ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಒಮರ್ ಅಬ್ದುಲ್ಲಾ ನೇತೃತ್ವದ ನ್ಯಾಷನಲ್ ಕಾನ್ಫರೆನ್ಸ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಪಕ್ಷದ ಅಧ್ಯಕ್ಷ ಮತ್ತು ಮಾಜಿ ಮುಖ್ಯಮಂತ್ರಿ ಡಾ.ಫಾರೂಕ್ ಅಬ್ದುಲ್ಲಾ ಅವರನ್ನು ರಾಜ್ಯಸಭೆಗೆ ಕಳುಹಿಸಲಿದೆ ಎಂದು ಪಕ್ಷದ ಮೂಲಗಳು ಶುಕ್ರವಾರ ತಿಳಿಸಿವೆ.
ಡಾ. ಫಾರೂಕ್ ಅಬ್ದುಲ್ಲಾ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಲು ಪಕ್ಷ ಈಗಾಗಲೇ ನಿರ್ಧರಿಸಿದೆ ಎಂದು NC ಮೂಲಗಳು ತಿಳಿಸಿವೆ.
ಚುನಾಯಿತ ಅಸೆಂಬ್ಲಿ ಇಲ್ಲದೆ ಕಳೆದ ಮೂರೂವರೆ ವರ್ಷಗಳಲ್ಲಿ ರಾಜ್ಯಸಭೆಗೆ ಜಮ್ಮು-ಕಾಶ್ಮೀರದಿಂದ ಯಾವುದೇ ಸದಸ್ಯರು ಆಯ್ಕೆಯಾಗಿರಲಿಲ್ಲ. ಗುಜ್ಜರ್ ಸಮುದಾಯವನ್ನು ಪ್ರತಿನಿಧಿಸುವ ಗುಲಾಂ ಅಲಿ ಖತಾನಾ ಈ ಬಾರಿಯ ಏಕೈಕ ರಾಜ್ಯಸಭಾ ಸದಸ್ಯರಾಗಿದ್ದಾರೆ.
ಈ ಹಿಂದೆ 2015ರಲ್ಲಿ ಜಮ್ಮು-ಕಾಶ್ಮೀರದಲ್ಲಿ ರಾಜ್ಯಸಭಾ ಚುನಾವಣೆ ನಡೆದಿತ್ತು. ಮುಂಬರುವ ಚುನಾವಣೆ ವೇಳೆ ನಾಲ್ಕು ರಾಜ್ಯಸಭಾ ಸದಸ್ಯರನ್ನು ಜಮ್ಮು-ಕಾಶ್ಮೀರ ಅಸೆಂಬ್ಲಿ ಆಯ್ಕೆ ಮಾಡಬಹುದಾಗಿದೆ.
2019 ರ ಲೋಕಸಭಾ ಚುನಾವಣೆಯಲ್ಲಿ, ಡಾ ಅಬ್ದುಲ್ಲಾ ಶ್ರೀನಗರ ಲೋಕಸಭಾ ಕ್ಷೇತ್ರದಿಂದ, ನಿವೃತ್ತ ನ್ಯಾಯಮೂರ್ತಿ ಹಸ್ನೈನ್ ಮಸೂದಿ ಮತ್ತು ಮೊಹಮ್ಮದ್ ಅಕ್ಬರ್ ಲೋನ್ ಕ್ರಮವಾಗಿ ಅನಂತನಾಗ್ ಮತ್ತು ಬಾರಾಮುಲ್ಲಾ ಲೋಕಸಭಾ ಕ್ಷೇತ್ರಗಳಿಂದ ಗೆದಿದ್ದರು.