ರತನ್ ಟಾಟಾ 
ದೇಶ

ಖ್ಯಾತ ಉದ್ಯಮಿ Ratan Tata ವಿಧಿವಶ!

ಅನಾರೋಗ್ಯ ಕಾರಣದಿಂದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಖ್ಯಾತ ಉದ್ಯಮಿ Ratan Tata ಇಂದು ವಿಧಿವಶರಾಗಿದ್ದಾರೆ ಎಂದು ತಿಳಿದುಬಂದಿದೆ.

ಮುಂಬೈ: ಅನಾರೋಗ್ಯ ಕಾರಣದಿಂದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಖ್ಯಾತ ಉದ್ಯಮಿ Ratan Tata ಇಂದು ವಿಧಿವಶರಾಗಿದ್ದಾರೆ ಎಂದು ತಿಳಿದುಬಂದಿದೆ.

ಭಾರತದ ಅತಿದೊಡ್ಡ ಕೈಗಾರಿಕಾ ಸಮೂಹ ಟಾಟಾ ಸನ್ಸ್‌ನ ಚೇರ್ಮನ್‌ ರತನ್‌ ಟಾಟಾ ವಿಧಿವಶರಾಗಿದ್ದು, ತೀವ್ರ ಅನಾರೋಗ್ಯಕ್ಕೀಡಾಗಿದ್ದ ಅವರನ್ನು ಎರಡು ದಿನಗಳ ಹಿಂದೆ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ಅವರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

86ರ ಹರೆಯದ ರತನ್‌ ಟಾಟಾ ಅವರು ವಯೋ ಸಹಜ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು. ಇಂದು ಸಂಜೆ ಅವರ ಆರೋಗ್ಯ ಗಂಭೀರವಾಗಿದ್ದು ಅವರನ್ನು ಐಸಿಯುನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿತ್ತು ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಇನ್ನು ರತನ್ ಟಾಟಾ ಅವರ ನಿಧನಕ್ಕೆ ದುಃಖ ವ್ಯಕ್ತಪಡಿಸಿರುವ ಆರ್‌ಪಿಜಿ ಎಂಟರ್‌ಪ್ರೈಸಸ್‌ನ ಅಧ್ಯಕ್ಷ ಹರ್ಷ್ ಗೋಯೆಂಕಾ ಅವರು ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ. 'ಗಡಿಯಾರ ತನ್ನ ನಿಲ್ಲಿಸಿದೆ. ಟೈಟನ್ ಇನ್ನಿಲ್ಲ. ರತನ್ ಟಾಟಾ ಅವರು ಸಮಗ್ರತೆ, ನೈತಿಕ ನಾಯಕತ್ವ ಮತ್ತು ಲೋಕೋಪಕಾರದ ದಾರಿದೀಪವಾಗಿದ್ದರು, ಅವರು ವ್ಯಾಪಾರ ಮತ್ತು ಅದರಾಚೆಗಿನ ಜಗತ್ತಿನಲ್ಲಿ ಅಳಿಸಲಾಗದ ಛಾಪು ಮೂಡಿಸಿದ್ದಾರೆ. ಅವರು ನಮ್ಮ ನೆನಪುಗಳಲ್ಲಿ ಶಾಶ್ವತವಾಗಿ ಇರಲಿದ್ದಾರೆ. RIP ಎಂದು ಟ್ವೀಟ್ ಮಾಡಿದ್ದಾರೆ.

1991ರಲ್ಲಿ ಟಾಟಾ ಸನ್ಸ್‌ನ ಚೇರ್ಮನ್‌ ಆಗಿದ್ದ ರತನ್‌ ಟಾಟಾ, 2012ರವರೆಗೂ ಈ ಹುದ್ದೆಯಲ್ಲಿದ್ದರು. ತಮ್ಮ ಮರಿ ಮುತ್ತಜ್ಜ ಸ್ಥಾಪನೆ ಮಾಡಿದ್ದ ಗ್ರೂಪ್‌ ಅನ್ನು ದೊಡ್ಡ ಮಟ್ಟದಲ್ಲಿ ಯಶಸ್ಸಿನ ಪಥದಲ್ಲಿ ಸಾಗಿಸಿದ್ದರು. 1996ರಲ್ಲಿ ಟಾಟಾ ಟೆಲಿಸರ್ವೀಸಸ್‌ ಕಂಪನಿ ಸ್ಥಾಪನೆ ಮಾಡಿದ್ದರೆ, 2004ರಲ್ಲಿ ಟಾಟಾ ಕನ್ಸಲ್ಟೆನ್ಸಿ ಸರ್ವೀಸ್‌ ಕಂಪನಿಯನ್ನು ಸಾರ್ವಜನಿಕ ಪಾಲುದಾರ ಕಂಪನಿಯನ್ನಾಗಿ ಮಾಡಿದ್ದರು. ಟಾಟಾ ಸನ್ಸ್‌ನಿಂದ ಕೆಳಗಿಳಿದ ಬಳಿಕ ಅವರನ್ನು ಟಾಟಾ ಸನ್ಸ್, ಟಾಟಾ ಇಂಡಸ್ಟ್ರೀಸ್, ಟಾಟಾ ಮೋಟಾರ್ಸ್, ಟಾಟಾ ಸ್ಟೀಲ್ ಮತ್ತು ಟಾಟಾ ಕೆಮಿಕಲ್ಸ್‌ನ ಅಧ್ಯಕ್ಷ ಗೌರವ ಪ್ರಶಸ್ತಿಯನ್ನು ನೀಡಲಾಯಿತು ಎಂದು ಕಂಪನಿಯ ವೆಬ್‌ಸೈಟ್ ಹೇಳುತ್ತದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT