ಸಂಗ್ರಹ ಚಿತ್ರ 
ದೇಶ

ಉತ್ತರ ಪ್ರದೇಶ: SC/ST ಕಾಯ್ದೆಯಡಿ FIR ದಾಖಲಿಸಿದ ಶಿಕ್ಷಕನ ಇಡೀ ಕುಟುಂಬವನ್ನು ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು!

ಸುನಿಲ್ ರಾಯ್ ಬರೇಲಿ ಮೂಲದವರಾಗಿದ್ದು, ಅಮೇಥಿಯ ಪನ್ಹೌನಾದ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದರು. ಆಗಸ್ಟ್ 18 ರಂದು ಪೂನಂ ಒಂದು ಕೇಸನ್ನು ದಾಖಲಿಸಿದ್ದರು. ಚಂದನ್ ವರ್ಮಾ ಎಂಬಾತನ ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ, 1989 ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.

ಅಮೇಥಿ: ಎಸ್‌ಸಿ/ಎಸ್‌ಟಿ ಕಾಯ್ದೆಯಡಿ ಎಫ್‌ಐಆರ್ ದಾಖಲಿಸಿದ ಶಿಕ್ಷಕರೊಬ್ಬರ ಇಡೀ ಕುಟುಂಬವನ್ನು ಗುಂಡಿಟ್ಟು ಹತ್ಯೆ ಮಾಡಿರುವ ಘಟನೆಯೊಂದು ಉತ್ತರಪ್ರದೇಶದ ಅಮೇಧಿ ಜಿಲ್ಲೆಯಲ್ಲಿ ಗುರುವಾರ ನಡೆದಿದೆ.

ಮೃತರನ್ನು ಸುನಿಲ್ ಕುಮಾರ್, ಅವರ ಪತ್ನಿ ಪೂನಂ ಮತ್ತು ಅವರ 5 ಮತ್ತು 2 ವರ್ಷದ ಇಬ್ಬರು ಹೆಣ್ಣುಮಕ್ಕಳು ಎಂದು ಗುರುತಿಸಲಾಗಿದ್ದು, ಕುಟುಂಬವು ಅಹೋರ್ವಾ ಭವಾನಿ ಕ್ರಾಸಿಂಗ್ ಬಳಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು. ಗುರುವಾರ ರಾತ್ರಿ ಕೆಲ ದುಷ್ಕರ್ಮಿಗಳು ಶಿಕ್ಷಕರ ಮನೆಗೆ ಏಕಾಏಕಿ ನುಗ್ಗಿದ್ದು, ಎಲ್ಲರ ಮೇಲೂ ಗುಂಡು ಹಾರಿಸಿ ಸ್ಥಳದಿಂದ ಪರಾರಿಯಾಗಿದ್ದಾರೆ.

ಸುನಿಲ್ ರಾಯ್ ಬರೇಲಿ ಮೂಲದವರಾಗಿದ್ದು, ಅಮೇಥಿಯ ಪನ್ಹೌನಾದ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದರು. ಆಗಸ್ಟ್ 18 ರಂದು ಪೂನಂ ಒಂದು ಕೇಸನ್ನು ದಾಖಲಿಸಿದ್ದರು. ಚಂದನ್ ವರ್ಮಾ ಎಂಬಾತನ ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ, 1989 ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಅಲ್ಲದೆ, ತನಗೆ ಹಾಗೂ ತನ್ನ ಕುಟುಂಬಕ್ಕೆ ಏನೇ ಆದರೂ ಅದಕ್ಕೆ ಚಂದನ್ ವರ್ಮಾ ಹೊಣೆ ಎಂದೂ ದೂರಿನಲ್ಲಿ ಉಲ್ಲೇಖಿಸಿದ್ದರು ಎಂದು ತಿಳಿದುಬಂದಿದೆ. ಇದೀಗ ಇಡೀ ಕುಟಂಬ ಗುಂಡೇಟಿನಿಂದ ಮೃತಪಟ್ಟಿರುವ ಹಿನ್ನೆಲೆಯಲ್ಲಿ ಚಂದನ್ ವರ್ಮಾಗಾಗಿ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ.

ಘಟನೆ ಬೆನ್ನಲ್ಲೇ ಜಿಲ್ಲಾಧಿಕಾರಿ ನಿಶಾ ಅನಂತ್‌, ಎಸ್‌ಪಿ ಅನೂಪ್‌ ಸಿಂಗ್‌ ಹಾಗೂ ಶಿಕ್ಷಣ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

ಗುಂಡೇಟಿನ ಶಬ್ಧ ಕೇಳಿ ಬಂದಿತ್ತು. ಸ್ಥಳಕ್ಕೆ ಬಂದು ನೋಡಿದಾಗ ಶಿಕ್ಷಕರ ಇಡೀ ಕುಟುಂಬ ಸತ್ತು ಬಿದ್ದಿತ್ತು ಎಂದು ಸ್ಥಳೀಯರು ಹೇಳಿದ್ದಾರೆ.

ಈ ನಡುವೆ ಪೊಲೀಸರು ಪ್ರಕರಣ ತನಿಖೆಗೆ ವಿಶೇಷ ತಂಡವನ್ನು ರಚಿಸಿದ್ದು, ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.

ದಾಳಿಕೋರರು ಮೃತರಿಗೆ ಪರಿಚಿತರಂತೆ ತೋರುತ್ತಿದೆ. ಪ್ರಾಥಮಿಕ ತನಿಖೆ ವೇಳೆ ಆರೋಪಿಗಳು ಬಲವಂತವಾಗಿ ಮನೆಗೆ ನುಗ್ಗಿದಂತಹ ಯಾವುದೇ ಬೆಳವಣಿಗೆಗಳು ಕಂಡು ಬಂದಿಲ್ಲ ಎಂದು ಪೊಲೀಸ್ ಮಹಾನಿರೀಕ್ಷಕ ಪ್ರವೀಣ್ ಕುಮಾರ್ ಅವರು ಹೇಳಿದ್ದಾರೆ.

ಈ ನಡುವೆಗೆ ಘಟನೆಗೆ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಸಂತಾಪ ಸೂಚಿಸಿದ್ದಾರೆ. ಅಮೇಥಿಯಲ್ಲಿ ನಡೆದಿರುವ ಘಟನೆ ಖಂಡನೀಯ ಹಾಗೂ ಕ್ಷಮಿಸಲಾಗದ್ದು. ಮೃತರ ಕುಟುಂಬಕ್ಕೆ ಸಂತಾಪ ಸೂಚಿಸುತ್ತೇನೆ. ಸಂತ್ರಸ್ತರ ಕುಟುಂಬದೊಂದಿಗೆ ಸರ್ಕಾರ ಇದೆ. ಅಪರಾಧಿಗಳನ್ನು ಯಾವುದೇ ಕಾರಣಕ್ಕು ಬಿಡುವುದಿಲ್ಲ. ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಎಲ್ಲವನ್ನೂ ತಡೆಯಲು ಸಾಧ್ಯವಿಲ್ಲ': CJP ದೆಹಲಿ ಪ್ರತಿಭಟನೆಗೆ ನಿರ್ಬಂಧ ಕುರಿತು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಚಾಟಿ

'ಮಕ್ಕಳನ್ನು ಪ್ರತಿಭಟನೆಗಳಿಂದ ದೂರವಿಡಿ': ದೆಹಲಿ ಪ್ರತಿಭಟನೆಗೆ ಸಿದ್ಧತೆ, ಮಸೀದಿ ಮೈಕ್‌ನಲ್ಲಿ ಪೊಲೀಸರ ಮನವಿ! Video

ಭಾರತೀಯ ಮೂಲದ ನ್ಯಾಯಶಾಸ್ತ್ರಜ್ಞೆಗೆ ಈ ಬಾರಿಯ ನೊಬೆಲ್ ಶಾಂತಿ ಪ್ರಶಸ್ತಿ; ನವನೇತಮ್ ನವಿ ಪಿಳ್ಳೈಗೆ ಒಲಿದ ನೊಬೆಲ್ ಶಾಂತಿ ಗರಿ

Ramayana: ಕೊನೆಗೂ 'ರಾಮಾಯಣ' ರಿಲೀಸ್ ಡೇಟ್ ಫಿಕ್ಸ್; ದೀಪಾವಳಿಗೂ ಮೊದಲೇ ಬಿಡುಗಡೆ

ಯಮನಿಗೇ ಚಳ್ಳೇಹಣ್ಣು: ಗುದ್ದಿದ ಲಾರಿಯನ್ನೇ ಹಿಡಿದು ಪ್ರಾಣ ಉಳಿಸಿಕೊಂಡ ಯುವತಿ!-ರೋಚಕ Video