ಒಮರ್ ಅಬ್ದುಲ್ಲಾ (ಸಂಗ್ರಹ ಚಿತ್ರ) 
ದೇಶ

ಒಮರ್ ಅಬ್ದುಲ್ಲಾ ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ: ಫಾರೂಕ್ ಅಬ್ದುಲ್ಲಾ ಘೋಷಣೆ

ಮಿತ್ರಪಕ್ಷ ಕಾಂಗ್ರೆಸ್ ಜೊತೆಗೂಡಿ ಕೇಂದ್ರಾಡಳಿತ ಪ್ರದೇಶದಲ್ಲಿ ನ್ಯಾಷನಲ್ ಕಾನ್ಫರೆನ್ಸ್ ಸರ್ಕಾರ ರಚಿಸಲಿದೆ ಎಂದು ಫಾರೂಕ್ ಅಬ್ದುಲ್ಲಾ ಅವರು ತಿಳಿಸಿದ್ದಾರೆ.

ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆಯಲ್ಲಿ 18 ಸಾವಿರ ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿರುವ ಒಮರ್ ಅಬ್ದುಲ್ಲಾ ಅವರು ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಅವರ ತಂದೆ ಮತ್ತು ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಅವರು ಮಂಗಳವಾರ ಘೋಷಿಸಿದ್ದಾರೆ.

ಮಿತ್ರಪಕ್ಷ ಕಾಂಗ್ರೆಸ್ ಜೊತೆಗೂಡಿ ಕೇಂದ್ರಾಡಳಿತ ಪ್ರದೇಶದಲ್ಲಿ ಪಕ್ಷ ಸರ್ಕಾರ ರಚಿಸಲಿದೆ ಎಂದು ಫಾರೂಕ್ ಅಬ್ದುಲ್ಲಾ ಅವರು ತಿಳಿಸಿದ್ದಾರೆ.

ಮೈತ್ರಿಕೂಟದ ಮುಖ್ಯಮಂತ್ರಿ ಯಾರಾಗುತ್ತಾರೆ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ, "ಒಮರ್ ಅಬ್ದುಲ್ಲಾ ಮುಖ್ಯಮಂತ್ರಿಯಾಗುತ್ತಾರೆ" ಎಂದು ಹೇಳಿದರು.

ಆರ್ಟಿಕಲ್ 370 ರದ್ದತಿಯನ್ನು ಜಮ್ಮು ಮತ್ತು ಕಾಶ್ಮೀರ ಜನ ವಿರೋಧಿಸುತ್ತಿದ್ದಾರೆ ಎಂಬುದಕ್ಕೆ ಈ ತೀರ್ಪು ಸಾಕ್ಷಿಯಾಗಿದೆ ಎಂದು ಫಾರೂಕ್ ಅಬ್ದುಲ್ಲಾ ಅವರು ಹೇಳಿದರು.

2019ರ ಆಗಸ್ಟ್ 5ರಂದು ಕೈಗೊಂಡ ನಿರ್ಧಾರಗಳು ತಮಗೆ ಸ್ವೀಕಾರಾರ್ಹವಲ್ಲ ಎಂಬುದನ್ನು ಜನತೆ ತಮ್ಮ ತೀರ್ಪಿನ ಮೂಲಕ ಸಾಬೀತುಪಡಿಸಿದ್ದಾರೆ. ಜನ ಮತದಾನದಲ್ಲಿ ಭಾಗವಹಿಸಿ ಮುಕ್ತವಾಗಿ ಮತದಾನ ಮಾಡಿದ್ದಕ್ಕಾಗಿ ನಾನು ಎಲ್ಲರಿಗೂ ಕೃತಜ್ಞನಾಗಿದ್ದೇನೆ ಎಂದರು.

"ಚುನಾಯಿತ ಸರ್ಕಾರವು ಜನರ "ಸಂಕಷ್ಟಗಳನ್ನು" ಪರಿಹರಿಸಲು ಸಾಕಷ್ಟು ಕೆಲಸ ಮಾಡುತ್ತದೆ ಎಂದು ಮಾಜಿ ಕೇಂದ್ರ ಸಚಿವರು ಹೇಳಿದರು.

"ನಾವು ನಿರುದ್ಯೋಗವನ್ನು ಕೊನೆಗೊಳಿಸಬೇಕು ಮತ್ತು ಹಣದುಬ್ಬರ, ಡ್ರಗ್ಸ್ ಹಾವಳಿಯಂತಹ ಸಮಸ್ಯೆಗಳನ್ನು ಪರಿಹರಿಸಬೇಕಾಗಿದೆ. ಈಗ, ಲೆಫ್ಟಿನೆಂಟ್ ಗವರ್ನರ್ ಮತ್ತು ಅವರ ಸಲಹೆಗಾರರು ಇರುವುದಿಲ್ಲ. ಈಗ, ಜನರಿಗಾಗಿ ಕೆಲಸ ಮಾಡುವ 90 ಶಾಸಕರು ಇರುತ್ತಾರೆ" ಎಂದು ಅವರು ತಿಳಿಸಿದರು.

ಎನ್‌ಸಿ ಉಪಾಧ್ಯಕ್ಷ ಒಮರ್ ಅಬ್ದುಲ್ಲಾ ಅವರು ಬುದ್ಗಾಮ್ ಕ್ಷೇತ್ರದಲ್ಲಿ ಪಿಡಿಪಿಯ ಅಗಾ ಸೈಯದ್ ಮುಂತಜೀರ್ ಮೆಹದಿ ಅವರ ವಿರುದ್ಧ 18,000 ಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

SCROLL FOR NEXT