ಶ್ರೀನಗರ: ಕೇಂದ್ರಾಡಳಿತ ಪ್ರದೇಶ ಜಮ್ಮು-ಕಾಶ್ಮೀರದಲ್ಲಿ ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ NC-ಕಾಂಗ್ರೆಸ್ ಮೈತ್ರಿಕೂಟ ಜಯಗಳಿಸಿದ ನಂತರ ನ್ಯಾಷನಲ್ ಕಾನ್ಫರೆನ್ಸ್‌ಗೆ ಬೆಂಬಲ ನೀಡುವುದಾಗಿ ಆಮ್ ಆದ್ಮಿ ಪಕ್ಷ ಶುಕ್ರವಾರ ಹೇಳಿದೆ.
ಈ ಸಂಬಂಧ AAP ಪಕ್ಷದಿಂದ ಲೆಫ್ಟಿನೆಂಟ್ ಗವರ್ನರ್ ಅವರಿಗೆ ಬೆಂಬಲದ ಔಪಚಾರಿಕ ಪತ್ರವನ್ನು ಸಲ್ಲಿಸಲಾಗಿದೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ಎಎಪಿಯ ಒಬ್ಬ ಶಾಸಕರಿದ್ದಾರೆ. ದೋಡಾ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿ ಮೆಹರಾಜ್ ಮಲಿಕ್ ಬಿಜೆಪಿಯ ಗಜಯ್ ಸಿಂಗ್ ರಾಣಾ ವಿರುದ್ಧ 4, 538 ಮತಗಳಿಂದ ಗೆಲುವು ಸಾಧಿಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ನ್ಯಾಷನಲ್ ಕಾನ್ಫರೆನ್ಸ್-ಕಾಂಗ್ರೆಸ್ ಮೈತ್ರಿಕೂಟ 49 ಸ್ಥಾನಗಳನ್ನು ಗೆಲ್ಲುವ ಮೂಲಕ ಸಂಪೂರ್ಣ ಬಹುಮತವನ್ನು ಪಡೆದುಕೊಂಡಿದೆ. ಗುರುವಾರ ಜಮ್ಮ-ಕಾಶ್ಮೀರ ನ್ಯಾಷನಲ್ ಕಾನ್ಫರೆನ್ಸ್ ಶಾಸಕಾಂಗ ಪಕ್ಷದ ನಾಯಕನಾಗಿ
ಒಮರ್ ಅಬ್ದುಲ್ಲಾ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.