ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿ ಭದ್ರತಾ ಪಡೆಗಳು ಒಳನುಸುಳುವಿಕೆ ಪ್ರಯತ್ನವನ್ನು ವಿಫಲಗೊಳಿಸಿದ್ದರಿಂದ ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ ಎಂದು ಭಾರತೀಯ ಸೇನೆ ಶನಿವಾರ ತಿಳಿಸಿದೆ.
ಈಗ ನಡೆಯುತ್ತಿರುವ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳು ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸಿದ್ದಾರೆ" ಎಂದು ಸೇನೆಯ ಶ್ರೀನಗರ ಮೂಲದ ಚಿನಾರ್ ಕಾರ್ಪ್ಸ್ ತಿಳಿಸಿದೆ.
ಕುಪ್ವಾರದ ಗುಗಲ್‌ಧಾರ್‌ನಲ್ಲಿ ಪಡೆಗಳು ಅನುಮಾನಾಸ್ಪದ ಚಟುವಟಿಕೆ ಕಂಡುಬಂದಾಗ ಗುಂಡಿನ ಕಾಳಗ ನಡೆಯಿತು ಎಂದು ಕಾರ್ಪ್ಸ್ ಈ ಹಿಂದೆ ಎಕ್ಸ್ ಪೋಸ್ಟ್ ನಲ್ಲಿ ತಿಳಿಸಿತ್ತು.