ಕಿರಿಯ ವೈದ್ಯರ ಮುಷ್ಕರ 
ದೇಶ

ಪಶ್ಚಿಮ ಬಂಗಾಳ: ಕಿರಿಯ ವೈದ್ಯರೊಂದಿಗೆ ಒಗ್ಗಟ್ಟು ಪ್ರದರ್ಶನ; ಆರ್ ಜಿ ಕಾರ್ ಆಸ್ಪತ್ರೆಯ 50 ಹಿರಿಯ ವೈದ್ಯರು ರಾಜೀನಾಮೆ

ಇಂದು ಬೆಳಗ್ಗೆ ಆಸ್ಪತ್ರೆಯ ವಿವಿಧ ಇಲಾಖೆಗಳ ಮುಖ್ಯಸ್ಥರ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.

ಕೋಲ್ಕತಾ: ಮಹಿಳಾ ಡಾಕ್ಟರ್ ಸಾವಿಗೆ ನ್ಯಾಯ ಸಿಗಬೇಕು ಎಂದು ಒತ್ತಾಯಿಸಿ ಆಮರಣಾಂತ ಉಪವಾಸ ಕೈಗೊಂಡಿರುವ ಕಿರಿಯ ವೈದ್ಯರಿಗೆ ಬೆಂಬಲ ವ್ಯಕ್ತಪಡಿಸಿ ಆರ್ ಜಿ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಸುಮಾರು 50 ಹಿರಿಯ ವೈದ್ಯರು ರಾಜೀನಾಮೆ ನೀಡಿದ್ದಾರೆ.

ಇಂದು ಬೆಳಗ್ಗೆ ಆಸ್ಪತ್ರೆಯ ವಿವಿಧ ಇಲಾಖೆಗಳ ಮುಖ್ಯಸ್ಥರ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.

ಎಲ್ಲಾ 50 ಹಿರಿಯ ವೈದ್ಯರು ತಮ್ಮ ರಾಜೀನಾಮೆ ಪತ್ರಕ್ಕೆ ಸಹಿ ಹಾಕಿದ್ದಾರೆ. ಒಂದು ಕಾರಣಕ್ಕಾಗಿ ಹೋರಾಡುತ್ತಿರುವ ಯುವ ವೈದ್ಯರಿಗೆ ನಮ್ಮ ಒಗ್ಗಟ್ಟನ್ನು ವ್ಯಕ್ತಪಡಿಸಲು ರಾಜೀನಾಮೆ ನೀಡಲು ನಿರ್ಧರಿಸಿರುವುದಾಗಿ ಹಿರಿಯ ವೈದ್ಯರೊಬ್ಬರು ಪಿಟಿಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

NRS ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಹಿರಿಯ ವೈದ್ಯರು ಸಹ ಆರ್‌ಜಿ ಕಾರ್ ಆಸ್ಪತ್ರೆಯಲ್ಲಿನ ತಮ್ಮ ಸಹೋದ್ಯೋಗಿಗಳಂತೆ ಕ್ರಮ ಕೈಗೊಳ್ಳಲು ಯೋಚಿಸುತ್ತಿದ್ದಾರೆ ಎನ್ನಲಾಗಿದೆ.

ಆರ್ ಜಿ ಕಾರ್ ಆಸ್ಪತ್ರೆಯ ಮಹಿಳಾ ವೈದ್ಯೆಯ ಅತ್ಯಾಚಾರ ಮತ್ತು ಹತ್ಯೆಗೆ ನ್ಯಾಯ ಮತ್ತು ಭ್ರಷ್ಟಾಚಾರ ಪೀಡಿತ ಆರೋಗ್ಯ ವ್ಯವಸ್ಥೆಯನ್ನು ಕೊನೆಗೊಳಿಸಬೇಕೆಂದು ಒತ್ತಾಯಿಸುತ್ತಿರುವ ಕಿರಿಯ ವೈದ್ಯರೊಂದಿಗೆ ಪಶ್ಚಿಮ ಬಂಗಾಳದ ವೈದ್ಯರ ಜಂಟಿ ವೇದಿಕೆ ಒಗ್ಗಟ್ಟಿನ ಪ್ರತಿಜ್ಞೆ ಮಾಡಿದೆ. ಕಳೆದ ನಾಲ್ಕು ದಿನಗಳಿಂದ ಕಿರಿಯ ವೈದ್ಯರು ತಮ್ಮ ಬೇಡಿಕೆಗಳಿಗೆ ಧ್ವನಿಗೂಡಿಸಿ ಆಮರಣ ಉಪವಾಸ ನಡೆಸುತ್ತಿದ್ದರೂ, ಸಮಸ್ಯೆಗಳ ಪರಿಹಾರಕ್ಕೆ ಸೂಕ್ತ ಅಧಿಕಾರಿಗಳಿಂದ ಯಾವುದೇ ಸ್ಪಂದನೆ ದೊರೆತಿಲ್ಲ ಎಂದು ವೇದಿಕೆಯ ಪ್ರಕಟಣೆ ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Cockroach Janta Partyಗೆ ಬಿಗ್ ಶಾಕ್: ಜಂತರ್ ಮಂತರ್ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ದೆಹಲಿ ಪೊಲೀಸರು, 57 ಮೆಟ್ರೋ ನಿಲ್ದಾಣಗಳು ಬಂದ್..!

ಕೇಂದ್ರ ಸಚಿವ, ಬಿಜೆಪಿ ನಾಯಕನಿಂದ ಸ್ಟಿಂಗ್ ಆಪರೇಷನ್‌ಗೆ ಸಂಚು: Congress ಶಾಸಕ ಗಣಿಗ ರವಿ ಸ್ಫೋಟಕ ಆರೋಪ; Video

ಉಪ ಚುನಾವಣೆ ಫಲಿತಾಂಶ| ಅಸ್ಸಾಂ, ಪ.ಬಂಗಾಳ, ತಮಿಳುನಾಡು, ಪುದುಚೇರಿಯ ಆರು ಕ್ಷೇತ್ರಗಳಲ್ಲಿ ಮತ ಎಣಿಕೆ ಪ್ರಗತಿಯಲ್ಲಿ

ಯೋಗೀಶ್ ಗೌಡ ಕೊಲೆ ಪ್ರಕರಣ: ಕಾಂಗ್ರೆಸ್ ಶಾಸಕ ವಿನಯ್‌ ಕುಲಕರ್ಣಿಗೆ ತಾತ್ಕಾಲಿಕ ರಿಲೀಫ್‌; ಅ.27ಕ್ಕೆ ವಿಚಾರಣೆ ಮುಂದೂಡಿಕೆ

ಬಾಲಿವುಡ್ ನಟ ನಾನಾ ಪಾಟೇಕರ್ ನಿಧನಕ್ಕೆ ಬಿಗ್ ಟ್ವಿಸ್ಟ್: ಅಸಹಜ ಸಾವು ಕೇಸ್ ದಾಖಲಿಸಿದ ಗೋವಾ ಪೊಲೀಸರು!