ಅರವಿಂದ ಕೇಜ್ರಿವಾಲ್  
ದೇಶ

ಹರಿಯಾಣದ ಸೋಲು ಅತಿಯಾದ ಆತ್ಮವಿಶ್ವಾಸಕ್ಕೆ ದೊಡ್ಡ ಪಾಠ: ಕೇಜ್ರಿವಾಲ್

ಚುನಾವಣೆಯಲ್ಲಿ "ಅತಿಯಾದ ಆತ್ಮವಿಶ್ವಾಸ" ಇರಬಾರದು. ಚುನಾವಣೆಯಲ್ಲಿ ಯಾರೊಬ್ಬರೂ ಯಾವತ್ತೂ ಅತಿಯಾದ ಆತ್ಮವಿಶ್ವಾಸವನ್ನು ಹೊಂದಿರಬಾರದು ಎಂಬುದಕ್ಕೆ ಹರಿಯಾಣದ ಫಲಿತಾಂಶ ದೊಡ್ಡ ಪಾಠ".

ನವದೆಹಲಿ: ಹರಿಯಾಣದಲ್ಲಿ ಆಡಳಿತರೂಢ ಬಿಜೆಪಿ ಹ್ಯಾಟ್ರಿಕ್ ಗೆಲುವು ಸಾಧಿಸಿದ್ದು, ಎಎಪಿ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರು ಈ ಚುನಾವಣೆ ಫಲಿತಾಂಶ "ದೊಡ್ಡ ಪಾಠ" ಎಂದು ಮಂಗಳವಾರ ಹೇಳಿದ್ದಾರೆ.

ಚುನಾವಣೆಯಲ್ಲಿ "ಅತಿಯಾದ ಆತ್ಮವಿಶ್ವಾಸ" ಇರಬಾರದು. ಚುನಾವಣೆಯಲ್ಲಿ ಯಾರೊಬ್ಬರೂ ಯಾವತ್ತೂ ಅತಿಯಾದ ಆತ್ಮವಿಶ್ವಾಸವನ್ನು ಹೊಂದಿರಬಾರದು ಎಂಬುದಕ್ಕೆ ಹರಿಯಾಣದ ಫಲಿತಾಂಶ ದೊಡ್ಡ ಪಾಠ" ಎಂದು ದೆಹಲಿ ಮಾಜಿ ಸಿಎಂ ಕೇಜ್ರಿವಾಲ್ ಪರೋಕ್ಷವಾಗಿ ಕಾಂಗ್ರೆಸ್ ಗೆ ಟಾಂಗ್ ನೀಡಿದ್ದಾರೆ.

ಎಎಪಿ ಪುರಸಭೆ ಕೌನ್ಸಿಲರ್‌ಗಳ ಸಭೆಯನ್ನುದ್ದೇಶಿಸಿ ಮಾತನಾಡಿದ ಕೇಜ್ರಿವಾಲ್, "ಯಾವುದೇ ಚುನಾವಣೆಯನ್ನು ಲಘುವಾಗಿ ಪರಿಗಣಿಸಬಾರದು. ಪ್ರತಿ ಚುನಾವಣೆ ಮತ್ತು ಪ್ರತಿ ಸ್ಥಾನವು ಕಠಿಣವಾಗಿರುತ್ತದೆ" ಎಂದು ಹೇಳಿದರು.

ಮುಂದಿನ ವರ್ಷ ಫೆಬ್ರವರಿಯಲ್ಲಿ ನಡೆಯಲಿರುವ ದೆಹಲಿ ವಿಧಾನಸಭಾ ಚುನಾವಣೆಗೆ ಹೆಚ್ಚು ಶ್ರಮಿಸಬೇಕು ಎಂದು ಪಕ್ಷದ ಕೌನ್ಸಿಲರ್‌ಗಳು ಕರೆ ನೀಡಿದ ಕೇಜ್ರಿವಾಲ್ ಅವರು, ತಮ್ಮ ವಾರ್ಡ್‌ಗಳಿಂದ ಕಸವನ್ನು ಸರಿಯಾಗಿ ಸಂಗ್ರಹಿಸಿ ವಿಲೇವಾರಿ ಮಾಡಲಾಗಿದೆಯೆ ಎಂದು ಖಚಿತಪಡಿಸಿಕೊಳ್ಳುವಂತೆ ಸೂಚಿಸಿದರು.

ಎಎಪಿಯು ಸ್ಪರ್ಧಿಸಲಿರುವ ಸ್ಥಾನಗಳ ಸಂಖ್ಯೆಯ ಬಗ್ಗೆ ಭಿನ್ನಾಭಿಪ್ರಾಯದಿಂದಾಗಿ ಹರಿಯಾಣದಲ್ಲಿ ಕಾಂಗ್ರೆಸ್‌ನೊಂದಿಗೆ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಳ್ಳಲು ಸಾಧ್ಯವಾಗಲಿಲ್ಲ. 9 ಸ್ಥಾನಗಳನ್ನು ನೀಡಬೇಕೆಂಬ ಎಎಪಿ ಬೇಡಿಕೆಯನ್ನು ಕಾಂಗ್ರೆಸ್ ತಿರಸ್ಕರಿಸಿದ ನಂತರ ರಾಜ್ಯದ ಒಟ್ಟು 90 ಸ್ಥಾನಗಳಲ್ಲಿ 89 ರಲ್ಲಿ ಆಪ್ ಸ್ವತಂತ್ರವಾಗಿ ಸ್ಪರ್ಧಿಸಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CEC ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹಿಸಿ CJP ಪ್ರತಿಭಟನೆ: ದೆಹಲಿಯಲ್ಲಿ ಬಂಧನ ಪ್ರಕ್ರಿಯೆ ಆರಂಭ, ತೀವ್ರ ಭದ್ರತೆ; Video

‘ಕಾನೂನು ಸುವ್ಯವಸ್ಥೆಗೆ ಗಂಭೀರ ಅಪಾಯವಿದೆ’: ಸಿಜೆಪಿ ಪ್ರತಿಭಟನೆಗೆ ಕೆಲವೇ ಗಂಟೆ ಮೊದಲು ರಾಜ್ಯಗಳಿಗೆ ಪತ್ರ ಬರೆದು MHA ಹೇಳಿದ್ದೇನು?

ನವೆಂಬರ್‌ನಲ್ಲಿ ಕರ್ನಾಟಕ ಬಿಜೆಪಿಗೆ ಮೇಜರ್ ಸರ್ಜರಿ: ಬಿವೈ ವಿಜಯೇಂದ್ರ, ಆರ್ ಅಶೋಕಗೆ ಗೇಟ್ ಪಾಸ್?; ಹೊಸ ಮುಖಗಳಿಗೆ ಮಣೆ!

ಬಾಕಿ ಸಾಲ ವಸೂಲಿಗೆ 'ಗೃಹಲಕ್ಷ್ಮಿ' ಯೋಜನೆಯ ಹಣ ಕಡಿತಗೊಳಿಸದಂತೆ ಬ್ಯಾಂಕುಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಸರ್ಕಾರ!

ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ನಿರಾಳ; ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸುವ ನಿರ್ಧಾರ ರದ್ದು!