ನವದೆಹಲಿ: ಲಂಡನ್‌ನಿಂದ ದೆಹಲಿಗೆ ಬರುತ್ತಿದ್ದ ವಿಸ್ತಾರಾ ವಿಮಾನಕ್ಕೆ ಬುಧವಾರ ಬಾಂಬ್ ಬೆದರಿಕೆ ಬಂದಿದ್ದು, ವಿಮಾನವು ರಾಷ್ಟ್ರ ರಾಜಧಾನಿಯ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಲ್ಯಾಂಡ್ ಆಗಿದೆ ಎಂದು ಮೂಲಗಳು ತಿಳಿಸಿವೆ.
ವಿಮಾನದಲ್ಲಿ ಬಾಂಬ್ ಇದೆ ಎಂಬ ಸಂದೇಶವಿರುವ ಕಾಗದದ ತುಂಡು ಶೌಚಾಲಯವೊಂದರಲ್ಲಿ ಪತ್ತೆಯಾಗಿದ್ದು, ಕೂಡಲೇ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ವಿಮಾನದಲ್ಲಿ ಸುಮಾರು 290 ಪ್ರಯಾಣಿಕರಿದ್ದರು ಎಂದು ಅವರು ಹೇಳಿದ್ದಾರೆ.
ಲಂಡನ್‌ನಿಂದ ರಾಷ್ಟ್ರ ರಾಜಧಾನಿಗೆ ಬರುತ್ತಿದ್ದ ಯುಕೆ 018 ವಿಮಾನಕ್ಕೆ ಬಾಂಬ್ ಬೆದರಿಕೆ ಬಂದಿದ್ದು, ಪ್ರೋಟೋಕಾಲ್‌ಗೆ ಅನುಗುಣವಾಗಿ, ಸಂಬಂಧಿತ ಅಧಿಕಾರಿಗಳಿಗೆ ತಕ್ಷಣ ಮಾಹಿತಿ ನೀಡಲಾಯಿತು ಮತ್ತು ದೆಹಲಿ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಲ್ಯಾಂಡ್ ಆದ ನಂತರ ಕಡ್ಡಾಯ ತಪಾಸಣೆಗಾಗಿ ವಿಮಾನವನ್ನು ಪ್ರತ್ಯೇಕ ಸ್ಥಳಕ್ಕೆ ಕೊಂಡೊಯ್ಯಲಾಯಿತು ಎಂದು ಏರ್‌ಲೈನ್ ವಕ್ತಾರರು ತಿಳಿಸಿದ್ದಾರೆ.
ಅಗತ್ಯ ಭದ್ರತಾ ತಪಾಸಣೆಗಳನ್ನು ಪೂರ್ಣಗೊಳಿಸಲು ನಾವು ಸಂಬಂಧಿತ ಅಧಿಕಾರಿಗಳೊಂದಿಗೆ ಸಂಪೂರ್ಣವಾಗಿ ಸಹಕರಿಸಿದ್ದೇವೆ ಎಂದು ವಕ್ತಾರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.