ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಮೀಸಲಾತಿ ಮೇಲಿನ ಶೇ.50 ರಷ್ಟು ಮಿತಿ ತೆಗೆದುಹಾಕಿ: ಕೇಂದ್ರಕ್ಕೆ ಶರದ್ ಪವಾರ್ ಆಗ್ರಹ

ಮೀಸಲಾತಿ ಆಂದೋಲನ ನಡೆಸುತ್ತಿರುವ ಮರಾಠರಿಗೆ ಮೀಸಲಾತಿ ನೀಡುವಾಗ, ಇತರ ಸಮುದಾಯಗಳ ಮೀಸಲಾತಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದರು.

ಶರದ್ ಪವಾರ್ — online desk
Lingaraj Badiger
Updated On : 4 Oct 2024, 3:11 pm

ಸಾಂಗ್ಲಿ: ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮೀಸಲಾತಿ ಮೇಲೆ ಈಗಿರುವ ಶೇ.50ರಷ್ಟು ಮಿತಿಯನ್ನು ತೆಗೆದುಹಾಕಬೇಕು ಮತ್ತು ಮೀಸಲಾತಿ ಹೆಚ್ಚಿಸಲು ಸಾಂವಿಧಾನಿಕ ತಿದ್ದುಪಡಿ ತರಬೇಕು ಎಂದು ಎನ್‌ಸಿಪಿ(ಎಸ್‌ಪಿ) ಅಧ್ಯಕ್ಷ ಶರದ್ ಪವಾರ್ ಅವರು ಶುಕ್ರವಾರ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಇಂದು ಸಾಂಗ್ಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪವಾರ್, ಮೀಸಲಾತಿ ಆಂದೋಲನ ನಡೆಸುತ್ತಿರುವ ಮರಾಠರಿಗೆ ಮೀಸಲಾತಿ ನೀಡುವಾಗ, ಇತರ ಸಮುದಾಯಗಳ ಮೀಸಲಾತಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದರು.

"ಪ್ರಸ್ತುತ, ಮೀಸಲಾತಿಯ ಮಿತಿ ಶೇಕಡಾ 50 ಇದೆ. ಆದರೆ ತಮಿಳುನಾಡು ಶೇಕಡಾ 78 ರಷ್ಟು ಮೀಸಲಾತಿ(ವಿವಿಧ ಸಮುದಾಯಗಳಿಗೆ ಕೋಟಾ) ಹೊಂದಬಹುದಾದರೆ, ಮಹಾರಾಷ್ಟ್ರದಲ್ಲಿ ಶೇಕಡಾ 75 ರಷ್ಟು ಮೀಸಲಾತಿ ಏಕೆ ಸಾಧ್ಯವಿಲ್ಲ" ಎಂದು ಶರದ್ ಪವಾರ್ ಪ್ರಶ್ನಿಸಿದರು.

Advertisement

Advertisement

Also Read

ಮಹಾರಾಷ್ಟ್ರದಲ್ಲಿ ತೀವ್ರಗೊಂಡ ಮರಾಠ ಮೀಸಲಾತಿ ಹೋರಾಟ: ಸರ್ಕಾರಿ ಬಸ್'ಗೆ ಬೆಂಕಿ, ನಿಷೇಧಾಜ್ಞೆ ಜಾರಿ

ಕೇಂದ್ರವೇ ಮುಂದಾಳತ್ವ ವಹಿಸಿ ಕೋಟಾ ಮಿತಿ ಹೆಚ್ಚಿಸಲು ಸಂವಿಧಾನ ತಿದ್ದುಪಡಿ ತರಬೇಕು. ನಾವು ಈ ತಿದ್ದುಪಡಿಗೆ ಬೆಂಬಲ ನೀಡುತ್ತೇವೆ ಎಂದರು.

ಇದೇ ವೇಳೆ ಮುಂಬರುವ ವಿಧಾನಸಭೆ ಚುನಾವಣೆಗೆ ವಿರೋಧ ಪಕ್ಷಗಳ ಮೈತ್ರಿಕೂಟ ಮಹಾ ವಿಕಾಸ್ ಅಘಾಡಿ(ಎಂವಿಎ) ನಾಯಕರ ನಡುವೆ ಸೀಟು ಹಂಚಿಕೆ ಮಾತುಕತೆ ಮುಂದಿನ ವಾರ ಮುಂದುವರಿಯಲಿದೆ ಎಂದು ಶರದ್ ಪವಾರ್ ತಿಳಿಸಿದ್ದಾರೆ.

"ಮಾತುಕತೆಗಳನ್ನು ಆದಷ್ಟು ಬೇಗ ಮುಗಿಸಲು ನಾನು ನಾಯಕರಿಗೆ ಸಲಹೆ ನೀಡುತ್ತೇನೆ, ಇದರಿಂದ ನಾವು ಬದಲಾವಣೆಯನ್ನು ಬಯಸುತ್ತಿರುವ ಜನರ ಬಳಿಗೆ ಹೋಗಬಹುದು" ಎಂದು ಎನ್‌ಸಿಪಿ(ಎಸ್‌ಪಿ) ಅಧ್ಯಕ್ಷರು ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments