ಸಾಂದರ್ಭಿಕ ಚಿತ್ರ 
ದೇಶ

ಉತ್ತರಾಖಂಡ್: ಮದುವೆ ದಿಬ್ಬಣದ ಬಸ್ 200 ಅಡಿ ಆಳದ ಕಂದಕಕ್ಕೆ ಬಿದ್ದು ಅಪಘಾತ; 30 ಮಂದಿ ದಾರುಣ ಸಾವು

ಅಪಘಾತ ನಡೆದ ಸ್ಥಳವು ವಧುವಿನ ಮನೆಯಿಂದ ಎರಡು ಕಿಲೋಮೀಟರ್​ ಹಿಂದೆ ಇತ್ತು ಎಂದು ತಿಳಿದುಬಂದಿದೆ.

ಉತ್ತರಾಖಂಡ್​: ಚಾಲಕನ ನಿಯಂತ್ರಣ ತಪ್ಪಿ ಮದುವೆ ದಿಬ್ಬಣದ ಬಸ್​ ಕಂದಕಕ್ಕೆ (Plunge) ಉರುಳಿ ಬಿದ್ದ ಪರಿಣಾಮ 30 ಮಂದಿ ಮೃತಪಟ್ಟಿರುವ ಘಟನೆ ಉತ್ತರಾಖಂಡದ ಪೌರಿ ಜಿಲ್ಲೆಯಲ್ಲಿ ನಡೆದಿದೆ.

200 ಅಡಿ ಆಳದ ಕಂದಕಕ್ಕೆ ಬಸ್​ ಉರುಳಿದ್ದು, ಘಟನೆ ನಡೆದಾಗ ಬಸ್ಸಿನಲ್ಲಿ 50-55 ಮಂದಿ ಪ್ರಯಾಣಿಸುತ್ತಿದ್ದರು ಎಂದು ವರದಿಯಾಗಿದೆ. ಶುಕ್ರವಾರ ರಾತ್ರಿ 8 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಹರಿದ್ವಾರ ಜಿಲ್ಲೆಯ ಲಾಲ್ಧಾಂಗ್‌ನಿಂದ ಪೌರಿಯ ಬಿರೋನ್‌ಖಾಲ್‌ಗೆ ಪ್ರಯಾಣಿಸುತ್ತಿದ್ದರು. ಅಪಘಾತ ನಡೆದ ಸ್ಥಳವು ವಧುವಿನ ಮನೆಯಿಂದ ಎರಡು ಕಿಲೋಮೀಟರ್​ ಹಿಂದೆ ಇತ್ತು ಎಂದು ತಿಳಿದುಬಂದಿದೆ.

ವಿಚಾರ ತಿಳಿದು ಸ್ಥಳಕ್ಕೆ ದೌಡಾಯಿಸಿರುವ ಸ್ಥಳೀಯ ಪೊಲೀಸರು ಹಾಗೂ ರಾಜ್ಯ ವಿಪತ್ತು ನಿರ್ವಹಣಾ ಪಡೆ ಸಿಬ್ಬಂದಿಗಳು ಗಾಯಾಳುಗಳನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮೃತದೇಹಗಳನ್ನು ಹೊರತೆಗೆಯುತ್ತಿರುವ ಅಧಿಕಾರಿಗಳು ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಂಭವವಿದೆ ಎಂದು ಹೇಳಿದ್ದಾರೆ. ಸ್ಥಳಕ್ಕಾಗಮಿಸಿದ ಸ್ಥಳೀಯ ಶಾಸಕಿ ರಿತು ಖಂಡೂರಿ, ಆಸ್ಪತ್ರೆಯಲ್ಲಿ ಗಾಯಗೊಂಡವರನ್ನು ಭೇಟಿ ಮಾಡಿದರು. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ. ಅಪಘಾತದ ಹಿನ್ನೆಲೆಯಲ್ಲಿ ಸ್ಥಳೀಯರು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

SCROLL FOR NEXT