ಪ್ರಧಾನಿ ಮೋದಿ 
ದೇಶ

ಕಾಂಗ್ರೆಸ್ ಬೇಜವಾಬ್ದಾರಿ ಪಕ್ಷ, ದ್ವೇಷ ಹರಡುವ ಕಾರ್ಖಾನೆ: ಪ್ರಧಾನಿ ಮೋದಿ ಕಿಡಿ

ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಿದೆ ಮತ್ತು ಇದು ದೇಶದ ಮನಸ್ಥಿತಿಯನ್ನು ತೋರಿಸುತ್ತದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಮುಂಬೈ: ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ಹೀನಾಯ ಸೋಲು ಅನುಭವಿಸಿದ ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ಬೇಜವಾಬ್ದಾರಿ ಪಕ್ಷ ಮತ್ತು ಹಿಂದೂಗಳನ್ನು ವಿಭಜಿಸಲು, ಒಂದು ಸಮುದಾಯವನ್ನು ಮತ್ತೊಂದು ಸಮುದಾಯದ ವಿರುದ್ಧ ಎತ್ತಿಕಟ್ಟಲು "ದ್ವೇಷವನ್ನು ಹರಡುವ" ಕಾರ್ಖಾನೆಯಾಗಿದೆ ಎಂದು ಬುಧವಾರ ಟೀಕಿಸಿದ್ದಾರೆ.

ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಿದೆ ಮತ್ತು ಇದು ದೇಶದ ಮನಸ್ಥಿತಿಯನ್ನು ತೋರಿಸುತ್ತದೆ ಎಂದ ಮೋದಿ, "ಮಹಾರಾಷ್ಟ್ರದಲ್ಲಿ ನಾವು ದೊಡ್ಡ ಗೆಲುವು ಪಡೆಯಬೇಕು" ಎಂದು ಹೇಳಿದರು.

ಇಂದು ವರ್ಚುವಲ್ ಮೂಲಕ ಮಹಾರಾಷ್ಟ್ರದಲ್ಲಿ 7,600 ಕೋಟಿ ರೂ. ಹೆಚ್ಚು ಮೊತ್ತದ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದ ನಂತರ ಮಾತನಾಡಿದ ಮೋದಿ, ವಿರೋಧ ಪಕ್ಷವಾದ ಮಹಾ ವಿಕಾಸ್ ಅಘಾಡಿ(MVA) ಅಧಿಕಾರ ಪಡೆಯಲು ಮಹಾರಾಷ್ಟ್ರವನ್ನು ದುರ್ಬಲಗೊಳಿಸಲು ಬಯಸಿದೆ. ಆದರೆ ಆಡಳಿತಾರೂಢ ಮಹಾಯುತಿಯು ರಾಜ್ಯವನ್ನು ಬಲಪಡಿಸುತ್ತದೆ ಎಂದರು.

ಯೋಜನೆಗಳ ತ್ವರಿತ ಅಭಿವೃದ್ಧಿಯನ್ನು ಮಹಾರಾಷ್ಟ್ರ ಹಿಂದೆಂದೂ ಕಂಡಿರಲಿಲ್ಲ. ಹಿಂದೆ ಕಾಂಗ್ರೆಸ್ ಆಡಳಿತದಲ್ಲಿ, ಭ್ರಷ್ಟಾಚಾರದ ಅತಿ ವೇಗವಾಗಿತ್ತು ಎಂದು ಪ್ರಧಾನಿ ಮೋದಿ ಆರೋಪಿಸಿದರು.

"ಕಾಂಗ್ರೆಸ್ ಒಂದು ಬೇಜವಾಬ್ದಾರಿ ಪಕ್ಷ ಮತ್ತು ದ್ವೇಷವನ್ನು ಹರಡುವ ಕಾರ್ಖಾನೆಯಾಗಿದೆ. ಕಾಂಗ್ರೆಸ್ ಗೆ ಅಭಿವೃದ್ಧಿ ಮತ್ತು ಪರಂಪರೆಯ ಬಗ್ಗೆ ಕಾಳಜಿಯಿಲ್ಲ. ನಾವು ಎರಡರ ಬಗ್ಗೆಯೂ ಗಮನ ಹರಿಸಿದ್ದೇವೆ" ಎಂದು ಹೇಳಿದರು.

ಬಡವರು, ರೈತರು, ಯುವಕರು ಮತ್ತು ಮಹಿಳೆಯರ ಅಭಿವೃದ್ಧಿಯೊಂದಿಗೆ ವಿಕ್ಷಿತ್ ಭಾರತ್ ನಮ್ಮ ಗುರಿಯಾಗಿದೆ ಎಂದು ಪ್ರಧಾನಿ ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಗ್ನಿಜಂಟ್, ಇನ್ಫೋಸಿಸ್, ಟಿಸಿಎಸ್, ವಿಪ್ರೋ ಎಚ್‌ಸಿಎಲ್ ಗೆ ಅಮೆರಿಕ ಶಾಕ್: ಗ್ರೀನ್ ಕಾರ್ಡ್ ಕಾರ್ಯಕ್ರಮದಿಂದ ಅಮಾನತು!

ರಿಯಾದ್ ವಿಮಾನ ನಿಲ್ದಾಣದ ಮೇಲೆ ದಾಳಿ: ರಿಯಾದ್ ಗೆ ತೆರಳಬೇಕಿದ್ದ ಭಾರತೀಯ ವಿಮಾನಗಳು ರದ್ದು

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ಅಂಬಾನಿ ಭಾರತದ ನಿಜವಾದ ಬಾಸ್?: ಭಾರತದಲ್ಲಿ ಸ್ಟಾರ್ ಲಿಂಕ್ ಸೇವೆ ಆರಂಭ ವಿಳಂಬಕ್ಕೆ ಎಲಾನ್ ಮಸ್ಕ್ ಹತಾಶೆ!

SIR ಕಾನೂನುಬದ್ಧ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ CEC ಜ್ಞಾನೇಶ್ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು!