ಜಾನಿ ಮಾಸ್ಟರ್ 
ದೇಶ

ಲೈಂಗಿಕ ಕಿರುಕುಳ ಆರೋಪ: ಜಾನಿ ಮಾಸ್ಟರ್ ಗೆ ಘೋಷಣೆಯಾಗಿದ್ದ ರಾಷ್ಟ್ರೀಯ ಪ್ರಶಸ್ತಿ ಅಮಾನತು

ನೃತ್ಯ ಸಂಯೋಜಕ ಜಾನಿ ಮಾಸ್ಟರ್ ಅವರ ನಿಜವಾದ ಹೆಸರು ಶೇಕ್ ಜಾನಿ ಬಾಷಾ. ಜೊತೆಯಲ್ಲಿ ಕೆಲಸ ಮಾಡುತ್ತಿದ್ದ ಯುವತಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪದಡಿ ಪ್ರಕರಣದಡಿ ಅವರನ್ನು ಸೈಬರಾಬಾದ್ ಪೊಲೀಸರು ಸೆಪ್ಟೆಂಬರ್ 19 ರಂದು ಗೋವಾದಲ್ಲಿ ಬಂಧಿಸಿದ ನಂತರ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು.

ನವದೆಹಲಿ: ಅತ್ಯಾಚಾರ ಆರೋಪ ಎದುರಿಸುತ್ತಿರುವ ಹೆಸರಾಂತ ನೃತ್ಯ ಸಂಯೋಜಕ ಜಾನಿ ಮಾಸ್ಟರ್ ಅವರಿಗೆ ಘೋಷಿಸಲಾಗಿದ್ದ ರಾಷ್ಟ್ರೀಯ ಪ್ರಶಸ್ತಿಯನ್ನು ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಅಮಾನತು ಮಾಡಿದೆ ಎಂದು ವರದಿಯಾಗಿದೆ.

ನೃತ್ಯ ಸಂಯೋಜಕ ಜಾನಿ ಮಾಸ್ಟರ್ ಅವರ ನಿಜವಾದ ಹೆಸರು ಶೇಕ್ ಜಾನಿ ಬಾಷಾ. ಜೊತೆಯಲ್ಲಿ ಕೆಲಸ ಮಾಡುತ್ತಿದ್ದ ಯುವತಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪದಡಿ ಪ್ರಕರಣದಡಿ ಅವರನ್ನು ಸೈಬರಾಬಾದ್ ಪೊಲೀಸರು ಸೆಪ್ಟೆಂಬರ್ 19 ರಂದು ಗೋವಾದಲ್ಲಿ ಬಂಧಿಸಿದ ನಂತರ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು.

ಆದರೆ, ಅಕ್ಟೋಬರ್ 3 ರಂದು ರಾಷ್ಟ್ರೀಯ ಪ್ರಶಸ್ತಿ ಬಂದಿದ್ದರಿಂದ ಅದರ ಸ್ವೀಕಾರ ಸಮಾರಂಭಕ್ಕೆ ತೆರಳಲು ಇತ್ತೀಚಿಗೆ ಮಧ್ಯಂತರ ಜಾಮೀನು ಪಡೆದಿದ್ದರು.

'ತಿರುಚಿತ್ರಂಬಲಂ' ಚಿತ್ರದ ಮೇಘಮ್ ಕರುಕ್ಕಥಾ ಹಾಡಿಗೆ ಅತ್ಯುತ್ತಮ ನೃತ್ಯ ಸಂಯೋಜನೆಗಾಗಿ ಅವರು ರಾಷ್ಟ್ರೀಯ ಪ್ರಶಸ್ತಿ ಗೆದ್ದಿದ್ದರು. ಇದೀಗ ಕೇಂದ್ರದ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಇದೀಗ ಅವರ ರಾಷ್ಟ್ರೀಯ ಪ್ರಶಸ್ತಿಯನ್ನು ಅಮಾನತುಗೊಳಿಸಿದೆ.

ಅಕ್ಟೋಬರ್ 8 ರಂದು ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆಯಲಿರುವ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪಾಲ್ಗೊಳ್ಳಲು ಜಾನಿ ಮಾಸ್ಟರ್ ಅವರಿಗೆ ನೀಡಿದ್ದ ಆಹ್ವಾನವನ್ನೂ ಹಿಂತೆಗೆದುಕೊಳ್ಳಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಎಲ್ಲವನ್ನೂ ತಡೆಯಲು ಸಾಧ್ಯವಿಲ್ಲ': CJP ದೆಹಲಿ ಪ್ರತಿಭಟನೆಗೆ ನಿರ್ಬಂಧ ಕುರಿತು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಚಾಟಿ

ಭಾರತೀಯ ಮೂಲದ ನ್ಯಾಯಶಾಸ್ತ್ರಜ್ಞೆಗೆ ಈ ಬಾರಿಯ ನೊಬೆಲ್ ಶಾಂತಿ ಪ್ರಶಸ್ತಿ; ನವನೇತೆಮ್ ನವಿ ಪಿಳ್ಳೆಗೆ ಒಲಿದ ನೊಬೆಲ್ ಶಾಂತಿ ಗರಿ

Ramayana: ಕೊನೆಗೂ 'ರಾಮಾಯಣ' ರಿಲೀಸ್ ಡೇಟ್ ಫಿಕ್ಸ್; ದೀಪಾವಳಿಗೂ ಮೊದಲೇ ಬಿಡುಗಡೆ

ಯಮನಿಗೇ ಚಳ್ಳೇಹಣ್ಣು: ಗುದ್ದಿದ ಲಾರಿಯನ್ನೇ ಹಿಡಿದು ಪ್ರಾಣ ಉಳಿಸಿಕೊಂಡ ಯುವತಿ!-ರೋಚಕ Video

'ಪೋಷಕರು ನನ್ನ ಆ ಖಾಸಗಿ ವಿಡಿಯೋ ನೋಡಿದ್ದರು, ಏರ್‌ಪೋರ್ಟ್‌ನಲ್ಲೇ ಕುಳಿತು ಅತ್ತಿದ್ದೆ: ವೈರಲ್‌ ಪಾರ್ಟಿ ಬಗ್ಗೆ ಅಪೂರ್ವ ಮುಖಿಜಾ! Video