ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಕಾಶ್ಮೀರ: ಎಲ್‌ಒಸಿ ಬಳಿ ನೆಲಬಾಂಬ್ ಸ್ಫೋಟ, ಇಬ್ಬರು ಸೇನಾ ಸಿಬ್ಬಂದಿಗೆ ಗಾಯ

ಉತ್ತರ ಕಾಶ್ಮೀರ ಜಿಲ್ಲೆಯ ಟ್ರೆಹ್ಗಾಮ್ ಪ್ರದೇಶದ ಎಲ್ಒಸಿ ಬಳಿಯ ಗೂಗಲ್ದಾರಾದಲ್ಲಿ ಇಂದು ಬೆಳಗ್ಗೆ ಗಸ್ತು ತಿರುಗುತ್ತಿದ್ದಾಗ ನೆಲಬಾಂಬ್ ಸ್ಫೋಟಗೊಂಡಿದೆ.

ಸಾಂದರ್ಭಿಕ ಚಿತ್ರ
Lingaraj Badiger
Updated On : 4 Oct 2024, 4:54 pm

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯ ಗಡಿ ನಿಯಂತ್ರಣ ರೇಖೆ(ಎಲ್‌ಒಸಿ) ಬಳಿ ಶುಕ್ರವಾರ ನೆಲಬಾಂಬ್ ಸ್ಫೋಟಗೊಂಡಿದ್ದು, ಘಟನೆಯಲ್ಲಿ ಇಬ್ಬರು ಸೇನಾ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

"ಉತ್ತರ ಕಾಶ್ಮೀರ ಜಿಲ್ಲೆಯ ಟ್ರೆಹ್ಗಾಮ್ ಪ್ರದೇಶದ ಎಲ್ಒಸಿ ಬಳಿಯ ಗೂಗಲ್ದಾರಾದಲ್ಲಿ ಇಂದು ಬೆಳಗ್ಗೆ ಗಸ್ತು ತಿರುಗುತ್ತಿದ್ದಾಗ ನೆಲಬಾಂಬ್ ಸ್ಫೋಟಗೊಂಡಿದ್ದು, ಇಬ್ಬರು ಸೇನಾ ಸಿಬ್ಬಂದಿ ಗಾಯಗೊಂಡಿದ್ದಾರೆ" ಎಂದು ಅಧಿಕಾರಿಗಳು ಹೇಳಿದ್ದಾರೆ.

ಗಾಯಗೊಂಡ ಇಬ್ಬರು ಸಿಬ್ಬಂದಿಯನ್ನು ಡ್ರಗ್ಮುಲ್ಲಾದಲ್ಲಿರುವ ಸೇನಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು ಅವರು ತಿಳಿಸಿದ್ದಾರೆ.

Advertisement

Advertisement

Also Read

ಜಮ್ಮು ಕಾಶ್ಮೀರದಲ್ಲಿ ಸರ್ಕಾರ ರಚನೆಗೆ ವೇದಿಕೆ ಸಜ್ಜು: ಸಮಾನ ಮನಸ್ಕ ಪಕ್ಷಗಳೊಂದಿಗೆ ಮೈತ್ರಿಗೆ ಕಾಂಗ್ರೆಸ್ ಮುಕ್ತ!

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement