನು?

ಬಾಕಿ ಸಾಲ ವಸೂಲಿಗೆ 'ಗೃಹಲಕ್ಷ್ಮಿ' ಯೋಜನೆಯ ಹಣ ಕಡಿತಗೊಳಿಸದಂತೆ ಬ್ಯಾಂಕುಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಸರ್ಕಾರ!

ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ನಿರಾಳ; ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸುವ ನಿರ್ಧಾರ ರದ್ದು!

'ನ್ಯಾಯಾಂಗ ತನಿಖೆಗೆ ಒಪ್ಪಿಸಿ, ₹1 ಕೋಟಿ ಪರಿಹಾರ ನೀಡಿ': ಹನೂರು ಶೂಟೌಟ್ ಪ್ರಕರಣದ ಮಹಿಮಾ ದಾಸ್ ಸೇರಿ ಸಂತ್ರಸ್ತರ ಆಗ್ರಹ