ಪುರುಷೋತ್ತಮ್ ಎಕ್ಸ್ ಪ್ರೆಸ್ 
ದೇಶ

ಬಾಂಬ್ ಭೀತಿ: ಮೂರು ಗಂಟೆಗೂ ಹೆಚ್ಚು ಕಾಲ ನಿಲ್ದಾಣದಲ್ಲಿಯೇ ನಿಂತ ಪುರಿ- ನವದೆಹಲಿ ಪುರುಷೋತ್ತಮ್ ಎಕ್ಸ್ ಪ್ರೆಸ್!

ಇಂದು ಮುಂಜಾನೆ ಸುಮಾರು 2-30 ರಿಂದ 6 ರವರೆಗೂ ರೈಲಿನಲ್ಲಿ ಶೋಧ ಕಾರ್ಯ ನಡೆಸಲಾಯಿತು.

ನವದೆಹಲಿ: ಕೆಲವು ಶಂಕಿತ ಉಗ್ರರು ಸ್ಫೋಟಕ ವಸ್ತುಗಳೊಂದಿಗೆ ಪ್ರಯಾಣಿಸುತ್ತಿದ್ದಾರೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ ಪುರಿ- ನವದೆಹಲಿ ಪುರುಷೋತ್ತಮ ಎಕ್ಸ್ ಪ್ರೆಸ್ ರೈಲನ್ನು ಉತ್ತರ ಪ್ರದೇಶದ ತುಂಡ್ಲಾ ರೈಲು ನಿಲ್ದಾಣದಲ್ಲಿ ಮೂರು ಗಂಟೆಗಳಿಗೂ ಹೆಚ್ಚು ಕಾಲ ತಾತ್ಕಾಲಿಕವಾಗಿ ನಿಲ್ಲಿಸಲಾಯಿತು ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.

ಇಂದು ಮುಂಜಾನೆ ಸುಮಾರು 2-30 ರಿಂದ 6 ರವರೆಗೂ ರೈಲಿನಲ್ಲಿ ಶೋಧ ಕಾರ್ಯ ನಡೆಸಲಾಯಿತು. ಆದರೆ ಅಂತಹ ಯಾವುದೇ ಅನುಮಾನಾಸ್ಪದ ವಸ್ತುಗಳು ಕಂಡುಬಂದಿಲ್ಲದ ಕಾರಣ ಸಾಮಾಜಿಕ ಜಾಲತಾಣ ಎಕ್ಸ್ ಬಳಕೆದಾರರಿಂದ ಪಡೆದ ಮಾಹಿತಿ ಹುಸಿಯಾಗಿತ್ತು ಎಂದು ಅವರು ಹೇಳಿದ್ದಾರೆ.

ಬೆಳಿಗ್ಗೆ 2.30 ರ ವೇಳೆಯಲ್ಲಿ ಎಲ್ಲಾ ಕೋಚ್‌ಗಳಲ್ಲಿನ ಪ್ರತಿಯೊಬ್ಬ ಪ್ರಯಾಣಿಕರನ್ನು ಎಚ್ಚರಗೊಳಿಸಲಾಯಿತು ಮತ್ತು ಅವರ ಲಗೇಜ್‌ಗಳನ್ನು ಮೆಟಲ್ ಡಿಟೆಕ್ಟರ್ ಮತ್ತು ಶ್ವಾನ ದಳಗಳೊಂದಿಗೆ ಸಂಪೂರ್ಣವಾಗಿ ಪರಿಶೀಲಿಸಲಾಯಿತು ಆದರೆ ಏನೂ ಕಂಡುಬಂದಿಲ್ಲ ಎಂದು ಪ್ರಯಾಗ್‌ರಾಜ್ ರೈಲು ವಿಭಾಗದ ರೈಲ್ವೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕೆಲವು ಶಂಕಿತ ಉಗ್ರರು ರೈಲಿನಲ್ಲಿ ಸ್ಫೋಟಕಗಳೊಂದಿಗೆ ಪ್ರಯಾಣಿಸುತ್ತಿದ್ದು, ಏರ್ ಇಂಡಿಯಾದ ದೆಹಲಿ- ಲೇಹ್ ವಿಮಾನದಲ್ಲಿ ಬಾಂಬ್ ಸ್ಫೋಟಿಸಲು ಸಂಚು ರೂಪಿಸಿದ್ದಾರೆ ಎಂದು ಸಾಮಾಜಿಕ ಜಾಲತಾಣ ಎಕ್ಸ್ ನಿಂದ ಮಾಹಿತಿ ಬಂದಿತ್ತು. ಆದರೆ, ಪರಿಶೀಲನೆ ನಡೆಸಿದಾಗ ಅದು ಹುಸಿಯಾಗಿತ್ತು ಎಂದು ಅವರು ಮಾಹಿತಿ ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Ayodhya: ರಾಮ ಮಂದಿರ ದೇಣಿಗೆ ಲೂಟಿ ಪ್ರಕರಣ: 8 ಆರೋಪಿಗಳ ವಿರುದ್ಧ FIR ದಾಖಲು!

Women T-20 World cup: ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 5 ವಿಕೆಟ್ ಗಳ ಭರ್ಜರಿ ಗೆಲುವು!

ಸೇಡಿಗಾಗಿ ಖಾಸಗಿ ಪೋಟೋ, ವಿಡಿಯೋ ವೈರಲ್, ಬೆದರಿಕೆ ಪ್ರಕರಣ: ಕಡ್ಡಾಯವಾಗಿ FIR ದಾಖಲಿಸಬೇಕು, ಪೊಲೀಸರಿಗೆ ಪ್ರಿಯಾಂಕ್ ಖರ್ಗೆ ಖಡಕ್ ಸೂಚನೆ!

Bidadi Township Project: ಸಿಎಂ ಡಿಕೆ ಶಿವಕುಮಾರ್‌ಗೆ 2ನೇ ಪತ್ರ ಬರೆದ ಕೇಂದ್ರ ಸಚಿವ ಎಚ್‌ ಡಿ ಕುಮಾರಸ್ವಾಮಿ!

ಗರಿಷ್ಠ ಅವಧಿ ಸಂಪೂರ್ಣ: KSCA ಕಾರ್ಯದರ್ಶಿ ಸಂತೋಷ್ ಮೆನನ್ ಅನರ್ಹ, BCCI ಒಂಬುಡ್ಸ್‌ಮನ್ ಆದೇಶ!