ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಹರ್ಯಾಣ: ಹಿಸ್ಸಾರ್ ಶಾಸಕಿ ಸಾವಿತ್ರಿ ಜಿಂದಾಲ್ ಬಿಜೆಪಿಗೆ ಬೆಂಬಲ ಘೋಷಣೆ

ಹಿಸ್ಸಾರ್‌ನ ಅಭಿವೃದ್ಧಿಗಾಗಿ ನಾನು ಬಿಜೆಪಿ ಸರ್ಕಾರವನ್ನು ಬೆಂಬಲಿಸಲು ನಿರ್ಧರಿಸಿದ್ದೇನೆ ಎಂದ ಸ್ವತಂತ್ರ್ಯ ಅಭ್ಯರ್ಥಿಯಾಗಿ ಕಣಕ್ಕಿಳಿದು ಗೆಲುವು ಸಾಧಿಸಿದರುವ ಶ್ರೀಮಂತ ಮಹಿಳೆ ಸಾವಿತ್ರಿ ಜಿಂದಾಲ್ ಹೇಳಿದ್ದಾರೆ.

ಸಾವಿತ್ರಿ ಜಿಂದಾಲ್
Shilpa D
Updated On : 9 Oct 2024, 5:25 pm

ನವದೆಹಲಿ: ಹರಿಯಾಣ ವಿಧಾನಸಭೆ ಚುನಾವಣೆ 2024ರ ಫಲಿತಾಂಶ ಪ್ರಕಟವಾಗಿದೆ. 90 ಸದಸ್ಯ ಬಲದ ವಿಧಾನಸಭೆಯಲ್ಲಿ ಸರ್ಕಾರ ರಚನೆ ಮಾಡಲು ಬೇಕಾದ ಮ್ಯಾಜಿಕ್ ನಂಬರ್ 46. ಚುನಾವಣೆಯಲ್ಲಿ ಬಿಜೆಪಿ 48 ಸ್ಥಾನಗಳಲ್ಲಿ ಜಯಗಳಿಸುವ ಮೂಲಕ ಮೂರನೇ ಬಾರಿಗೆ ಬಿಜೆಪಿ ಸರ್ಕಾರ ರಚಿಸಲಿದೆ.

ಹಿಸ್ಸಾರ್‌ನ ಅಭಿವೃದ್ಧಿಗಾಗಿ ನಾನು ಬಿಜೆಪಿ ಸರ್ಕಾರವನ್ನು ಬೆಂಬಲಿಸಲು ನಿರ್ಧರಿಸಿದ್ದೇನೆ ಎಂದ ಸ್ವತಂತ್ರ್ಯ ಅಭ್ಯರ್ಥಿಯಾಗಿ ಕಣಕ್ಕಿಳಿದು ಗೆಲುವು ಸಾಧಿಸಿದರುವ ಶ್ರೀಮಂತ ಮಹಿಳೆ ಸಾವಿತ್ರಿ ಜಿಂದಾಲ್ ಹೇಳಿದ್ದಾರೆ.

ಸಾವಿತ್ರಿ ಜಿಂದಾಲ್ ಅವರ ಜೊತೆಗೆ ಮತ್ತಿಬ್ಬರು ಸ್ವತಂತ್ರ್ಯ ಶಾಸಕರು ಕೂಡ ಬಿಜೆಪಿ ಸೇರಲು ಮುಂದಾಗಿದ್ದಾರೆ. ಹೀಗಾಗಿ ಬಿಜೆಪಿಗೆ ಪೂರ್ಣ ಬಹುಮತ ಸಿಕ್ಕಂತಾಗುತ್ತದೆ. ಸಾವಿತ್ರಿ ಜಿಂದಾಲ್, ದೇವೇಂದ್ರ ಖಾಡ್ಯಂ, ರಾಜೇಶ್‌ ಜೂನ್‌ ಬಿಜೆಪಿ ಹೈಕಮಾಂಡ್ ನಾಯಕರನ್ನು ಭೇಟಿಯಾಗಿ ಬಿಜೆಪಿಗೆ ಬೆಂಬಲ ನೀಡುವುದಾಗಿ ಹೇಳಿದ್ದಾರೆ. ಬಿಜೆಪಿಯ ಕುರುಕ್ಷೇತ್ರ ಸಂಸದ ನವೀನ್ ಜಿಂದಾಲ್ ಅವರ ತಾಯಿ ಜಿಂದಾಲ್ ಅವರು ತಮ್ಮ ಸಮೀಪದ ಪ್ರತಿಸ್ಪರ್ಧಿ ಮತ್ತು ಕಾಂಗ್ರೆಸ್ ಅಭ್ಯರ್ಥಿ ರಾಮ್ ನಿವಾಸ್ ರಾಣಾ ಅವರನ್ನು 18,941 ಮತಗಳ ಅಂತರದಿಂದ ಸೋಲಿಸಿದ್ದಾರೆ. ಜಿಂದಾಲ್ 49,231 ಮತಗಳನ್ನು ಪಡೆದರೆ, ಕಾಂಗ್ರೆಸ್ ಅಭ್ಯರ್ಥಿ 30,290 ಮತಗಳನ್ನು ಪಡೆದರು.

Advertisement

Advertisement

Also Read

ಹರಿಯಾಣ: ಪಕ್ಷೇತರ ಅಭ್ಯರ್ಥಿ, ಭಾರತದ ಶ್ರೀಮಂತ ಮಹಿಳೆ ಸಾವಿತ್ರಿ ಜಿಂದಾಲ್ ಗೆಲುವು

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments