ಅರವಿಂದ ಕೇಜ್ರಿವಾಲ್  
ದೇಶ

ಮೋದಿ ಈ ಕೆಲಸ ಮಾಡಿದರೆ ಬಿಜೆಪಿ ಪರ ಪ್ರಚಾರ ಮಾಡಲು ಸಿದ್ಧ: AAP ನಾಯಕ ಕೇಜ್ರಿವಾಲ್

'ಜನತಾ ಕಿ ಅದಾಲತ್ ' ಸಾರ್ವಜನಿಕ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಕೇಜ್ರಿವಾಲ್, ಡಬಲ್ ಎಂಜಿನ್ ಸರ್ಕಾರ ಎಲ್ಲ ರಾಜ್ಯಗಳಲ್ಲಿಯೂ ವಿಫಲವಾಗಿದೆ. ಇತ್ತೀಚಿಗೆ ವಿಧಾನಸಭೆ ಚುನಾವಣೆ ನಡೆದ ಹರಿಯಾಣ, ಜಮ್ಮು-ಕಾಶ್ಮೀರದಿಂದಲೂ ಹೊರ ಬೀಳುವ ಸೂಚನೆ ಸಿಕ್ಕಿದೆ

ನವದೆಹಲಿ: ದೆಹಲಿ ವಿಧಾನಸಭೆ ಚುನಾವಣೆಗೂ ಮುನ್ನಾ ಪ್ರಧಾನಿ ನರೇಂದ್ರ ಮೋದಿ ಅವರು ಎನ್ ಡಿಎ ಮೈತ್ರಿಕೂಟ ಅಧಿಕಾರದಲ್ಲಿರುವ ರಾಜ್ಯಗಳಿಗೆ ಉಚಿತ ವಿದ್ಯುತ್ ಘೋಷಣೆ ಮಾಡಿದರೆ, ರಾಷ್ಟ್ರ ರಾಜಧಾನಿಯ ಚುನಾವಣೆ ವೇಳೆ ಬಿಜೆಪಿ ಪರ ಪ್ರಚಾರ ಮಾಡುವುದಾಗಿ ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ ಕೇಜ್ರಿವಾಲ್ ಭಾನುವಾರ ಸವಾಲು ಹಾಕಿದ್ದಾರೆ.

'ಜನತಾ ಕಿ ಅದಾಲತ್ ' ಸಾರ್ವಜನಿಕ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಕೇಜ್ರಿವಾಲ್, ಡಬಲ್ ಎಂಜಿನ್ ಸರ್ಕಾರ ಎಲ್ಲ ರಾಜ್ಯಗಳಲ್ಲಿಯೂ ವಿಫಲವಾಗಿದೆ. ಇತ್ತೀಚಿಗೆ ವಿಧಾನಸಭೆ ಚುನಾವಣೆ ನಡೆದ ಹರಿಯಾಣ, ಜಮ್ಮು-ಕಾಶ್ಮೀರದಿಂದಲೂ ಹೊರ ಬೀಳುವ ಸೂಚನೆ ಸಿಕ್ಕಿದೆ ಎಂದರು.

ಕೇಂದ್ರ ಹಾಗೂ ರಾಜ್ಯ ಎರಡೂ ಕಡೆ ಬಿಜೆಪಿ ಅಧಿಕಾರದಲ್ಲಿರುವ ಡಬಲ್ ಎಂಜಿನ್ ಮಾದರಿಯನ್ನು ಡಬಲ್ ಲೂಟಿ ಮತ್ತು ಡಬಲ್ ಭ್ರಷ್ಟಚಾರ ಮಾದರಿ ಎಂದು ಟೀಕಿಸಿದ ಕೇಜ್ರಿವಾಲ್, ಫೆಬ್ರವರಿಯಲ್ಲಿ ನಡೆಯಲಿರುವ ದೆಹಲಿ ವಿಧಾನಸಭೆ ಚುನಾವಣೆಗೂ ಮುನ್ನಾ ಬಿಜೆಪಿ ಆಡಳಿತ ಇರುವ 22 ರಾಜ್ಯಗಳಲ್ಲಿ ಉಚಿತ ವಿದ್ಯುತ್ ಘೋಷಿಸುವಂತೆ ಪ್ರಧಾನಿ ಮೋದಿಗೆ ಸವಾಲು ಹಾಕುತ್ತೇನೆ. ಅವರು ಅದನ್ನು ಮಾಡಿದರೆ ಬಿಜೆಪಿ ಪರ ಪ್ರಚಾರ ಮಾಡುತ್ತೇನೆ ಎಂದು ಪ್ರತಿಪಾದಿಸಿದರು.

ಬಿಜೆಪಿ ಬಡವರ ವಿರೋಧಿಯಾಗಿದೆ. ದೆಹಲಿಯಲ್ಲಿ ಪ್ರಜಾಪ್ರಭುತ್ವ ಅಸ್ತಿತ್ವದಲ್ಲಿಲ್ಲ ಅಲ್ಲಿರುವುದು ಲೆಫ್ಟಿನೆಂಟ್ ಗವರ್ನರ್ ಆಡಳಿತ ಎಂದು ಕಿಡಿಕಾರಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಎಲ್ಲವನ್ನೂ ತಡೆಯಲು ಸಾಧ್ಯವಿಲ್ಲ': CJP ದೆಹಲಿ ಪ್ರತಿಭಟನೆಗೆ ನಿರ್ಬಂಧ ಕುರಿತು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಚಾಟಿ

ಅ.10ರಂದು CJP ಪ್ರತಿಭಟನೆ ಹಿನ್ನೆಲೆ ದೆಹಲಿಗೆ ತೆರಳುವ ಹಲವು ರೈಲುಗಳು ರದ್ದು, ಪ್ರಯಾಣಿಕರಿಗೆ ಸಂಕಷ್ಟ!

ರಾಜಸ್ಥಾನದ ವಿಚಿತ್ರ ಪ್ರಕರಣ: ಮಕ್ಕಳ ಆರೈಕೆ, ಮನೆ ಸ್ವಚ್ಛತೆಗೆ ಕೈದಿಗಳ ಬಳಕೆ; ಕೊನೆಗೆ ಅದೇ ಜೈಲು ಸೇರಿದ ಅಜ್ಮೀರ್ ಮಹಿಳಾ ಜೈಲರ್‌!

'ಮಕ್ಕಳನ್ನು ಪ್ರತಿಭಟನೆಗಳಿಂದ ದೂರವಿಡಿ': ದೆಹಲಿ ಪ್ರತಿಭಟನೆಗೆ ಸಿದ್ಧತೆ, ಮಸೀದಿ ಮೈಕ್‌ನಲ್ಲಿ ಪೊಲೀಸರ ಮನವಿ! Video

'ಜೀವನ ನರಕ, ನನ್ನ ಪಾಲಿನ ದೆವ್ವ ಸತ್ತಿದೆ, ಸತ್ತ ಮಾತ್ರಕ್ಕೆ ಪಾಪ ಕಳೆಯಲ್ಲ': ನಾನಾ ಪಾಟೇಕರ್ ವಿರುದ್ಧ ನಟಿ ತನುಶ್ರೀ ದತ್ತಾ ಮತ್ತೆ ಕಿಡಿ-Video